ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೋಂಕಿತರಲ್ಲಿ ಇಂದು 140 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 2,403 ಜನರು ಗುಣಮುಖರಾಗಿದ್ದು, ಈವರೆಗೂ ಒಟ್ಟು 33,750 ಜನರು ಚೇತರಿಸಿಕೊಂಡಿದ್ದಾರೆ.
ಈ ನಡುವೆ ದ ಕ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಸಂಖ್ಯೆ ಹೆಚ್ಚಾಗಿರುವುದು ಕಂಡುಬಂದಿದೆ. ದ ಕ ಜಿಲ್ಲೆಯಲ್ಲಿ ಶನಿವಾರ 218 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆಯು 4612 ಕ್ಕೆ ಏರಿಕೆಯಾಗಿದೆ. ಪ್ರಸ್ತುತ 2370 ಮಂದಿ ನಗರದ ಕೋವಿಡ್ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜ್ಯದಲ್ಲಿ ಶನಿವಾರ 5,072 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 90942ಕ್ಕೆ ಏರಿಕೆಯಾಗಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel