ಜುಲೈ ಒಂದರಂದು ಪತ್ರಕರ್ತರ ಜಿಲ್ಲಾ ಸಮ್ಮೇಳನ : ಶ್ರೀನಿವಾಸ ಇಂದಾಜೆ

June 15, 2019
9:00 AM

ಸುಳ್ಯ. ದ.ಕ‌.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜುಲೈ ಒಂದರಂದು ಮಂಗಳೂರಿನ ಪುರಭವನದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಮ್ಮೇಳನ ನಡೆಯಲಿದೆ ಎಂದು ದ.ಕ‌.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಹೇಳಿದ್ದಾರೆ.

ಜಿಲ್ಲಾ ಸಮ್ಮೇಳನದ ಸಿದ್ಧತೆಯ ಬಗ್ಗೆ ಚರ್ಚಿಸಲು ಸುಳ್ಯ ಪ್ರೆಸ್ ಕ್ಲಬ್ ಗೆ ಆಗಮಿಸಿದ ಅವರು ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದರು.
ಹಿರಿಯ ಪತ್ರಕರ್ತ ಈಶ್ವರ ದೈತೋಟ ಅಧ್ಯಕ್ಷತೆಯಲ್ಲಿ ದಿನಪೂರ್ತಿ ನಡೆಯುವ ಸಮ್ಮೇಳನವನ್ನು ನಾಗಾಲ್ಯಾಂಡ್ ರಾಜ್ಯಪಾಲ ಪಿ.ಬಿ.ಆಚಾರ್ಯ ಉದ್ಘಾಟಿಸುವರು. ಸಚಿವರಾದ ಯು.ಟಿ.ಖಾದರ್, ಜಯಮಾಲಾ ಸೇರಿದಂತೆ ಜನಪ್ರತಿನಿಧಿಗಳು, ಹಿರಿಯ ಪತ್ರಕರ್ತರು ಭಾಗವಹಸಿಲಿದ್ದಾರೆ. ಉದ್ಘಾಟನೆಯ ಬಳಿಕ ಪತ್ರಿಕೋದ್ಯಮ ಕುರಿತ ವಿವಿಧ ವಿಚಾರಗೋಷ್ಠಿ ನಡೆಯಲಿದೆ. ರಾಜ್ಯದ ಹಿರಿಯ ಪತ್ರಕರ್ತರು ವಿಚಾರ ಮಂಡಿಸುವರು. ಬಳಿಕ ಬ್ರಾಂಡ್ ಮಂಗಳೂರು ಕುರಿತು ಪತ್ರಿಕೆ ಮತ್ತು ಟಿ.ವಿ ಸಂಸ್ಥೆಗಳ ಜಿಲ್ಲಾ ಮುಖ್ಯಸ್ಥರೊಂದಿಗೆ ಸಂವಾದ ನಡೆಯಲಿದೆ. ಸಮಾರೋಪ ಸಮಾರಂಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿರುವ 30 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದ ಹಿರಿಯ ಪತ್ರಕರ್ತರನ್ನು ಸನ್ಮಾನಿಸಲಾಗುವುದು.
ಸಮ್ಮೇಳನದ ನೆನಪಿಗಾಗಿ ‘ಸಮಾಚಾರ’ ಎಂಬ ಸ್ಮರಣ ಸಂಚಿಕೆಯನ್ನು ಹೊರ ತರಲಾಗುವುದು ಎಂದು ವಿವರಿಸಿದರು.
ಸಮ್ಮೇಳನದ ಸಂಚಾಲಕ ಹಾಗು ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಬಾಳ ಜಗನ್ನಾಥ ಶೆಟ್ಟಿ ಮಾತನಾಡಿ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪತ್ರಕರ್ತರ ಅದ್ದೂರಿ ಸಮ್ಮೇಳನ ಆಯೋಜಿಸಲಾಗಿದೆ. ಸಿದ್ಧತೆಗಳು ಭರದಿಂದ ನಡೆಯುತ್ತಿದ್ದು ಸಮ್ಮೇಳನದ ಯಶಸ್ವಿಗೆ ಎಲ್ಲರೂ ಸಹಕಾರ ನೀಡಬೇಕು ಎಂದು ಎಂದು ವಿನಂತಿಸಿದರು.
ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ಭಾಸ್ಕರ ರೈ ಕಟ್ಟ ಮಾತನಾಡಿದರು.
ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಹಸೈನಾರ್ ಜಯನಗರ ಸ್ವಾಗತಿಸಿ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಲೋಕೇಶ್ ಪೆರ್ಲಂಪಾಡಿ ವಂದಿಸಿದರು. ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಗಂಗಾಧರ ಕಲ್ಲಪಳ್ಳಿ, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ತೇಜೇಶ್ವರ ಕುಂದಲ್ಪಾಡಿ, ಮಾಜಿ ಅಧ್ಯಕ್ಷರಾದ ಗಂಗಾಧರ ಮಟ್ಟಿ, ಗಿರೀಶ್ ಅಡ್ಪಂಗಾಯ, ಸಂಘದ ಕೋಶಾಧಿಕಾರಿ ವಿಶ್ವನಾಥ ಮೋಟುಕಾನ, ಪದ್ಮನಾಭ ಮುಂಡೋಕಜೆ, ಮುರಳೀಧರ ಅಡ್ಡನಪಾರೆ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ
September 16, 2026
9:14 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ
September 16, 2026
3:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ
September 16, 2026
2:18 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror