ಕೊರೋನಾ ಪರಿಸ್ಥಿತಿ ಎದುರಿಸಲು ತಾಲೂಕು ಆಡಳಿತ ಸಿದ್ಧವಾಗಿದೆ – ಅಂಗಾರ

July 10, 2020
10:27 PM

ಸುಳ್ಯ: ಕೊರೋನಾ ವೈರಸ್ ಪೀಡಿತರ ಸಂಖ್ಯೆಯು ರಾಜ್ಯದಲ್ಲಿ ಹಾಗೂ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಏರುತ್ತಿದ್ದು ಸುಳ್ಯ ತಾಲೂಕು ಆಡಳಿತವು ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧವಾಗಿದೆ ಎಂದು ಶಾಸಕ ಎಸ್.ಅಂಗಾರ ಹೇಳಿದ್ದಾರೆ.

Advertisement
Advertisement

ಸುಳ್ಯ ತಾಲೂಕಿನಲ್ಲಿ ಈವರೆಗೆ ಒಟ್ಟು 16  ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಸುಳ್ಯ ಸರಕಾರಿ ಆಸ್ಪತ್ರೆಯ ತುರ್ತು ನಿಗಾಘಟಕದಲ್ಲಿ ಕೆಲಸ ಮಾಡಿದ ವೈದ್ಯರಿಗೆ ಹಾಗೂ ಸಿಬ್ಬಂದಿಗಳಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಸ್ಯಾನಿಟೈಸೇಶನ್ಗಾಗಿ ಎರಡು ದಿನಗಳ ಕಾಲ ಸೇವೆ ಸ್ಥಗಿತಗೊಳಿಸಲಾಗಿದ್ದು ಶನಿವಾರದಿಂದ ಆಸ್ಪತ್ರೆಯ ಸೇವೆಯು ಪುನರಾರಂಭಗೊಳ್ಳಲಿದೆ. ರೋಗಲಕ್ಷಣಗಳಿಲ್ಲದೆ ಕೊರೋನ ವರದಿ ಪಾಸಿಟಿವ್ ಬಂದಿರುವ ವ್ಯಕ್ತಿಗಳಿಗೆ ನಿಯಮಗಳ ಪ್ರಕಾರ ಹೋಮ್ ಐಸೋಲೇಷನ್‌ಗೆ ಸೂಚಿಸುತ್ತಿದ್ದು ಮನೆಗಳಲ್ಲಿಯೇ ವಿಶ್ರಾಂತಿ ಹಾಗೂ ಚಿಕಿತ್ಸೆ ಪಡೆದುಕೊಳ್ಳುವಂತೆ ಸೂಚಿಸಲಾಗಿದೆ. ಮನೆಗಳಲ್ಲಿ ಪ್ರತ್ಯೇಕ ವ್ಯವಸ್ಥೆ ಇಲ್ಲದಿರುವ ಮತ್ತು ಜನನಿಬಿಡ ಕಾಲೊನಿಗಳಲ್ಲಿರುವ ರೋಗ ಲಕ್ಷಣವಿಲ್ಲದ ಪಾಸಿಟಿವ್ ಬಂದ ವ್ಯಕ್ತಿಗಳಿಗೆ, ಹಿಂದುಳಿದ ವರ್ಗಗಳ ಇಲಾಖೆಗೆ ಸಂಬಂಧಪಟ್ಟ ವಿದ್ಯಾರ್ಥಿನಿಲಯ, ಹಾಗೂ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ವ್ಯವಸ್ಥೆಯನ್ನು ಮಾಡಲಾಗಿದೆ. ಅಲ್ಲದೆ ಅಗತ್ಯಬಿದ್ದಲ್ಲಿ ತಾಲೂಕಿನ ಇತರೆ ಕಡೆಗಳಲ್ಲಿರುವ ಹಾಸ್ಟೆಲ್‌ಗಳಲ್ಲಿ ಕೂಡಾ ವ್ಯವಸ್ಥೆ ಸಿದ್ಧಗೊಳಿಸಲು ಸೂಚಿಸಲಾಗಿದೆ , ಜ್ವರ ಮತ್ತಿತರ ರೋಗಲಕ್ಷಣಗಳಿರುವ ವ್ಯಕ್ತಿಗಳ ಚಿಕಿತ್ಸೆಗಾಗಿ ಈಗಾಗಲೇ ಸುಳ್ಯದ ಕೆ.ವಿ.ಜಿ ಮೆಡಿಕಲ್ ಕಾಲೇಜು ಆಸ್ಪತ್ರೆ, ಕವಿ.ಜಿ ಆಯುರ್ವೇದ ಆಸ್ಪತ್ರೆ, ಜ್ಯೋತಿ ಆಸ್ಪತ್ರೆಯಲ್ಲಿ ಪ್ರತ್ಯೇಕ ಬೆಡ್‌ಗಳನ್ನು ಮೀಸಲಿರಿಸಲಾಗಿದೆ. ಅಲ್ಲದೆ ತೀವ್ರ ರೋಗಲಕ್ಷಣವಾದ ಉಸಿರಾಟದ ತೊಂದರೆಯಿರುವವರಿಗೆ ಆಕ್ಸಿಜನ್, ವೆಂಟಿಲೇಟರ್ ಸಹಿತ ವ್ಯವಸ್ಥೆಯನ್ನು ಕೆ.ವಿ.ಜಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮಾಡಲಾಗಿರುತ್ತದೆ. ಕೊರೋನಾ ಕುರಿತ ಜಾಗೃತಿಗಾಗಿ ಮತ್ತು ಅಗತ್ಯ ಸಂದರ್ಭಗಳಲ್ಲಿ ಆರೋಗ್ಯ ಇಲಾಖೆಗೆ ನೆರವಾಗಲು ಗ್ರಾಮ ಪಂಚಾಯತ್ ಮಟ್ಟಗಳಲ್ಲಿ ಸಮಿತಿಯನ್ನು ರಚಿಸಲಾಗಿದೆ . ಹಾಗೂ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ವಾರ್ಡ್ ಮಟ್ಟದಲ್ಲಿ ಸಮಿತಿಯನ್ನು ರಚಿಸಲು ಕ್ರಮ ಕೈಗೊಳ್ಳಲಾಗಿದೆ . ಸುಳ್ಯ ತಾಲೂಕಿನಲ್ಲಿ ಅತೀವ ಮಳೆಯಾಗುತ್ತಿದ್ದು , ಈ ಸಂದರ್ಭದಲ್ಲಿ ಕೊರೋನಾ ಮಾತ್ರವಲ್ಲದೆ ಇತರೆ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರು ಸ್ವಯಂನಿಯತ್ರಣ ಹೇರಿಕೊಂಡು ಸಾಮಾಜಿಕ ಅಂತರ ಕಾಪಾಡುವುದು, ಕಡ್ಡಾಯ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಸುವುದು ಹಾಗೂ ಅಗತ್ಯ ಕೆಲಸಗಳಿಗೆ ಮಾತ್ರ ನಗರ ಪ್ರದೇಶಗಳಿಗೆ ಬಂದು ಹೋಗುವಂತೆ ಹಾಗೂ ವರ್ತಕರು ಸ್ವ ಇಚ್ಛೆಯಿಂದ ಅಂಗಡಿ ಮುಂಗಟ್ಟುಗಳನ್ನು ನಿರ್ದಿಷ್ಟ ಸಮಯ ಮಾತ್ರ ತೆರೆದಿಟ್ಟು ಸಹಕರಿಸಬೇಕಾಗಿ ವಿನಂತಿಸಿಕೊಳ್ಳಲಾಗಿದೆ ಎಂದು ಅಂಗಾರ ತಿಳಿಸಿದ್ದಾರೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ದಿಶಾಂತ್‌ ಕೆ ಎಸ್
July 23, 2025
7:46 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಪ್ರಣಮ್ಯ ಡಿ
July 23, 2025
7:39 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಆಧಾರಿತ ಬೆಳೆ ವಿಮೆಗೆ ಸಮಸ್ಯೆ | ಮಳೆ ಮಾಪನ ಯಂತ್ರಗಳ ನಿರ್ವಹಣೆ ಅವ್ಯವಸ್ಥೆ ಸರಿಪಡಿಸಲು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ
July 23, 2025
7:21 AM
by: The Rural Mirror ಸುದ್ದಿಜಾಲ
ಅರಣ್ಯ ಪ್ರದೇಶದೊಳಗೆ ದನ-ಕರು, ಕುರಿ ಮೇಯಿಸುವುದಕ್ಕೆ ನಿಷೇಧ ಹೇರಿದ ಅರಣ್ಯ ಇಲಾಖೆ
July 23, 2025
7:09 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group