ಗ್ರಾಮ ಪಂಚಾಯತ್ ಖಾಲಿ ಸ್ಥಾನಗಳಿಗೆ ಉಪ ಚುನಾವಣೆ

October 26, 2019
9:00 AM

ಮಂಗಳೂರು :-  ವಿವಿಧ ಕಾರಣಗಳಿಂದ ತೆರವಾಗಿರುವ ದಕ್ಷಿಣಕನ್ನಡ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್‍ಗಳ ಖಾಲಿ ಸ್ಥಾನಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಿಸಿದೆ. ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮ ಪಂಚಾಯತ್‍ನ ಕಲ್ಮಡ್ಕ-2 ಮತ್ತು ಬಳ್ಪ ಗ್ರಾಮ ಪಂಚಾಯತ್‍ನ ಕೇನ್ಯ-1 ಗ್ರಾಮ ಪಂಚಾಯತ್ ಕ್ಷೇತ್ರಗಳಿಗೆ ಉಪ ಚುನಾವಣೆ ಚುನಾವಣೆ ನಡೆಯಲಿದೆ.

ಮೂಡಬಿದ್ರೆ ತಾಲೂಕಿನ ದರೆಗುಡ್ಡೆ ಗ್ರಾಮ ಪಂಚಾಯತ್‍ನ ದರೆಗುಡ್ಡೆ-2, ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮ ಪಂಚಾಯತ್‍ನ ಮೂಡನಡುಗೋಡು-2, ಪುತ್ತೂರು ತಾಲೂಕಿನ ಬಜತ್ತೂರು ಗ್ರಾಮ ಪಂಚಾಯತ್‍ನ ಬಜತ್ತೂರು-2 ಮತ್ತು ಮರ್ಧಾಳ ಗ್ರಾಮ ಪಂಚಾಯತ್‍ನ ನೆಕ್ಕಿಲಾಡಿ-2, ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ಗ್ರಾಮ ಪಂಚಾಯತ್‍ನ ಹತ್ಯಡ್ಕ-2 ಪ್ರದೇಶಗಳಲ್ಲೂ ಚುನಾವಣೆ ನಡೆಯಲಿದೆ. ಚುನಾವಣೆ ನಡೆಯುವ ಗ್ರಾಮ ಪಂಚಾಯತ್‍ಗಳ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆಯು ಅಕ್ಟೋಬರ್ 28 ರಿಂದ ನವೆಂಬರ್ 14 ರವರೆಗೆ ಜಾರಿಯಲ್ಲಿರುತ್ತದೆ.

ಚುನಾವಣೆ ಅಧಿಸೂಚನೆ ಅಕ್ಟೋಬರ್ 28ರಂದು ಹೊರಡಿಸಲಿದ್ದು , ನಾಮಪತ್ರ ಸಲ್ಲಿಸಲು ಕೊನೆಯ ದಿನ ಅಕ್ಟೋಬರ್ 31. ನಾಮಪತ್ರಗಳನ್ನು ಪರಿಶೀಲಿಸುವ ದಿನ ನವೆಂಬರ್ 2, ಉಮೇದುವಾರರನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನ ನವೆಂಬರ್ 4, ಮತದಾನ ಅವಶ್ಯವಿದ್ದರೆ ಮತದಾನವನ್ನು ನಡೆಸಬೇಕಾದ ದಿನ ಮತ್ತು ಸಮಯ ನವೆಂಬರ್ 12 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆ ವರೆಗೆ. ಮರು ಮತದಾನ ಇದ್ದಲ್ಲಿ ಮತದಾನ ನಡೆಸಬೇಕಾದ ದಿನ ಮತ್ತು ಸಮಯ ನವೆಂಬರ್ 13 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆ ವರೆಗೆ. ಮತಗಳ ಎಣಿಕೆ ನವೆಂಬರ್ 14 ರಂದು ನಡೆಯಲಿದ ಎಂದು ಪ್ರಕಟಣೆ ತಿಳಿಸಿದೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಕ್ರಮ ಮರಳು ಗಣಿಗಾರಿಕೆ | 5 ವರ್ಷಗಳಲ್ಲಿ 47 ಕೋಟಿ ರೂಪಾಯಿ ದಂಡ ಸಂಗ್ರಹ
March 12, 2025
6:58 AM
by: ದ ರೂರಲ್ ಮಿರರ್.ಕಾಂ
ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಭಯ ಬಿಟ್ಟು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿದರೆ ಯಶಸ್ಸು ಲಭಿಸುತ್ತದೆ – ಶಿಕ್ಷಣ ತಜ್ಞ ಗುರುರಾಜ ಕರ್ಜಗಿ
March 12, 2025
6:54 AM
by: ದ ರೂರಲ್ ಮಿರರ್.ಕಾಂ
ಎಪ್ರಿಲ್‌ನಲ್ಲಿ ಶುಕ್ರನು 9 ರಾಶಿಗಳಲ್ಲಿ ವಿವಿಧ ಪರಿಣಾಮಗಳನ್ನು ಉಂಟುಮಾಡಬಹುದು
March 12, 2025
6:47 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಜಿಲ್ಲೆಯಲ್ಲಿ ಬಿಸಿಗಾಳಿ | ಮುನ್ನೆಚ್ಚರಿಕೆ ವಹಿಸಲು ಸೂಚನೆ
March 11, 2025
9:47 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror