ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ವೈರಸ್ ಹರಡುತ್ತಿರುವ ಹಿನ್ನಲೆಯಲ್ಲಿ ಗುರುವಾರದಿಂದ ಒಂದು ವಾರಗಳ ಕಾಲ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಘೋಷಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ವೈರಸ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಾಕ್ಡೌನ್ ಡೌನ್ ಮಾಡುವಂತೆ ಮುಖ್ಯಮಂತ್ರಿಗೆ ವೀಡಿಯೋ ಕಾನ್ಫರೆನ್ಸ್ ನಲ್ಲಿ ಮನವಿ ಮಾಡಿದ ಸಂದರ್ಭದಲ್ಲಿ ಜಿಲ್ಲಾಡಳಿತವೇ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಸಿಎಂ ಯಡಿಯೂರಪ್ಪ ಸೂಚಿಸಿದ್ದಾರೆ.
ಜಿಲ್ಲೆಯಲ್ಲಿ ಕೊರೋನಾ ಸೋಂಕಿತರು ಏರುತ್ತಿರುವ ಹಿನ್ನಲೆಯಲ್ಲಿ ಲಾಕ್ ಡೌನ್ ಮಾಡುವುದು ಅನಿವಾರ್ಯವಾಗಿದೆ. ಜಿಲ್ಲೆಯ ಜನಪ್ರತಿನಿಧಿಗಳ, ಅಧಿಕಾರಿಗಳ ಮತ್ತು ಸಾರ್ವಜನಿಕರ ಅಭಿಪ್ರಾಯ ಪಡೆದು ನಿರ್ಧರಿಸಲಾಗಿದೆ. ಲಾಕ್ ಡೌನ್ ಮಾರ್ಗ ಸೂಚಿಯನ್ನು ಸಿದ್ಧಪಡಿಸಿ ಪ್ರಕಟಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಒಂದು ವಾರಕ್ಕೆ ಬೇಕಾಗುವ ಅಗತ್ಯ ವಸ್ತುಗಳನ್ನು ಖರೀದಿಸುವಂತೆ ಸಚಿವರು ಸಾರ್ವಜನಿಕರಿಗೆ ಸೂಚಿಸಿದ್ದಾರೆ.