ನವದೆಹಲಿ: ಇಡಿ ವಶದಲ್ಲಿರುವ ಡಿ ಕೆ ಶಿವಕುಮಾರ್ ಅವರನ್ನು ನಾಳೆಯವರೆಗೆ ನ್ಯಾಯಾಂಗ ಬಂಧನ ವಿಧಿಸಿ ದೆಹಲಿ ಕೋರ್ಟ್ ಮಂಗಳವಾರ ಆದೇಶ ಹೊರಡಿಸಿದೆ. ಆದರೆ ಅವರು ಜೈಲಿನ ಬದಲು ಆಸ್ಪತ್ರೆಯಲ್ಲಿಯೇ ನ್ಯಾಯಾಂಗ ಬಂಧನದಲ್ಲಿರಲಿದ್ದಾರೆ.
Advertisement
ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಜ್ಯಾರಿ ನಿರ್ದೇಶನಾಲಯದ ವಶದಲ್ಲಿ ವಿಚಾರಣೆಯಲ್ಲಿರುವ ಡಿ ಕೆ ಶಿವಕುಮಾರ್ ಅವರ ಕಸ್ಟಡಿ ಅವಧಿ ಇಂದು ಮುಗಿದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ಡಿಕೆ ಶಿವಕುಮಾರ್ ಪರವಾಗಿ ಅಭಿಷೇಕ್ ಸಿಂಘ್ವಿ ಹಾಗೂ ಮುಕುಲ್ ರೋಹ್ಟಗಿ ವಾದ ಮಂಡಿಸಿದರು. ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್ ಅವರು ಡಿಕೆಶಿ ಜಾಮೀನು ಅರ್ಜಿಯ ವಿಚಾರಣೆಯನ್ನು ಬುಧವಾರಕ್ಕೆ ಮಧ್ಯಾಹ್ನ 3 ಗಂಟೆಗೆ ಮುಂದೂಡಿದ ಮುಂದೂಡಿದರು.
Advertisement
ಈ ಸಂದರ್ಭ ಜಾರಿ ನಿರ್ದೇಶನಾಲಯ ಪರ ವಕೀಲರಾದ ಕೆ ಎಂ ನಟರಾಜ ಇನ್ನಷ್ಟು ವಿಚಾರಣೆ ನಡೆಯಬೇಕಾದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನ ಅಗತ್ಯವಿದೆ ಎಂದು ವಾದ ಮಂಡಿಸಿದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement