ಸುಳ್ಯ: ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯನ್.ಜಯಪ್ರಕಾಶ್ ರೈ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ ಅದನ್ನು ಅಂಗೀಕಾರ ಮಾಡಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಹೇಳಿದ್ದಾರೆ. ಈ ಕುರಿತು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪ್ರತಿಕ್ರಿಯಿಸಿದ್ದಾರೆ.
ಕುತೂಹಲ ಕಾದಿರಿಸಿದ ಜಿಲ್ಲಾ ನೇತೃತ್ವದ ನಿರ್ಧಾರ:
ನಗರ ಪಂಚಾಯತ್ ಚುನಾವಣಾ ಫಲಿತಾಂಶ ಬಂದ ಬೆನ್ನಲ್ಲೇ ಜಯಪ್ರಕಾಶ್ ರೈ ಬ್ಲಾಕ್ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಇದರಿಂದ ಸುಳ್ಯ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಈ ಹಿನ್ನಲೆಯಲ್ಲಿ ರಾಜೀನಾಮೆ ಕುರಿತು ಜಿಲ್ಲಾ ನೇತೃತ್ವ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬ ವಿಚಾರ ಕುತೂಹಲ ಕೆರಳಿಸಿದೆ. ಜಯಪ್ರಕಾಶ್ ರೈ ರಾಜೀನಾಮೆಯನ್ನು ಅಂಗೀಕರಿಸಿ ಹೊಸ ಅಧ್ಯಕ್ಷರ ನೇಮಕ ಮಾಡುತ್ತಾರಾ ಅಥವಾ ಜಯಪ್ರಕಾಶ್ ರೈ ಅವರನ್ನೇ ಮುಂದುವರಿಯುವಂತೆ ಸೂಚಿಸುತ್ತಾರಾ ಎಂಬುದು ಕಾದು ನೋಡಬೇಕಾಗಿದೆ. ಅಧ್ಯಕ್ಷರ ನೇಮಕವಾಗ ಬೇಕಾದರೆ ಸಾಲುದ್ದ ಪಟ್ಟಿ ಇದ್ದು ಮತ್ತೆ ಸುಳ್ಯ ತಾಲೂಕು ಕಾಂಗ್ರೆಸ್ ನಲ್ಲಿ ಪೈಪೋಟಿ ಕಾಣಲಿದೆ.