ಸುಳ್ಯ:ಸರಕಾರದ ವತಿಯಿಂದ ನೀಡಲಾಗುತ್ತಿರುವ ಆರೋಗ್ಯ ಕಾರ್ಡ್ ನೋಂದಾವಣೆ ಕಾರ್ಯಕ್ರಮ ಗ್ರಾಮ ಸಂಪಾಜೆ ಪಂಚಾಯತ್ ಸಭಾಭವನದಲ್ಲಿ ಬುಧವಾರ ಆರಂಭಗೊಂಡಿದೆ.
ಮಹಾತ್ಮಾ ಗಾಂಧಿಯವರ 150 ನೇ ಜಯಂತಿಯ ಅಂಗವಾಗಿ ಸಂಪಾಜೆ ಗ್ರಾಮ ಪಂಚಾಯತ್ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಲ್ಲುಗುಂಡಿ, ಚೆಂಬು ಮತ್ತು ಸುತ್ತಮುತ್ತಲಿನ ಪ್ರದೇಶದ ಜನರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು.
ಒಂದು ಕಾರ್ಡಿಗೆ ರೂ 70/-ಪಾವತಿಸಬೇಕಾಗುತ್ತದೆ. ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್ (ಪಡಿತರ ಚೀಟಿ) ದಾಖಲೆಗಳನ್ನು ಕಡ್ಡಾಯವಾಗಿ ತೆಗೆದುಕೊಂಡು ಬರಬೇಕಾಗಿದೆ ಎಂದು ಪಂಚಾಯತ್ ಪ್ರಕಟಣೆ ತಿಳಿಸಿದೆ.
ಸಂಪಾಜೆ ಗ್ರಾ.ಪಂ. ಅಧ್ಯಕ್ಷೆ ಸುಂದರಿ ಮುಂಡಡ್ಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಗ್ರಾ.ಪಂ.ನ ಸದಸ್ಯರುಗಳು ಉಪಸ್ಥಿತರಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel