ಟ್ರ್ಯಾಕ್ ನಲ್ಲಿ ಓಡುವುದಿಲ್ಲ, ಕಂಬಳದಲ್ಲೇ ಸಾಧನೆ ಮುಂದುವರಿಸುತ್ತೇನೆ – ಕಂಬಳದ ಓಟಗಾರ ಶ್ರೀನಿವಾಸ ಗೌಡ

February 17, 2020
7:06 PM

ಮಂಗಳೂರು: ಕಂಬಳದ ಉಸೇನ್ ಬೋಲ್ಟ್ ಎಂದೇ ಪ್ರಸಿದ್ದಿಯಾಗಿರುವ ಶ್ರೀನಿವಾಸ ಗೌಡ ನಾನು ಟ್ರ್ಯಾಕ್ ನಲ್ಲಿ ಓಡುವುದಿಲ್ಲ ಕಂಬಳದಲ್ಲೇ ಸಾಧನೆ ಮಾಡಬೇಕೆಂದುಕೊಂಡಿದ್ದೇನೆ ಎಂದು ಹೇಳಿದ್ದು, ಕೇಂದ್ರ ಕ್ರೀಡಾ ಸಚಿವರ ಆಹ್ವಾನವನ್ನು ತಿರಸ್ಕರಿಸಿದ್ದಾರೆ.

ಶ್ರೀನಿವಾಸ ಗೌಡ ಅವರು ತನಗೆ ಟ್ರ್ಯಾಕ್ ನಲ್ಲಿ ಓಡಲು ಸಾಧ್ಯವಿಲ್ಲ, ನಾನೇನಿದ್ದರೂ ಕಂಬಳ ಗದ್ದೆಯಲ್ಲೇ ಕೋಣಗಳ ಜೊತೆ ಓಡುವವನು. ಹೀಗಾಗಿ ಮುಂದೆಯೂ ಕಂಬಳದಲ್ಲೇ ಸಾಧನೆ ಮಾಡಬೇಕೆಂದುಕೊಂಡಿದ್ದೇನೆ ಎಂದು ಹೇಳಿದ್ದು, ಕೇಂದ್ರ ಕ್ರೀಡಾ ಸಚಿವರ ಭಾರತೀಯ ಕ್ರೀಡಾ ಪ್ರಾಧಿಕಾರದ ಕೋಚ್ ಗಳ ಸಾಮರ್ಥ್ಯ ಪರೀಕ್ಷೆ ಬಗ್ಗೆ ಆಸಕ್ತಿ ಹೊಂದಿಲ್ಲ ಎಂದು ಹೇಳಿದರು.

ಇಡೀ ದೇಶವನ್ನೇ ತನ್ನತ್ತ ತಿರುಗುವಂತೆ ಮಾಡಿರುವ ಕಂಬಳದ ಚಿರತೆ ಶ್ರೀನಿವಾಸ ಗೌಡ ಅವರು ಮತ್ತೆ ಇನ್ನೊಂದು ದಾಖಲೆ ಬರೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಪೆರ್ಮುಡದಲ್ಲಿ ನಡೆದ ಸೂರ್ಯ ಚಂದ್ರ ಕಂಬಳದಲ್ಲಿ ಕೇವಲ 15 ದಿನಗಳ ಹಿಂದಿನ ತಮ್ಮ ದಾಖಲೆಯನ್ನು ಪುಡಿಗಟ್ಟಿ ಹೊಸ ದಾಖಲೆ ನಿರ್ಮಿಸಿ, ಕಂಬಳ ಕ್ರೀಡೆಯಲ್ಲಿ ನಾನೇ ಉಸೇನ್ ಬೋಲ್ಟ್ ಎನ್ನುವುದನ್ನು ಮತ್ತೆ ತೋರಿಸಿದ್ದಾರೆ.  ಶ್ರೀನಿವಾಸ್ ಗೌಡ ಅವರ ಈ ರೀತಿಯ ಮಿಂಚಿನ ಓಟದಿಂದಲೇ ವಿಶ್ವದ ಗಮನವನ್ನು ತನ್ನತ್ತ ಸೆಳೆದಿದ್ದಾರೆ. ಹೀಗಾಗಿ ಕೇಂದ್ರ, ರಾಜ್ಯ ಸರ್ಕಾರಗಳೂ ಅವರ ಸಾಧನೆಯನ್ನು ಗುರುತಿಸಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?
September 10, 2026
11:29 AM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ
September 10, 2026
10:59 AM
by: ದ ರೂರಲ್ ಮಿರರ್.ಕಾಂ
ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ
September 9, 2026
9:26 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ
September 9, 2026
1:50 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror