ಡಿ.ಕೆ.ಶಿ​ವಕುಮಾರ್ ಗೆ ಬಿಗ್ ರಿಲೀಫ್ ​; ಕೊನೆಗೂ ಜಾಮೀನು ನೀಡಿದ ದೆಹಲಿ ಹೈಕೋರ್ಟ್​

October 23, 2019
3:06 PM

ಹಾಗೇ ಅನುಮತಿ ಇಲ್ಲದೆ ವಿದೇಶಕ್ಕೆ ತೆರಳಬಾರದು, ಪಾಸ್​ಪೋರ್ಟ್​ ಸರಂಡರ್​ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ. ಕಳೆದ 48 ದಿನಗಳಿಂದ ಜೈಲಿನಲ್ಲಿದ್ದ ಡಿಕೆಶಿಗೆ ಬಿಗ್​ ರಿಲೀಫ್ ಸಿಕ್ಕಂತಾಗಿದೆ. ಕೋರ್ಟ್ ಆದೇಶದ ಪ್ರತಿ ಇಂದು ಸಂಜೆ 4 ಗಂಟೆಯೊಳಗೆ ಜೈಲು ತಲುಪಲಿದೆ. ಡಿ.ಕೆ.ಶಿವಕುಮಾರ್ ಅವರ ಜಾಮೀನು ಅರ್ಜಿ ತೀರ್ಪು ನೀಡುವ ವೇಳೆ ಕೋರ್ಟ್​ ಹಾಲ್​ನಲ್ಲಿ ಸಂಸದ ಡಿ.ಕೆ.ಸುರೇಶ್​ ಕೂಡಾ ಇದ್ದರು.

Advertisement
Advertisement

2017ರಲ್ಲಿ ಡಿ.ಕೆ.ಶಿವಕುಮಾರ್ ಅವರ ದೆಹಲಿ ಮನೆಯಲ್ಲಿ ಐಟಿ ದಾಳಿಯಾದಾಗ ದಾಖಲೆಗಳಿಲ್ಲದ ಹಣ ಪತ್ತೆಯಾಗಿತ್ತು. ಪ್ರಕರಣವನ್ನು ಕೈಗೆತ್ತಿಕೊಂಡಿದ್ದ ಇ.ಡಿ.ಅಧಿಕಾರಿಗಳು ಡಿ.ಕೆ.ಶಿವಕುಮಾರ್ ಅವರನ್ನು ವಿಚಾರಣೆಗೆಂದು ದೆಹಲಿಗೆ ಕರೆಸಿದ್ದರು. ಆದರೆ ವಿಚಾರಣೆಗೆ ಸರಿಯಾಗಿ ಸ್ಪಂದಿಸಲಿಲ್ಲ ಎಂಬ ಕಾರಣಕ್ಕೆ ಅವರನ್ನು ಬಂಧಿಸಲಾಗಿತ್ತು.

ಆರೋಗ್ಯದಲ್ಲಿ ಏರುಪೇರಾದ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದ ಡಿ.ಕೆ.ಶಿವಕುಮಾರ್ ಬಳಿಕ ತಿಹಾರ್​ ಜೈಲಿನಲ್ಲಿ ಇದ್ದರು. ಈ ಮಧ್ಯೆ ಜಾಮೀನು ಮಂಜೂರು ಮಾಡುವಂತೆ ದೆಹಲಿ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಡಿ.ಕೆ.ಶಿವಕುಮಾರ್ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ಮುಕುಲ್​ ರೋಹಟಗಿ ಈ ಹಿಂದಿನ ಹಲವು ಅಕ್ರಮ ಹಣಕ್ಕೆ ಸಂಬಂಧಪಟ್ಟ ಪ್ರಕರಣಗಳನ್ನು ಉದಾಹರಣೆ ನೀಡಿ, ಇದು ಬಂಧಿಸುವಂತಹ ಕೇಸ್​ ಅಲ್ಲ. ಇ.ಡಿ.ಅಧಿಕಾರಿಗಳು ಎಡವಿದ್ದಾರೆ ಎಂದು ಹೇಳಿದ್ದರು.

ಅಲ್ಲದೆ ಡಿ.ಕೆ.ಶಿವಕುಮಾರ್​ ವಿಚಾರಣೆಗೆ ನುಣುಚಿಕೊಂಡಿಲ್ಲ. ಅವರ ಆರೋಗ್ಯವೂ ಸರಿಯಾಗಿಲ್ಲ. ಈ ಎಲ್ಲ ವಿಚಾರಗಳನ್ನೂ ಪರಿಗಣಿಸಿ ಅವರಿಗೆ ಜಾಮೀನು ನೀಡಬೇಕು ಎಂದು ಮನವಿ ಮಾಡಿದ್ದರು. ಅದಕ್ಕೆ ಪ್ರತಿಯಾಗಿ ವಾದ ಮಾಡಿದ್ದ ಇ.ಡಿ.ಪರ ವಕೀಲ ನಟರಾಜ್​, ಡಿ.ಕೆ.ಶಿವಕುಮಾರ್​ಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು. ಅವರ ಪ್ರಕರಣದಲ್ಲಿ ಅಕ್ರಮ ಸ್ಪಷ್ಟವಾಗಿ ಗೋಚರಿಸುತ್ತದೆ. ಅವರು ವಿಚಾರಣೆಗೆ ಸಹಕರಿಸಿಲ್ಲ. ಇನ್ನೂ ವಿಚಾರಣೆ ಬಾಕಿಯಿದೆ ಎಂದು ಹೇಳಿದ್ದರು. ವಾದ ಪ್ರತಿವಾದ ಆಲಿಸಿದ್ದ ನ್ಯಾಯಾಧೀಶ ಸುರೇಶ್​ ಕುಮಾರ್​ ಕೈಟ್​ ತೀರ್ಪು ಕಾಯ್ದಿರಿಸಿದ್ದರು.

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 18-05-2025 | ಮೇ.19 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸೂಚನೆ | ನಿರೀಕ್ಷೆಗೂ ಮುನ್ನವೇ ಮುಂಗಾರು ನಿರೀಕ್ಷೆ |
May 18, 2025
2:42 PM
by: ಸಾಯಿಶೇಖರ್ ಕರಿಕಳ
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ | ಈ ವರ್ಷ ಅದೃಷ್ಟವೋ ಅದೃಷ್ಟ!
May 18, 2025
10:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಹಾಳೆ ಉದ್ದಿಮೆ-ಮಾರುಕಟ್ಟೆ ಮತ್ತು ಪರಿಣಾಮ
May 18, 2025
8:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ
May 17, 2025
10:22 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group