ಖಾಸಗೀ ಆಸ್ಪತ್ರೆಗಳಿಂದ ನಡೆಯುತ್ತಿದೆ ಕೊರೋನಾ ದಂಧೆ | ಮೌನಕ್ಕೆ ಜಾರಿದ ಜನಪ್ರತಿನಿಧಿಗಳು – ಆರೋಪ |

July 11, 2020
11:22 AM
ಮಂಗಳೂರು: ಕೊರೋನಾ ವೈರಸ್ ತೀವ್ರವಾಗಿ ಹರಡುತ್ತಿದ್ದು, ಜನತೆ ಭಯಭೀತಿಗೊಳಗಾಗಿದ್ದರೆ, ಈ ನಡುವೆ ಖಾಸಗೀ ಆಸ್ಪತ್ರೆಗಳು ಕೊರೋನಾ ಹೆಸರಿನಲ್ಲಿ ಜನತೆಯನ್ನು ವಿಪರೀತವಾಗಿ ಸುಲಿಗೆ ಮಾಡುವ ಮೂಲಕ ಹಗಲು ದರೋಡೆ ನಡೆಸುತ್ತಿದೆ. ಲಾಕ್ಡೌನ್ ನಿಂದಾಗಿ ಜನರ ಬದುಕು ತೀರಾ ತತ್ತರಿಸಿದ್ದು, ಉದ್ಯೋಗವಿಲ್ಲದೆ,ಕಾಸಿಲ್ಲದೆ, ಆಹಾರವಿಲ್ಲದೆ ಕಂಗಾಲಾಗಿರುವ ಈ ಸಂದರ್ಭದಲ್ಲಿ ಕೊರೋನಾ ದಂಧೆ ಎಗ್ಗಿಲ್ಲದೆ ನಡೆಯುತ್ತಿದ್ದರೂ ಸರಕಾರಗಳು ಹಾಗೂ ಜನಪ್ರತಿನಿಧಿಗಳು ದಿನ್ಯಮೌನ ವಹಿಸುವ ಮೂಲಕ ಪರೋಕ್ಷವಾಗಿ ಸಹಕರಿಸುತ್ತಿರುವುದು ಅಕ್ಷಮ್ಯ ಅಪರಾಧವಾಗಿದೆ ಎಂದು
ಸಿಪಿಐಎಂ  ದ.ಕ.ಜಿಲ್ಲಾ ನಾಯಕರಾದ ಜಯಂತಿ ಬಿ.ಶೆಟ್ಟಿ ಹೇಳಿದರು.
ಅವರು ಕೊರೋನಾ ನಿಗ್ರಹಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿಫಲತೆಯ ವಿರುದ್ದ ಸಿಪಿಐಎಂ ಹಮ್ಮಿಕೊಂಡ ವಾರಾಚರಣೆ ಕಾರ್ಯಕ್ರಮದ ಭಾಗವಾಗಿ ಪಕ್ಕಲಡ್ಕದಲ್ಲಿ ಜರುಗಿದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.  ಪ್ರತಿಭಟನೆಯಲ್ಲಿ ಭಾಗವಹಿಸಿದ ಸಿಐಟಿಯು ಜಿಲ್ಲಾ ಮುಖಂಡರಾದ ಜಯಲಕ್ಷ್ಮಿಯವರು ಮಾತನಾಡುತ್ತಾ, ಲಾಕ್ಡೌನ್ ನಿಂದಾಗಿ ವಿವಿಧ ವಿಭಾಗದ ಕಾರ್ಮಿಕರು ತೀರಾ ಸಂಕಷ್ಟದಲ್ಲಿದ್ದು, ಇಲ್ಲಿಯವರೆಗೂ ಯಾವುದೇ ಪರಿಹಾರವನ್ನು ಘೋಷಿಸಿಲ್ಲ. ಬದಲಾಗಿ ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ಯುದ್ಧದ ಉನ್ಮಾದವನ್ನು ಸ್ರಷ್ಠಿಸಲಾಗಿದೆ. ದೇಶದ ಆರ್ಥಿಕತೆಯ ಜೊತೆಗೆ ಜನರ ಬದುಕನ್ನು ಸರ್ವನಾಶ ಮಾಡಲು ಕೇಂದ್ರದ ನರೇಂದ್ರ ಮೋದಿ ಸರಕಾರ ಹವಣಿಸುತ್ತಿದೆ ಎಂದು ಹೇಳಿದರು.
 ಈ ಸಂಧರ್ಭದಲ್ಲಿ ಸಿಪಿಐಎಂ ಜಿಲ್ಲಾ ನಾಯಕರಾದ ಜೆ.ಬಾಲಕೃಷ್ಣ ಶೆಟ್ಟಿ, ಇತರ ಸ್ಥಳೀಯ ಕಾರ್ಮಿಕ ನಾಯಕರಾದ ಲೀಲಾ ಜೆ, ರೋಹಿಣಿ, ಗೀತಾ, ಭಾರತಿ, ವಿಮಲ ಮುಂತಾದವರು ಉಪಸ್ಥಿತರಿದ್ದರು.
Advertisement
Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ
February 14, 2026
7:55 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ
February 14, 2026
7:45 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror