ಮಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯಿದೆಯನ್ನು ಬೆಂಬಲಿಸಿ ನಡೆಯಲಿರುವ ಜನಜಾಗೃತಿ ಸಮಾವೇಶದಲ್ಲಿ ಭಾಗವಹಿಸಲು ಕೇಂದ್ರ ಸಚಿವ ರಾಜನಾಥ್ ಸಿಂಗ್ ರವರು ಆಗಮಿಸಲಿದ್ದಾರೆ.
ಪೌರತ್ವ ಕಾಯಿದೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳ ಸೇರಿದಂತೆ ಉಡುಪಿ ಜಿಲ್ಲೆಯ 5 ವಿಧಾನ ಸಭಾ ಕ್ಷೇತ್ರ ದಿಂದ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಕೇಂದ್ರ ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಬಿಜೆಪಿ ಅದ್ಯಕ್ಷ ನಳಿನ್ ಕುಮಾರ್ ಕಟೀಲ್, ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ,ಉತ್ತರ ಕನ್ನಡ ಸಂಸದ ಅನಂತ್ ಕುಮಾರ್, ಮೈಸೂರು ಸಂಸದ ಪ್ರತಾಪ ಸಿಂಹ ಮತ್ತು ಕರಾವಳಿ ಭಾಗದ ಎಲ್ಲ ಶಾಸಕರು ಹಾಗೂ ರಾಜ್ಯ ಸರ್ಕಾರದ ಪ್ರಮುಖ ಸಚಿವರು ಭಾಗವಹಿಸಲಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel