ಜೆಡಿಎಸ್ ಜಿಲ್ಲಾಧ್ಯಕ್ಷರ ಬದಲಾವಣೆ ಇಲ್ಲ : ಕೊಡಗು ನಿಯೋಗಕ್ಕೆ ಹೆಚ್.ಡಿ.ದೇವೇಗೌಡರ ಭರವಸೆ

September 22, 2019
11:00 AM

ಮಡಿಕೇರಿ  : ಜಾತ್ಯಾತೀತ ಜನತಾ ದಳದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡ ಅವರು ಅಕ್ಟೋಬರ್ ಮೊದಲ ವಾರದಲ್ಲಿ ಕೊಡಗು ಜಿಲ್ಲೆಗೆ ಭೇಟಿ ನೀಡಿ, ಪಕ್ಷ ಸಂಘಟನೆ ಕುರಿತು ಕಾರ್ಯಕರ್ತರೊಂದಿಗೆ ಚರ್ಚಿಸಲಿದ್ದಾರೆ ಎಂದು ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷ ಸಂಕೇತ್ ಪೂವಯ್ಯ ತಿಳಿಸಿದ್ದಾರೆ.

Advertisement
Advertisement
Advertisement
Advertisement

ತಮ್ಮ ನೇತೃತ್ವದ ಜಿಲ್ಲಾ ಜೆಡಿಎಸ್ ನಿಯೋಗ ಮಾಜಿ ಪ್ರಧಾನಿ ದೇವೆಗೌಡರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಪಕ್ಷದೊಳಗಿನ ಗೊಂದಲಗಳನ್ನು ನಿವಾರಿಸಿಕೊಂಡಿರುವುದಾಗಿ ಪತ್ರಿಕಾ ಹೇಳಿಕೆ ನೀಡಿದ್ದಾರೆ. ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಅವರನ್ನು ಬದಲಾಯಿಸುವುದಿಲ್ಲ ಎನ್ನುವ ಭರವಸೆ ರಾಷ್ಟ್ರೀಯ ಅಧ್ಯಕ್ಷರಿಂದ ಬಂದಿದೆ ಎಂದು ಸಂಕೇತ್ ಪೂವಯ್ಯ ಸ್ಪಷ್ಟಪಡಿಸಿದ್ದಾರೆ.
ಅಕ್ಟೋಬರ್ ಮೊದಲ ವಾರದಲ್ಲಿ ಜಿಲ್ಲೆಯಲ್ಲಿ ಕಾರ್ಯಕರ್ತರ ಸಭೆ ನಡೆಸಲಿರುವ ದೇವೇಗೌಡರು ಜಿಲ್ಲಾಧ್ಯಕ್ಷ ಗಣೇಶ್ ಅವರಿಗೆ ಸಹಕಾರ ನೀಡುವಂತೆ ಕಾರ್ಯಕರ್ತರಿಗೆ ಸೂಚನೆ ನೀಡಲಿದ್ದಾರೆ ಎಂದು ಅವರು ಹೇಳಿದ್ದಾರೆ. ಸಧ್ಯದಲ್ಲಿಯೇ ಮಧ್ಯಂತರ ಚುನಾವಣೆ ಬರಬಹುದೆಂದು ನಿರೀಕ್ಷಿಸಿರುವ ದೇವೆಗೌಡರು ಪಕ್ಷ ಸಂಘಟನೆಗೆ ಒಲವು ತೋರಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಕೆ.ಎಂ.ಗಣೇಶ್ ಅವರು ಎಲ್ಲರನ್ನೂ ಒಗ್ಗೂಡಿಸಿ ಪಕ್ಷ ಸಂಘಟನೆಗೊಳಿಸುವ ಚತುರತೆಯನ್ನು ಹೊಂದಿದ್ದಾರೆ ಎನ್ನುವ ವಿಶ್ವಾಸ ದೇವೇಗೌಡರಿಗಿದೆ. ಇದೇ ಕಾರಣದಿಂದ ಗಣೇಶ್ ಅವರನ್ನು ಜಿಲ್ಲಾಧ್ಯಕ್ಷ ಸ್ಥಾನದಿಂದ ಮುಕ್ತಗೊಳಿಸುವುದಿಲ್ಲವೆಂದು ಭರವಸೆ ನೀಡಿರುವುದಾಗಿ ಹೇಳಿದ್ದಾರೆ.

Advertisement

ಬೆಂಗಳೂರಿನಲ್ಲಿ ತಮ್ಮ ನಿವಾಸದಲ್ಲಿ ಕೊಡಗು ಜೆಡಿಎಸ್ ನಿಯೋಗದೊಂದಿಗೆ ಸುದೀರ್ಘ ಚರ್ಚೆ ನಡೆಸಿದ ಗೌಡರು ಈ ಹಿಂದೆ ಜಿಲ್ಲಾಧ್ಯಕ್ಷ ಸ್ಥಾನದ ಕುರಿತು ಎರಡು ಗುಂಪುಗಳ ನಡುವೆ ನಡೆದ ಮಾತಿನ ಚಕಮಕಿಯ ಬಗ್ಗೆ ಬೇಸರ ವ್ಯಕ್ತಪಡಿಸಿದರು ಎಂದು ತಿಳಿಸಿರುವ ಸಂಕೇತ್ ಪೂವಯ್ಯ, ಗಣೇಶ್ ಅವರಲ್ಲಿ ಸಂಘಟನಾ ಶಕ್ತಿ ಇರುವುದರಿಂದ ಅವರೇ ಜಿಲ್ಲಾಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ದೇವೇಗೌಡರನ್ನು ಭೇಟಿಯಾದ ನಿಯೋಗದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್, ಖಜಾಂಚಿ ಡೆನ್ನಿ ಬರೋಸ್, ಜಿಲ್ಲಾ ಕಾರ್ಯದರ್ಶಿ ಎನ್.ಸಿ.ಸುನೀಲ್, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಇಸಾಕ್‍ಖಾನ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎ.ಶಾಂತಿ ಅಚ್ಚಪ್ಪ, ತಾಲೂಕು ಅಧ್ಯಕ್ಷೆ ಪಿ.ಕುಸುಮಾವತಿ ಮತ್ತಿತರರು ಹಾಜರಿದ್ದರು. ಫೋಟೋ :: ದೇವೇಗೌಡ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ
February 25, 2025
7:20 AM
by: ದ ರೂರಲ್ ಮಿರರ್.ಕಾಂ
ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ
February 25, 2025
7:10 AM
by: The Rural Mirror ಸುದ್ದಿಜಾಲ
ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು
February 25, 2025
7:05 AM
by: The Rural Mirror ಸುದ್ದಿಜಾಲ
ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |
February 24, 2025
10:54 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror