ಚಂದ್ರಯಾನ-2 : ವಿಕ್ರಂ ಲ್ಯಾಂಡರ್ ಪತ್ತೆ

September 8, 2019
1:58 PM

ಬೆಂಗಳೂರು:  ಚಂದ್ರಯಾನ 2 ರಲ್ಲಿ  ಸಂಪರ್ಕ ಕಡಿತಗೊಂಡಿದ್ದ ವಿಕ್ರಂ ಲ್ಯಾಂಡರ್ ಪತ್ತೆಯಾಗಿದೆ ಎಂಬ  ಮಾಹಿತಿ ಲಭ್ಯವಾಗಿದೆ. ಆರ್ಬಿಟರ್ ಕಳುಹಿಸಿರುವ ಚಿತ್ರದಲ್ಲಿ ವಿಕ್ರಂ ಲ್ಯಾಂಡರ್ ಪತ್ತೆಯಾಗಿದ್ದು ಇದೀಗ ವಿಕ್ರಂ ಜೊತೆ  ಸಂಪರ್ಕ ಸಾಧಿಸಲು ಇಸ್ರೋ ವಿಜ್ಞಾನಿಗಳ ತಂಡ ಪ್ರಯತ್ನ ಮಾಡುತ್ತಿದೆ ಎಂದು ಇಸ್ರೋ ಮುಖ್ಯಸ್ಥ ಕೆ.ಶಿವನ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

ಚಂದ್ರಯಾನ-2 ಯೋಜನೆಯಲ್ಲಿ ಸಾಫ್ಟ್ ಲ್ಯಾಂಡಿಂಗ್ ವೇಳೆ ಲ್ಯಾಂಡರ್ ಜೊತೆ ಸಂಪರ್ಕ ಕಡಿತಗೊಂಡಿತ್ತು. ಅದಾದ ಬಳಿಕ ಸತತವಾಗಿ ಲ್ಯಾಂಡರ್ ಪತ್ತೆಗೆ ಪ್ರಯತ್ನ ನಡೆಯುತ್ತಿತ್ತು. ಚಂದ್ರನ ಕಕ್ಷೆಯಲ್ಲಿ ನಿಗದಿತವಾಗಿ ಕಾರ್ಯನಿರ್ವಹಿಸುತ್ತಿರುವ ಕಕ್ಷಾಗಾರ (ಆರ್ಬಿಟರ್) ಅತ್ಯಂತ ಸುರಕ್ಷಿತ ಮತ್ತು ಆರೋಗ್ಯಕರವಾಗಿತ್ತು. ಇದರಲ್ಲಿ ಯಾವುದೇ ಸಮಸ್ಯೆ ಕಂಡುಬಂದಿರಲಿಲ್ಲ. ಹೀಗಾಗಿ ಆರ್ಬಿಟರ್ ಮೂಲಕ ಫೋಟೊ ತೆಗೆಯಲಾಗುತ್ತಿದ್ದು ಇದರಲ್ಲಿ ವಿಕ್ರಂ ಲ್ಯಾಂಡರ್ ಪತ್ತೆಯಾಗಿದೆ ಎಂದು ಇಸ್ರೋ  ತಿಳಿಸಿದೆ. ಸುಮಾರು 1600 ಕೆಜಿ ತೂಕದ ವಿಕ್ರಂ ಲ್ಯಾಂಡರ್ ಚಂದ್ರನ ಅಂಗಳದಲ್ಲಿ  ಇಳಿಯುವ ವೇಳೆ ಸಂಪರ್ಕ ಕಡಿತಗೊಂಡಿತ್ತು.

ಮೂರು ದಿನಗಳಲ್ಲಿ ವಿಕ್ರಂ  ಪತ್ತೆಯಾಗಿ ನಮ್ಮ ಸಂಪರ್ಕಕ್ಕೆ ಬರುವ ಸಾಧ್ಯತೆ ಇದೆ ಎಂದು ಇಸ್ರೋ ಮುಖ್ಯಸ್ಥ ಕೆ.ಶಿವನ್ ದೂರದರ್ಶನಕ್ಕೆ ನೀಡಿದ ವಿಶೇಷ ಸಂದರ್ಶನವೊಂದರಲ್ಲಿ ತಿಳಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ
May 14, 2026
2:42 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ
May 14, 2026
2:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!
May 13, 2026
12:40 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |
May 12, 2026
1:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror