ಸುಳ್ಯ: ಬಿ ಎಸ್ ವೈ ಸಂಪುಟದಲ್ಲಿ ಸಚಿವ ಸ್ಥಾನ ಲಭ್ಯವಾಗದೇ ಇರುವ ಬಗ್ಗೆ ಶಾಸಕ ಅಂಗಾರ ಸುಳ್ಯನ್ಯೂಸ್.ಕಾಂಗೆ ಪ್ರತಿಕ್ರಿಯೆ ನೀಡಿದ್ದು, ಇದು ಕಳೆದ 26 ವರ್ಷಗಳಿಂದ ಗೆಲ್ಲಿಸಿದ ಕ್ಷೇತ್ರದ ಜತೆಗೆ ಮಾಡಿದ ಅನ್ಯಾಯವಾಗಿದೆ. ಕೊನೆಯವರೆಗೂ ಪಟ್ಟಿಯಲ್ಲಿ ಹೆಸರಿತ್ತು. ಕೊನೆಯ ಕ್ಷಣದಲ್ಲಿ ಕೈಬಿಡಲಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ಸಹಜವಾಗಿಯೇ ಕಾರ್ಯಕರ್ತರಿಗೆ ಅಸಮಾಧಾನವಾಗಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಕಾದುನೋಡಿ ನಿರ್ಧಾರ ಕೈಗೊಳ್ಳಲಾಗುವುದು. ಕಾರ್ಯಕರ್ತರ, ಪಕ್ಷದ ಪ್ರಮುಖರ ಜೊತೆ ಮಾತುಕತೆ ನಡೆಸಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಪಕ್ಷ ನಿಷ್ಟೆ, ಸಿದ್ದಾಂತ , ಆದರ್ಶ, ತತ್ತ್ವ ಸಿದ್ಧಾಂತಕ್ಕೆ ಬೆಲೆಯೇ ಇಲ್ಲವೇ ಎಂಬುದು ಈಗ ಪ್ರಶ್ನೆಯಾಗಿದೆ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel