ಕೊರೋನಾ: ಸಮನ್ವಯದಿಂದ ಕಾರ್ಯನಿರ್ವಹಿಸಲು ಜಿಲ್ಲಾಧಿಕಾರಿ ಸೂಚನೆ

March 10, 2020
9:02 AM

ಮಂಗಳೂರು:ಕೊರೋನಾ ರೋಗ ತಪಾಸಣೆ ಮತ್ತು ರೋಗಿಗಳ ನಿರ್ವಹಣೆ ಕುರಿತು ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಲು ಜಿಲ್ಲಾಧಿಕಾರಿ ಸಿಂಧೂಬಿ. ರೂಪೇಶ್ ಸೂಚಿಸಿದ್ದಾರೆ.

ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋರೋನಾ ರೋಗಸಂಬಂಧ ಆರೋಗ್ಯ ಇಲಾಖೆ ಅಧಿಕಾರಿಗಳು, ವೈದ್ಯಕೀಯ ಕಾಲೇಜುಗಳ, ವಿಮಾನ ನಿಲ್ದಾಣ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಅಂತಾರಾಷ್ಟ್ರೀಯ ಪ್ರಯಾಣಿಕರು ಆಗಮಿಸುವ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಆರೋಗ್ಯದ ಗೊಂದಲದ ಬಗ್ಗೆ ಪ್ರಸ್ತಾಪಿಸಿದ ಅವರು, ಜ್ವರಪೀಡಿತರು ಸಂಶಯಾಸ್ಪದವಾಗಿ ಕಂಡುಬಂದರೆ, ಅವರನ್ನು ವಿಮಾನ ನಿಲ್ದಾಣದಲ್ಲಿಯೇ ವೈದ್ಯರಿಂದ ಪರೀಕ್ಷೆ ನಡೆಸಿ , ಅಂಬ್ಯುಲೆನ್ಸ್ನಲ್ಲಿ ಕರೆದುಕೊಂಡು ಬರಬೇಕು. ಇಂತಹ ಸಂದರ್ಭದಲ್ಲಿ ಏರ್ಪೋರ್ಟ್ ಅಧಿಕಾರಿಗಳೇ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಂಶಯಾಸ್ಪದ ರೋಗಿಗಳು ಪತ್ತೆಯಾದರೆ, ಅವರಿಗೆ ಕೌನ್ಸಿಲಿಂಗ್ ಮಾಡಿ ಮಾಹಿತಿ ನೀಡಬೇಕು. ರೋಗಿ ಬಯಸಿದರೆ, ಐಸೋಲೇಶನ್ ವಾರ್ಡ್ ಇರುವ ಅವರ ಇಚ್ಛೆಯ ಆಸ್ಪತ್ರೆಗೆ ದಾಖಲಾಗಬಹುದು. ಆದರೆ, ರೋಗಿ ಆಸ್ಪತ್ರೆಗೆ ದಾಖಲಾಗಲು ನಿರಾಕರಿಸಿದರೆ, ಸಾರ್ವಜನಿಕ ಆರೋಗ್ಯ ಸಂರಕ್ಷಿಸಲು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಮಂಗಳೂರು ವಿಮಾನ ನಿಲ್ದಾಣಕ್ಕೆ ಜಿಲ್ಲಾಡಳಿತ ವತಿಯಿಂದ ಹೆಚ್ಚುವರಿಯಾಗಿ ವೈದ್ಯರನ್ನು ನಿಯೋಜಿಸಲಾಗುವುದು. ಜಿಲ್ಲೆಯಲ್ಲಿರುವ ಖಾಸಗೀ ವೈದ್ಯಕೀಯ ಕಾಲೇಜುಗಳ ವೈದ್ಯರನ್ನು ಪ್ರತೀದಿನ ಪಾಳಿಯಂತೆ ಮಾರ್ಚ್ 10ರಿಂದಲೇ ನಿಯೋಜಿಸಲಾಗುವುದು. ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿನ ವ್ಯವಸ್ಥೆಯನ್ನು ಪ್ರತೀದಿನ ಪರಿಶೀಲಿಸಿದ ವರದಿ ನೀಡಲು ಸಿಂಧೂರೂಪೇಶ್ ನಿರ್ದೇಶಿಸಿದರು.

ಪ್ರಯಾಣಿಕರು ಸಹಕರಿಸಿ: ವಿದೇಶದಿಂದ ಬರುವ ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ವೈದ್ಯರ ತಪಾಸಣೆಗೆ ಸಹಕರಿಸಬೇಕು. ವೈದ್ಯರ ಸಲಹೆಗೆ ಸ್ಪಂದಿಸಿ ಅವರ ಸಲಹೆಯಂತೆ ಸಹಕರಿಸಬೇಕು. ಪ್ರಯಾಣಿಕರ ಎಲ್ಲಾ ಮಾಹಿತಿಯನ್ನು ಸಂಪೂರ್ಣ ಗೌಪ್ಯವಾಗಿಡಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸ್ಯಾಂಪಲ್ ಪರೀಕ್ಷೆಗೆ: ಭಾನುವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ವಿದೇಶದಿಂದ ಬಂದ ಪ್ರಯಾಣಿಕರೊಬ್ಬರು ಜ್ವರಪೀಡಿತರಾಗಿ ಕಂಡುಬಂದಿದ್ದು, ಅವರನ್ನು ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿಡಲಾಗಿದೆ. ರೋಗಿಯು ಚಿಕಿತ್ಸೆಗೆ ಸಹಕಾರ ನೀಡುತ್ತಿದ್ದಾರೆ. ಅವರ ಮಾದರಿಯನ್ನು ಸಂಗ್ರಹಿಸಿ, ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಪರೀಕ್ಷೆಯ ವಿವರ ನಿರೀಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸಾರ್ವಜನಿಕರು ಯಾವುದೇ ಆತಂಕಕ್ಕೊಳಗಾಗುವ ಅಗತ್ಯವಿಲ್ಲ. ಜಿಲ್ಲಾಡಳಿತ ಎಲ್ಲಾ ಮುನ್ನೆಚ್ಚರಿಕೆ ಸಿದ್ಧತೆ ಕೈಗೊಂಡಿದೆ ಎಂದು ಅವರು ಹೇಳಿದರು.
ಸಭೆಯಲ್ಲಿಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ, ಜಿಲ್ಲಾಆರೋಗ್ಯಾಧಿಕಾರಿ ಡಾ. ಸಿಖಂದರ್ ಪಾಶಾ, ಉಪವಿಭಾಗಾಧಿಕಾರಿ ಮದನ್ಮೋಹನ್, ನಗರಾಭಿವೃದ್ಧಿ ಕೋಶಯೋಜನಾ ನಿರ್ದೇಶಕಿ ಗಾಯತ್ರಿ ನಾಯಕ್, ವೆನ್ಲಾಕ್ ಅಧೀಕ್ಷಕಿ ಡಾ. ರಾಜೇಶ್ವರಿ ದೇವಿ, ವೈದ್ಯಕೀಯ ಕಾಲೇಜು ಪ್ರತಿನಿಧಿಗಳು, ಎನ್.ಎಂ.ಪಿ.ಟಿ. ವಿಮಾನ ನಿಲ್ದಾಣ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?
July 13, 2026
7:17 AM
by: ದ ರೂರಲ್ ಮಿರರ್.ಕಾಂ
16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ
July 12, 2026
9:03 PM
by: ದ ರೂರಲ್ ಮಿರರ್.ಕಾಂ
ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?
July 12, 2026
8:39 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಇದ್ದಕ್ಕಿದ್ದಂತೆ ದುರ್ಬಲವಾಗಿದ್ದೇಕೆ..? ಇಲ್ಲಿದೆ ವೈಜ್ಞಾನಿಕ ಕಾರಣ
July 12, 2026
4:00 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror