ಸುಳ್ಯ: ಸಾರ್ವಜನಿಕ ಶಿಕ್ಷಣ ಇಲಾಖೆ, ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆ ಇವುಗಳ ಆಶ್ರಯದಲ್ಲಿ ಇಂಗ್ಲಿಷ್ ಭಾಷಾ ಶಿಕ್ಷಕರಿಗೆ ಕಾರ್ಯಗಾರ ಪಯಸ್ವಿನಿ ಪ್ರೌಢಶಾಲೆಯಲ್ಲಿ ನಡೆಯಿತು.
ಕಾರ್ಯಾಗಾರವನ್ನು ಪಯಸ್ವಿನಿ ಪ್ರೌಢಶಾಲಾ ಆಡಳಿತ ಮಂಡಳಿ ಅಧ್ಯಕ್ಷ ದೇರಣ್ಣ ಗೌಡ ಅಡ್ಡಂತಡ್ಕ ಉದ್ಘಾಟಿಸಿ, ಅಧ್ಯಕ್ಷತೆಯನ್ನು ವಹಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ದುಗಲಡ್ಕ ಸರಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕ ಸುಬ್ರಹ್ಮಣ್ಯ, ಗುತ್ತಿಗಾರು ಸರಕಾರಿ ಪ್ರೌಢಶಾಲಾ ಶಿಕ್ಷಕಿ ಚೈತ್ರ, ಅಜ್ಜಾವರ ಸರಕಾರಿ ಪ್ರೌಢಶಾಲಾ ಶಿಕ್ಷಕಿ ವಿದ್ಯಾಶಂಕರಿ, ಪಯಸ್ವಿನಿ ಪ್ರೌಢಶಾಲಾ ಮುಖ್ಯಶಿಕ್ಷಕಿ ಕುಸುಮಾವತಿ ಯು.ಪಿ. ಭಾಗವಹಿಸಿದರು. ಶಿಕ್ಷಕ ಶಿವಪ್ರಕಾಶ್ ವಂದಿಸಿದರು.
ಬಳಿಕ ಕಾರ್ಯಾಗಾರ ನಡೆಯಿತು. ಈ ವೇಳೆ 2019-20ನೇ ಸಾಲಿನಲ್ಲಿ ನಡೆಯುವ ವಾರ್ಷಿಕ ಪ್ರಶ್ನೆ ಪತ್ರಿಕೆ, ನೀಲನಕ್ಷೆ ತಯಾರಿ ಬಗ್ಗೆ, ಪಠ್ಯಪುಸ್ತಕಗಳಲ್ಲಿನ ಕ್ಲಿಷ್ಟಾಂಶಗಳ ಬಗ್ಗೆ ಚರ್ಚಿಸಲಾಯಿತು. ಸಂಜೆ ಸಮಾರೋಪ ಸಮಾರಂಭ ನಡೆಯಿತು.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel