ಡಿ.22 : ಮಡಪ್ಪಾಡಿಯಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ, ಬೃಹತ್ ವೈದ್ಯಕೀಯ ಮತ್ತು ರಕ್ತದಾನ ಶಿಬಿರ

December 17, 2019
7:53 PM

ಸುಳ್ಯ : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ, ಜಿ.ಪಂ., ತಾ.ಪಂ. ಮತ್ತು ಮಡಪ್ಪಾಡಿ ಗ್ರಾ.ಪಂ. ಸಹಭಾಗಿತ್ವದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ಡಿ.22 ರಂದು ಮಡಪ್ಪಾಡಿ ಸರಕಾರಿ ಹಿ.ಪ್ರಾ.ಶಾಲಾ ವಠಾರದಲ್ಲಿ ನಡೆಯಲಿದೆ. ಇದೇ ಸಂದರ್ಭ ಎ.ಜೆ.ವೈದ್ಯಕೀಯ ಮಹಾ ವಿದ್ಯಾಲಯ ಹಾಗೂ ಸಂಶೋಧನಾ ಕೇಂದ್ರ ಸಹಭಾಗಿತ್ವದಲ್ಲಿ ಬೃಹತ್ ವೈದ್ಯಕೀಯ ಶಿಬಿರ, ಇಂಡಿಯನ್ ರೆಡ್‍ಕ್ರಾಸ್ ಸೊಸೈಟಿ ದ.ಕ.ಜಿಲ್ಲಾ ಘಟಕದಿಂದ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

Advertisement

ಪತ್ರಕರ್ತರ ಗ್ರಾಮ ವಾಸ್ತವ್ಯವನ್ನು ಉಪಮುಖ್ಯಮಂತ್ರಿ ಡಾ|ಅಶ್ವಥ್ ನಾರಾಯಣ್ ಉದ್ಘಾಟಿಸಲಿದ್ದಾರೆ. ಶಾಸಕ ಅಂಗಾರ ವೈದ್ಯಕೀಯ ಶಿಬಿರ ಉದ್ಘಾಟಿಸಲಿದ್ದಾರೆ. ಕುತ್ಲೂರು ಗ್ರಾಮ ವಾಸ್ತವ್ಯದ ಮಾಹಿತಿ ಪುಸ್ತಕವನ್ನು ಮಾಜಿ ಸಚಿವ ಯು.ಟಿ.ಖಾದರ್ ಬಿಡುಗಡೆಗೊಳಿಸಲಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಆಶಯ ಭಾಷಣ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ„ಕಾರಿ ಸಿಂಧೂ ಬಿ.ರೂಪೇಶ್, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾ„ಕಾರಿ ಡಾ| ಸೆಲ್ವಮಣಿ ಆರ್, ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಬಿ.ಎಂ.ಲಕ್ಷ್ಮೀ ಪ್ರಸಾದ್, ಆದಾನಿ ಗ್ರೂಪ್ ಅಧ್ಯಕ್ಷ ಕಿಶೋರ್ ಆಳ್ವ, ಶ್ರೀ ಲಕ್ಷ್ಮೀ ಮೆಮೋರಿಯಲ್ ಉಪಾಧ್ಯಕ್ಷ ಪ್ರಶಾಂತ್ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಇಂಡಿಯನ್ ರೆಡ್‍ಕ್ರಾಸ್ ಸೊಸೈಟಿ ಜಿಲ್ಲಾ ಘಟಕ ಸಿ.ಎ.ಶಾಂತರಾಮ ಶೆಟ್ಟಿ, ರಾಷ್ಟ್ರೀಯ ಪತ್ರಕರ್ತರ ಒಕ್ಕೂಟ ಅಧ್ಯಕ್ಷ ಮಲ್ಲಿಕಾರ್ಜುನಯ್ಯ, ಮಡಪ್ಪಾಡಿ ಗ್ರಾ.ಪಂ.ಅಧ್ಯಕ್ಷೆ ಶಕುಂತಳಾ ಕೇವಳ, ಉಪಾಧ್ಯಕ್ಷ ಎನ್.ಟಿ.ಹೊನ್ನಪ್ಪ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಮೊದಲಾದವರು ಭಾಗವಹಿಸಲಿದ್ದಾರೆ.

ಬೆಳಗ್ಗೆ 11 ರಿಂದ 12 ತನಕ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳೊಂದಿಗೆ ಸಂವಾದ ನಡೆಯಲಿದೆ. ಆ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ, ಮಧ್ಯಾಹ್ನ 2 ಗಂಟೆಯಿಂದ 3 ತನಕ ಸ್ಥಳೀಯರೊಂದಿಗೆ ಪತ್ರಕರ್ತರ ಸಂವಾದ, ಆ ಬಳಿಕ ಜನಪ್ರತಿನಿಧಿಗಳೊಂದಿಗೆ ಸಂವಾದ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ಅಂಗಾರ, ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ಆಶಾ ತಿಮ್ಮಪ್ಪ, ತಾ.ಪಂ.ಸದಸ್ಯ ಉದಯ ಕುಮಾರ್ ಕೊಪ್ಪಡ್ಕ, ಗ್ರಾ.ಪಂ.ಅಧ್ಯಕ್ಷೆ ಶಕುಂತಳಾ ಕೇವಳ ಭಾಗವಹಿಸಲಿದ್ದಾರೆ.

ಸಮಾರೋಪ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಮಾರೋಪ ಭಾಷಣ ಮಾಡಲಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲು ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕರಾದ ಸಂಜೀವ ಮಠಂದೂರು, ರಾಜೇಶ್ ನಾೈಕ್, ಉಮಾನಾಥ ಎ ಕೋಟ್ಯಾನ್, ಡಿ.ವೇದವ್ಯಾಸ ಕಾಮತ್, ಡಾ|ಭರತ್ ಶೆಟ್ಟಿ ವೈ, ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಐವನ್ ಡಿಸೋಜ, ಅಪರ ಜಿಲ್ಲಾ„ಕಾರಿ ಎಂ.ಜೆ.ರೂಪಾ, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಡಾ| ಅಮಾಠೆ ವಿಕ್ರಮ್, ಸಹಾಯಕ ಆಯುಕ್ತ ಯತೀಶ್ ಉಳ್ಳಾಲ, ಡಿವೈಎಸ್‍ಪಿ ದಿನಕ ಶೆಟ್ಟಿ, ತಹಶೀಲ್ದಾರ್ ಎನ್.ಎ.ಕುಂಞ ಅಹ್ಮದ್ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು ಭಾಗವಹಿಸಲಿದ್ದಾರೆ.

ತಾಲೂಕಿನಲ್ಲೇ ಪ್ರಥಮ ಪ್ರಯತ್ನ: ಗ್ರಾಮವೊಂದರ ಸಮಸ್ಯೆ-ಸವಾಲುಗಳನ್ನು ಪಟ್ಟಿ ಮಾಡಿ ಆಡಳಿತ, ಅಧಿಕಾರಿ ಹಾಗೂ ಜನರ ನಡುವೆ ಮುಖಾಮುಖಿಯನ್ನಾಗಿಸಿ ಅದಕ್ಕೂಂದು ಪರಿಹಾರ ಒದಗಿಸುವ ನಿಟ್ಟಿನಲ್ಲಿ ಮಡಪ್ಪಾಡಿ ಗ್ರಾಮದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡಿರುವ ಪತ್ರಕರ್ತರ ಗ್ರಾಮ ವಾಸ್ತವ್ಯ ಪರಿಕಲ್ಪನೆ ತಾಲೂಕಿನ ಇತಿಹಾಸದಲ್ಲೇ ಮೊದಲ ಪ್ರಯತ್ನ ಎಂದೆನಿಸಿದೆ.

Advertisement
Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಂತರ ರಾಷ್ಟ್ರೀಯ ಹಲಸು ದಿನ | ಗ್ರಾಮೀಣ ಉದ್ಯಮಿಗಳ ಸಬಲೀಕರಣಕ್ಕೆ ಹಲಸು ಬೆಳೆ ಪೂರಕ |
July 5, 2025
8:12 AM
by: ದ ರೂರಲ್ ಮಿರರ್.ಕಾಂ
ಇಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿವಾದಾಗಲೇ ಅಲ್ಲಿ ಬರ್ಮಾ ಅಡಿಕೆ ವಶಕ್ಕೆ…! | ಕಾರಣ ಏನು..?
July 5, 2025
7:41 AM
by: ದ ರೂರಲ್ ಮಿರರ್.ಕಾಂ
ಶುಕ್ರ- ಶನಿ ಸೇರಿ ಲಾಭ ದೃಷ್ಟಿ ಯೋಗ: ಈ 5 ರಾಶಿಯವರಿಗೆ ಶ್ರೀಮಂತಿಕೆಯ ಸುಯೋಗ..!
July 5, 2025
7:17 AM
by: ದ ರೂರಲ್ ಮಿರರ್.ಕಾಂ
ಸಂಶೋಧನಾ ಕಾರ್ಯಕ್ಕೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ
July 4, 2025
10:40 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group