ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಶನಿವಾರ 237 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಕಂಡುಬಂದಿದ್ದರೆ 4 ಮಂದಿ ಬಲಿಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 237 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 3311ಕ್ಕೆ ಏರಿಕೆಯಾಗಿದೆ. ಶನಿವಾರ 109 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ, 1848 ಸಕ್ರಿಯ ಪ್ರಕರಣಗಳಿವೆ. ಇದೇ ವೇಳೆ ಶನಿವಾರದಂದು ಮತ್ತೆ ನಾಲ್ವರು ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ದ.ಕ. ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 75ಕ್ಕೆ ಏರಿಕೆಯಾಗಿದೆ.
ಉಡುಪಿ ಜಿಲ್ಲೆಯಲ್ಲಿ ಶನಿವಾರ 109 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2088ಕ್ಕೆ ಏರಿಕೆಯಾಗಿದೆ.ಪ್ರಸ್ತುತ 492 ಸಕ್ರಿಯ ಪ್ರಕರಣಗಳಿವೆ. ಇಂದು 43 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟು 1586 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಕಾಸರಗೋಡು ಜಿಲ್ಲೆಯಲ್ಲಿ ಶನಿವಾರ 29 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ.
ರಾಜ್ಯದಲ್ಲಿ ಶನಿವಾರ 4537 ಜನರಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 59632ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಒಂದೇ ದಿನ 2125 ಜನರಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದ್ದು ಆತಂಕದ ಸ್ಥಿತಿಗೆ ತಳ್ಳಿದೆ.ರಾಜ್ಯದಲ್ಲಿ ಒಂದೇ ದಿನ 93 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.