ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿರುವ ಕೊರೊನಾ ಸೋಂಕಿತರ ಸಂಖ್ಯೆ

March 21, 2020
2:06 PM

ಬೆಂಗಳೂರು: ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದೆ. ಐಸಿಎಂಆರ್‌ನ ಸದ್ಯದ ವರದಿಯಂತೆ ಕೋವಿಡ್‌-19 ಸೋಂಕಿತರ ಸಂಖ್ಯೆ 279ಕ್ಕೆ ಏರಿದ್ದು, ನಾಲ್ವರು ಕೊರೊನಾ ವೈರಸ್‌ನಿಂದ ಮೃತಪಟ್ಟಿದ್ದಾರೆ.

ಇಂದು ಒಂದೇ ದಿನ ಕರ್ನಾಟಕದಲ್ಲಿ 3 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಇದರಿಂದಾಗಿ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 18ಕ್ಕೆ ಏರಿದೆ.

ಶುಕ್ರವಾರ ಒಂದೇ ದಿನ ದೇಶದಲ್ಲಿ 49 ಕೊರೊನಾ ಪೊಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದವು. ಮಹಾರಾಷ್ಟ್ರದಲ್ಲಿ 63, ಕೇರಳದಲ್ಲಿ 40, ಉತ್ತರ ಪ್ರದೇಶದಲ್ಲಿ 24, ರಾಜಸ್ಥಾನದಲ್ಲಿ 23, ತೆಲಂಗಾಣದಲ್ಲಿ 19, ದೆಹಲಿಯಲ್ಲಿ 17, ಕರ್ನಾಟಕದಲ್ಲಿ 16, ಲಡಾಕ್‌ನಲ್ಲಿ 13 ಪಾಸಿಟಿವ್‌ ಪ್ರಕರಣಗಳು ಕಂಡುಬಂದಿದ್ದು, ಗುಜರಾತ್‌ನಲ್ಲಿ 7, ಪಂಜಾಬ್‌ನಲ್ಲಿ 6, ಪಶ್ಚಿಮ ಬಂಗಾಳ, ಚಂಡೀಗಡದಲ್ಲಿ ತಲಾ 5 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಕೊರೊನಾ ವೈರಸ್‌ನಿಂದ 23 ವ್ಯಕ್ತಿಗಳು ಗುಣಮುಖರಾಗಿದ್ದಾರೆ.

ವಿಶ್ವದಾದ್ಯಂತ 11,419 ಜನ ಕೋವಿಡ್‌-19ಗೆ ಬಲಿಯಾಗಿದ್ದು, 2 ಲಕ್ಷದ 76 ಸಾವಿರ ಜನರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಇದುವರೆಗೂ 91,954 ಜನ ಕೊರೊನಾದಿಂದ ಗುಣಮುಖರಾಗಿದ್ದಾರೆ.

ಕೊರೊನಾ ನಿಯಂತ್ರಣಕ್ಕಾಗಿ ಸರಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದು, ಭಾನುವಾರ ಜನತಾ ಕರ್ಫ್ಯೂಗೆ ಮೋದಿ ಕರೆ ನೀಡಿದ್ದಾರೆ. ಇದರಿಂದ ಭಾನುವಾರ ಭಾರತೀಯ ರೈಲ್ವೆ ಕೂಡ ಪ್ಯಾಸೆಂಜರ್‌ ರೈಲುಗಳನ್ನು ದೇಶಾದ್ಯಂತ ಸ್ಥಗಿತಗೊಳಿಸಿದ್ದು, ಬೆಂಗಳೂರಿನ ನಮ್ಮ ಮೆಟ್ರೋ ಸೇರಿ ದೇಶದ ಹಲವು ಮೆಟ್ರೋಗಳ ಸಂಚಾರವು ಬಂದ್‌ ಆಗಲಿದೆ. ಇದರ ಜೊತೆಗೆ ನಾಳೆಯಿಂದ ಅಂತರಾಷ್ಟ್ರೀಯ ವಿಮಾನಗಳ ಸಂಚಾರವನ್ನು ನಿಷೇಧಿಸಿದ್ದು, ವೀಸಾಗಳನ್ನು ರದ್ದುಗೊಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಳ್ಳಿಗಳನ್ನು ಪರಿವರ್ತಿಸಲು ಹಸುವಿನ ಸಗಣಿ – ಗೋಮಯದಿಂದ ಗ್ರಾಮಗಳ ಆರ್ಥಿಕ ಕ್ರಾಂತಿ..!
July 8, 2026
8:51 PM
by: ದ ರೂರಲ್ ಮಿರರ್.ಕಾಂ
ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ
July 8, 2026
4:18 PM
by: ಮಿರರ್‌ ಡೆಸ್ಕ್‌
ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!
July 8, 2026
1:24 PM
by: ಸಾಯಿಶೇಖರ್ ಕರಿಕಳ
E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?
July 8, 2026
12:42 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror