ಸುಳ್ಯ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡು ಮನೆಗೆ ಹಾನಿ ಸಂಭವಿಸಿದ ಘಟನೆ ಆಲೆಟ್ಟಿ ಗ್ರಾಮದ ಗುಂಡ್ಯ ಎಂಬಲ್ಲಿ ನಡೆದಿದೆ.
ಸೋಮವಾರ ಸಂಜೆಯ ವೇಳೆಗೆ ಕೃಷ್ಣ ಎಂಬವರ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಹಬ್ಬಿ ಮನೆ ಸುಟ್ಟು ಹೋಗಿದೆ.
ಸಂಜೆ 4 ಗಂಟೆಯ ವೇಳೆಗೆ ಮನೆಯಲ್ಲಿ ಹೊಗೆ ಕಾಣಿಸಿಕೊಂಡಿದ್ದು ಸ್ವಲ್ಪ ಹೊತ್ತಿನಲ್ಲಿ ಭಾರಿ ಸದ್ದಿನೊಂದಿಗೆ ಬೆಂಕಿ ಕಾಣಿಸಿಕೊಂಡಿತ್ತು. ಮನೆಯ ಒಳಗೆ ಗ್ಯಾಸ್ ಸಿಲಿಂಡರ್ ಒಡೆದು ತುಂಡಾದ ಸ್ಥಿತಿಯಲ್ಲಿತ್ತು. ಸಿಲಿಂಡರ್ ಒಡೆದ ರಭಸಕ್ಕೆ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿದೆ ಮತ್ತು ಮನೆಗೆ ಹಾನಿ ಸಂಭವಿಸಿದೆ. ಮನೆಯ ಎದುರಲ್ಲಿದ್ದ ತೆಂಗಿನ ಮರದ ತುದಿಯವರೆಗೆ ಬೆಂಕಿಯ ಕೆನ್ನಾಲಿಗೆ ಹಬ್ಬಿತ್ತು. ಘಟನೆ ನಡೆದ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ. ಘಟನೆಯ ಬಗ್ಗೆ ಹೆಚ್ಚಿನ ಪರಿಶೀಲನೆ ನಡೆಸಲಾಗುವುದು ಎಂದು ಸುಳ್ಯ ಪೊಲೀಸರು ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel