ಗೋಕರ್ಣ ವಿವಾದ | ರಾಮಚಂದ್ರಾಪುರ ಮಠಕ್ಕೆ ಮಹತ್ವದ ಗೆಲುವು

August 26, 2020
7:59 PM

ಬೆಂಗಳೂರು: ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ಪೂಜೆ ಮಾಡಿಸುವ ಹಾಗೂ ಭಕ್ತರಿಂದ ದಕ್ಷಿಣೆ ಸ್ವೀಕರಿಸಲು ಅನುವು ಮಾಡಿಕೊಡಬೇಕು ಎಂದು ಕೋರಿ ಅನಂತ್ ದತ್ತಾತ್ರೇಯ ಅಡಿ ಹಾಗೂ ಇತರ 24 ಮಂದಿ ಸಲ್ಲಿಸಿದ್ದ ಅರ್ಜಿ ಸಂಬಂಧ ಕಾರವಾರ ಜಿಲ್ಲಾ ನ್ಯಾಯಾಲಯ ನೀಡಿದ್ದ ಆದೇಶವನ್ನು ರಾಜ್ಯ ಹೈಕೋರ್ಟ್‍ನ ಧಾರವಾಡ ಪೀಠ ವಜಾ ಮಾಡಿದೆ. ಈ ಮೂಲಕ ಕಾರವಾರ ಜಿಲ್ಲಾ ನ್ಯಾಯಾಲಯ ನೀಡಿದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿದ ರಾಮಚಂದ್ರಾಪುರ ಮಠ ಮತ್ತು ಶ್ರೀಕ್ಷೇತ್ರ ಗೋಕರ್ಣದ ಉಪಾದಿವಂತ ಮಂಡಳಿಗೆ ಜಯ ಸಿಕ್ಕಿದೆ.
ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ಪಾರಂಪರಿಕ ಪೂಜೆ ಮಾಡಿಸುವ ಹಾಗೂ ಭಕ್ತರಿಂದ ದಕ್ಷಿಣೆ ಸ್ವೀಕರಿಸಲು ಆಡಳಿತ ಮಂಡಳಿ ಅಡ್ಡಿಪಡಿಸದಂತೆ ಶಾಶ್ವತ ನಿರ್ಬಂಧಕಾಜ್ಞೆ ನೀಡಬೇಕು ಎಂದು ಕೋರಿ ಅರ್ಜಿದಾರರು ಕುಮಟಾ ಸೀನಿಯರ್ ಸಿವಿನ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಜತೆಗೆ ತಾತ್ಕಾಲಿಕವಾಗಿ ಪೂಜೆ ಹಾಗೂ ದಕ್ಷಿಣೆ ಸ್ವೀಕಾರಕ್ಕೆ ಅವಕಾಶ ಕೋರಿದ್ದರು. ಇದಕ್ಕೆ ದೇವಾಲಯ ಆಡಳಿತ ಮಂಡಳಿ ಆಕ್ಷೇಪ ಸಲ್ಲಿಸಿತ್ತು.
ಹೈಕೋರ್ಟ್ ಆದೇಶದ ಅನ್ವಯ ಈ ದಾವೆ ವಿಚಾರಣೆಯನ್ನು ಪ್ರಧಾನ ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿತ್ತು. ಕಾರವಾರ ನ್ಯಾಯಾಲಯ ಉಭಯ ಪಕ್ಷಗಳ ವಾದವನ್ನು ಆಲಿಸಿ ಅರ್ಜಿದಾರರ ಅರ್ಜಿಯನ್ನು ಭಾಗಶಃ ಪುರಸ್ಕರಿಸಿ ಆದೇಶ ಮಾಡಿತ್ತು.
ಈ ಆದೇಶದ ವಿರುದ್ಧ ದೇವಾಲಯ ಆಡಳಿತವನ್ನು ನೋಡಿಕೊಳ್ಳುತ್ತಿರುವ ಶ್ರೀ ರಾಮಚಂದ್ರಾಪುರ ಮಠ ಮತ್ತು ಶ್ರೀಕ್ಷೇತ್ರ ಗೋಕರ್ಣ ಉಪಾದಿವಂತ ಮಂಡಳಿ ವತಿಯಿಂದ ಪ್ರತ್ಯೇಕ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿಯ ವಿಚಾರಣೆ ನಡೆಸಿದ ಏಕಸದಸ್ಯ ಪೀಠ ಮಹತ್ವದ ಆದೇಶ ಹೊರಡಿಸಿ, ಶ್ರೀಮಠ ಹಾಗೂ ಉಪಾದಿವಂತ ಮಂಡಳಿ ಸಲ್ಲಿಸಿದ ಮೇಲ್ಮನವಿಯನ್ನು ಪುರಸ್ಕತಿಸಿ, ಜಿಲ್ಲಾ ನ್ಯಾಯಾಲಯದ ಆದೇಶವನ್ನು ವಜಾ ಮಾಡಿದೆ. ಜತೆಗೆ ವಾದಿಗಳು ಸಲ್ಲಿಸಿದ್ದ ತಾತ್ಕಾಲಿಕ ಅರ್ಜಿಯನ್ನು ಕೂಡಾ ತಿರಸ್ಕರಿಸಿದೆ.
\

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಉತ್ತರ ಪ್ರದೇಶದಲ್ಲಿ ಅಡಿಕೆ ಮೇಲಿನ ಮಂಡಿ ತೆರಿಗೆ ರದ್ದುಪಡಿಸಿ – ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೊ ಮನವಿ
June 12, 2026
7:52 PM
by: ದ ರೂರಲ್ ಮಿರರ್.ಕಾಂ
ಕೇರಳಂನಲ್ಲಿ ಶಿಗೆಲ್ಲಾ ಆತಂಕ – ಕೊಲ್ಲಂನಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಸೋಂಕು ದೃಢ, ಆರೋಗ್ಯ ಇಲಾಖೆ ಅಲರ್ಟ್!
June 12, 2026
6:58 AM
by: ದ ರೂರಲ್ ಮಿರರ್.ಕಾಂ
₹2.34 ಕೋಟಿ ಮೌಲ್ಯದ ಅಡಿಕೆ ಜಪ್ತಿ – ಶಿವಮೊಗ್ಗದ 8 ಮಂದಿಯ ವಿರುದ್ಧ ಕೇಸ್..!
June 10, 2026
6:39 AM
by: ಮಿರರ್‌ ಡೆಸ್ಕ್
ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ
June 5, 2026
8:53 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror