ಬೆಂಗಳೂರು: ಕೊರೋನಾ ಸೋಂಕು ಭೀತಿ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ 1ನೇ ತರಗತಿಯಿಂದ 9ನೇ ತರಗತಿವರೆಗಿನ ಎಲ್ಲಾ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಈ ಹಿಂದೆ 1ರಿಂದ ಆರನೇ ತರಗತಿಯ ಮಕ್ಕಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡಲು ಸೂಚಿಸಿದ್ದರು. ಇದೀಗ ಏಳು ಮತ್ತು ಎಂಟನೇ ತರಗತಿಗೆ ಕೂಡಾ ಪರೀಕ್ಷೆ ಇಲ್ಲದೇ ಪಾಸ್ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಇನ್ನು ಒಂಬತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಈಗಾಗಲೇ ರೂಪಣಾತ್ಮಕ ಹಾಗೂ ಸಂಕಲನಾತ್ಮಕ ಪರೀಕ್ಷೆಗಳು ನಡೆದಿದ್ದು ಇದರ ಆಧಾರದ ಮೇಲೆ 10ನೇ ತರಗತಿಗೆ ಪಾಸ್ ಮಾಡಲಾಗುವುದು. ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂಬಂಧ ಏ.14ರ ನಂತರ ಪರಿಸ್ಥಿತಿ ಅವಲೋಕಿಸಿ, ಮಕ್ಕಳಿಗೆ ಸಮಯಾವಕಾಶ ನೀಡಿ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel