ಸುಳ್ಯ: ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಡಿ.ವಿ.ಸದಾನಂದ ಗೌಡ ಅವರಿಗೆ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಲಭಿಸಿದೆ. ಕಳೆದ ಅವಧಿಯ ಕೊನೆಯಲ್ಲಿ ಈ ಖಾತೆಯನ್ನು ಸದಾನಂದ ಗೌಡ ಅವರು ಹೆಚ್ಚುವರಿಯಾಗಿ ನಿಭಾಯಿಸಿದ್ದರು.
ಇದೇ ವೇಳೆ ಪ್ರಹ್ಲಾದ್ ಜೋಶಿ ಅವರಿಗೆ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರ ಖಾತೆ , ಸುರೇಶ್ ಅಂಗಡಿ ರೈಲ್ವೇ ಖಾತೆ ರಾಜ್ಯ ಸಚಿವರಾಗಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ವಿತ್ತ ಖಾತೆಯನ್ನು ಹೊಂದಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಅಮಿತ್ ಶಾ ಗೃಹ ಖಾತೆ, ರಾಜನಾಥ್ ಸಿಂಗ್ ರಕ್ಷಣೆ, ನಿತಿನ್ ಗಡ್ಕರಿ ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವರಾಗಿದ್ದಾರೆ.
ನರೇಂದ್ರ ಮೋದಿ ಸಂಪುಟದಲ್ಲಿ 24 ಕ್ಯಾಬಿನೆಟ್, 24 ರಾಜ್ಯ ಸಚಿವರು ಹಾಗೂ 9 ಸ್ವತಂತ್ರ ರಾಜ್ಯ ಸಚಿವರನ್ನು ಒಳಗೊಂಡಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel