ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ಭೀಕರ ರಸ್ತೆ ಅಪಘಾತ

December 6, 2019
2:51 PM

ಕೌಕ್ರಾಡಿ: ಶಾಲಾ ವಿದ್ಯಾರ್ಥಿಗಳು ಪ್ರವಾಸಕ್ಕೆಂದು ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಹಲವರು ಗಾಯಗೊಂಡ ಘಟನೆ ನೆಲ್ಯಾಡಿ ಸಮೀಪದ ಕೊಕ್ಕಡ ಎಂಬಲ್ಲಿ ಶುಕ್ರವಾರದಂದು ಸಂಭವಿಸಿದೆ.

ಬೆಳಗಾವಿ ಜಿಲ್ಲೆಯ ಶಾಲಾ ವಿದ್ಯಾರ್ಥಿಗಳು ಶೈಕ್ಷಣಿಕ ಖಾಸಗಿ ಬಸ್ ನಲ್ಲಿ ಪ್ರವಾಸ ತೆರಳುತ್ತಿದ್ದ ವೇಳೆ ಕೊಕ್ಕಡ ಸಮೀಪದ ಕಾಪಿನ ಬಾಗಿಲು ಎಂಬಲ್ಲಿ ತಮಿಳುನಾಡು ಮೂಲದವರಿದ್ದ ಕಾರು ನಡುವೆ ಢಿಕ್ಕಿ ಸಂಭವಿಸಿ ಬಸ್ಸು ಪಲ್ಟಿಯಾಗಿದೆ.  ಬಸ್ ನಲ್ಲಿ ಸುಮಾರು 50 ವಿದ್ಯಾರ್ಥಿಗಳಿದ್ದರು ಎಂದು ಹೇಳಲಾಗಿದೆ. ಘಟನೆಯಲ್ಲಿ  15 ಮಕ್ಕಳು, ಶಿಕ್ಷಕ ಹಾಗೂ ಚಾಲಕ ಗಾಯಗೊಂಡಿದ್ದು ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ‌.

ಸ್ಥಳಕ್ಕೆ ಉಪ್ಪಿನಂಗಡಿ, ನೆಲ್ಯಾಡಿ, ಧರ್ಮಸ್ಥಳ ಪೊಲೀಸ್ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕಾರ್ ವಿರುದ್ಧ ದಿಕ್ಕಿನಲ್ಲಿ ಬಂದ ಕಾರಣ ಬಸ್ ಮಗುಚಿ ಬಿದ್ದು ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬದುಕಿನ “ಬ್ಯಾಗೇಜ್‌” ಇಳಿಸುವ ಸಮಯ ಇದು
September 25, 2026
7:14 PM
by: ಮಹೇಶ್ ಪುಚ್ಚಪ್ಪಾಡಿ
ರೈತರಿಗೆ ವಿದ್ಯುತ್‌ ಶಾಕ್ – ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಕಡಿತ- ಪರ್ಯಾಯ ಶಕ್ತಿಯ ಬಗ್ಗೆ ಯೋಚಿಸಲು ಸಕಾಲ
September 25, 2026
1:19 PM
by: ದ ರೂರಲ್ ಮಿರರ್.ಕಾಂ
ಅ.29 ರಿಂದ ನ.11 ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ -12 ದಿನ ಸಾರ್ವಜನಿಕ ದರ್ಶನ
September 25, 2026
12:51 PM
by: ದ ರೂರಲ್ ಮಿರರ್.ಕಾಂ
ಪಿಎಂ-ಕುಸುಮ್ ಯೋಜನೆಯಿಂದ ರೈತರ ನೀರಾವರಿಗೆ ಸೌರಶಕ್ತಿ
September 25, 2026
12:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror