ಗ್ರಾಮೀಣ ರಸ್ತೆಗಳ ತ್ವರಿತ ದುರಸ್ತಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

November 27, 2019
6:22 PM

ಮಂಗಳೂರು : ಪ್ರಾಕೃತಿಕ ವಿಕೋಪಗಳಿಂದ ಹಾನಿಗೀಡಾದ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆಗಳ ದುರಸ್ತಿ ಕಾಮಗಾರಿಯನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಮೀನುಗಾರಿಕೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ.

ಅವರು  ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ  ಸಭೆಯಲ್ಲಿ ಮಾತನಾಡಿದರು. ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳ ರಸ್ತೆಗಳು ಹೆಚ್ಚಿನ ಪ್ರಮಾಣದಲ್ಲಿ ಹಾನಿಯಾಗಿವೆ. ವಿಪತ್ತು ಪರಿಹಾರ ನಿಧಿಯಿಂದ ರಸ್ತೆ ದುರಸ್ತಿಗೆ ಅನುದಾನ ಬಿಡುಗಡೆಯಾಗಿದೆ. ಆದರೂ ಕಾಮಗಾರಿ ಇನ್ನೂ ಆರಂಭವಾಗದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಕೂಡಲೇ ಯಾವುದೇ ವಿಳಂಭವಿಲ್ಲದೇ ರಸ್ತೆ ದುರಸ್ತಿ ಕಾಮಗಾರಿ ಆರಂಭಿಸಲು ಪಂಚಾಯತ್‍ರಾಜ್ ಇಂಜಿನಿಯರಿಂಗ್ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ರಾಜ್ಯ ಸರಕಾರ ಪ್ರತೀ ಕಿಲೋ ಮೀಟರ್ ರಸ್ತೆ ದುರಸ್ತಿಗೆ ನೀಡುತ್ತಿರುವ ಅನುದಾನದಿಂದ ಇಡೀ ರಸ್ತೆ ದುರಸ್ತಿಗೆ ಬದಲು ಅತೀ ಹೆಚ್ಚು ಹಾನಿಗೀಡಾದ ಭಾಗದ ರಸ್ತೆಯನ್ನು ಆದ್ಯತೆಯಲ್ಲಿ ದುರಸ್ತಿ ಮಾಡಬೇಕು. ಹೆಚ್ಚುವರಿ ಅನುದಾನ ಅಗತ್ಯವಿದ್ದಲ್ಲಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು.

ಸಭೆಯಲ್ಲಿ ಶಾಸಕರಾದ ಉಮಾನಾಥ ಕೋಟ್ಯಾನ್, ರಾಜೇಶ್ ನಾಯ್ಕ್, ಸಂಜೀವ ಮಠಂದೂರು, ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಅಪರ ಜಿಲ್ಲಾಧಿಕಾರಿ ರೂಪಾ ಇದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror