ಗುಣಮಟ್ಟದ ಶಿಕ್ಷಣವನ್ನು ಶಿಕ್ಷಣ ಸಂಸ್ಥೆಗಳು ನೀಡುವಂತಾಗಬೇಕು – ಎಸ್ ಅಂಗಾರ

October 5, 2019
10:18 AM

ಪಂಜ: ಸಮಾಜಕ್ಕೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಶಿಕ್ಷಣ ಸಂಸ್ಥೆಗಳು ನೀಡುವಂತಾಗಬೇಕು. ಆ ನಿಟ್ಟಿನಲ್ಲಿ ಸಂಘಸಂಸ್ಥೆಗಳು ಸರಕಾರದ ಜೊತೆಯಲ್ಲಿ ಕೈ ಜೋಡಿಸಬೇಕು. ಆದ್ದರಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆತು ಸಮಾಜದಲ್ಲಿ ಮುಂದುವರಿಯಬಹುದು ಎಂದು ಸುಳ್ಯ ಶಾಸಕ ಎಸ್. ಅಂಗಾರ ಹೇಳಿದರು.

Advertisement
Advertisement
Advertisement

ಅವರು ಗಾಂಧೀಜಯಂತಿಯಂದು ಸರಕಾರಿ ಪದವಿಪೂರ್ವ ಕಾಲೇಜು ಪಂಜ ಇಲ್ಲಿಗೆ ಎಂ.ಆರ್.ಪಿ.ಎಲ್. ಮಂಗಳೂರು 11.46 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಿಕೊಟ್ಟ ಶೌಚಾಲಯ ಕಟ್ಟಡವನ್ನು ಉದ್ಘಾಟನೆ ಮಾಡಿ ಮಾತನಾಡಿದರು. ಗಾಂಧೀಜಯಂತಿಯ ದಿನಾಚರಣೆಯಂದು ಪ್ರತಿಯೊಬ್ಬರೂ ವ್ಯಸನಮುಕ್ತ, ಸ್ವಚ್ಛಭಾರತದ ಕಡೆಗೂ ಗಮನಹರಿಸಬೇಕಾದ ಅಗತ್ಯವಿದೆ ಎಂದರು.

Advertisement

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಜ ಗ್ರಾಮ ಪಂಚಾಯತ್ ಅಧ್ಯಕ್ಷ ಕಾರ್ಯಪ್ಪ ಚಿದ್ಗಲ್‍  ವಹಿಸಿ ಪ್ಲಾಸ್ಲಿಕ್ ಮುಕ್ತ ಸಮಾಜ ನಿರ್ಮಾಣವಾಗಬೇಕು ಜೊತೆಯಲ್ಲಿ ಗಾಂಧೀಜಿಯ ಸ್ವಚ್ಛಭಾರತದ ಕನಸು ನನಸುಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಹಿರಿದು ಎಂಬ ಸಂದೇಶವನ್ನು ನೀಡಿದರು.

ವೇದಿಕೆಯಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಚೀನಪ್ಪ ಕಾಣಿಕೆ, ಮೇಲುಸ್ತುವಾರಿ ಸಮಿತಿಯ ಕಾರ್ಯಧ್ಯಕ್ಷ ಸೋಮಶೇಖರ, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ಶಶಿಧರ ಪರಮಲೆ ಉಪಸ್ಥಿತರಿದ್ದರು.

Advertisement

ವಿದ್ಯಾರ್ಥಿನಿ ಗಾಯತ್ರಿ ಬಿ.ಎಸ್. ಪ್ರಾರ್ಥಿಸಿದರು. ಪ್ರಾಂಶುಪಾಲ ಪ್ರಭಾಕರ ಕಿರಿಭಾಗ ಸ್ವಾಗತಿಸಿದರು. ಶಶಿಧರ ಪಿ. ವಂದಿಸಿದರು. ಕನ್ನಡ ಉಪನ್ಯಾಸಕ ವೆಂಕಪ್ಪ ಗೌಡ ಕೇನಾಜೆ ಕಾರ್ಯಕ್ರಮ ನಿರೂಪಿಸಿದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 22-12-2024 | ಕೆಲವು ಕಡೆ ತುಂತುರು ಮಳೆ ಸಾಧ್ಯತೆ |
December 22, 2024
3:52 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21.12.2024 | ರಾಜ್ಯದ ಹಲವೆಡೆ ಮೋಡದ ವಾತಾವರಣ |
December 21, 2024
11:35 AM
by: ಸಾಯಿಶೇಖರ್ ಕರಿಕಳ
ಹಲಸು ಮೌಲ್ಯವರ್ಧನೆಗೆ ನೆರವು | ಹಲಸು ಉದ್ಯಮದ ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಂಡ ಒಡಿಶಾ |
December 21, 2024
6:50 AM
by: The Rural Mirror ಸುದ್ದಿಜಾಲ
ಕೊಬ್ಬರಿಗೆ ಬೆಂಬಲ ಬೆಲೆ ಹೆಚ್ಚಿಸಿದ ಸರ್ಕಾರ | 422 ರೂಪಾಯಿ ಏರಿಕೆ |
December 21, 2024
6:32 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror