ತಡವಾಗಿಯಾದರೂ ಕೊಡಗಿನಲ್ಲಿ ಭಾರೀ ಮಳೆಯಾಗಲಿದೆ : ಹವಾಮಾನ ಇಲಾಖೆ ಮುನ್ಸೂಚನೆ : ಜಿಲ್ಲಾಡಳಿತದಿಂದ ಮುಂಜಾಗ್ರತಾ ಕ್ರಮ

July 20, 2019
9:00 AM

ಮಡಿಕೇರಿ : ಜಿಲ್ಲೆಯಲ್ಲಿ ಜುಲೈ 20 ರಿಂದ 23 ರ ವರೆಗೆ 204 ಮಿ.ಮೀ ಗಿಂತ ಹೆಚ್ಚು (ರೆಡ್ ಅಲರ್ಟ್) ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದ್ದರಿಂದ ಸಾರ್ವಜನಿಕರು ಮತ್ತು ಪ್ರವಾಸಿಗರು ಎಚ್ಚರಿಕೆಯಿಂದಿರಲು ಜಿಲ್ಲಾಡಳಿತ ಮನವಿ ಮಾಡಿದೆ.

ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆಗಳಿಗೆ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ 08272-221077 ಹಾಗೂ ವಾಟ್ಸ್ ಆಪ್ ಸಂಖ್ಯೆ 8550001077 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

ಎಲ್ಲಾ ಇಲಾಖೆಯ ಅಧಿಕಾರಿಗಳು ಎನ್‍ ಡಿ ಆರ್ ಡಿಫ್ ತಂಡದ ಸಹಕಾರದೊಂದಿಗೆ ಮಳೆಯ ಸಂದರ್ಭ ಸಾರ್ವಜನಿಕರ ನೆರವಿಗೆ ಧಾವಿಸಬೇಕು ಮತ್ತು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಈಗಾಗಲೇ ಸೂಚನೆ ನೀಡಿದ್ದಾರೆ.
ಈ ಹಿಂದೆ ಜು.18 ರಿಂದಲೇ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತಾದರೂ ಸಾಧಾರಣ ಮಳೆಯಷ್ಟೇ ಸುರಿದಿದೆ. ಗುರುವಾರ ರಾತ್ರಿ ಮಡಿಕೇರಿಗೆ ಒಂದೂವರೆ ಇಂಚಿನಷ್ಟು ಮಳೆಯಾಗಿದೆ. ಕೊಡಗು-ಕೇರಳ ಗಡಿಭಾಗದ ಕರಿಕೆ ಗ್ರಾಮದಲ್ಲಿ ಗಾಳಿ ಮಳೆಯಾಗಿದ್ದು, ಕೆಲವು ಮರಗಳು ಧರೆಗುರುಳಿ ಹಾನಿಯಾದ ಘಟನೆ ನಡೆದಿದೆ. ಆದರೆ ಜಿಲ್ಲೆಯ ಇತರ ಭಾಗಗಳಲ್ಲಿ ಸಾಧಾರಣ ಮಳೆಯಾಗಿದ್ದು, ಶುಕ್ರವಾರ ಬೆಳಗ್ಗಿನಿಂದಲೇ ತುಂತುರು ಮಳೆಯಾಗುತ್ತಿದ್ದು, ಚಳಿಯ ವಾತಾವರಣವಿದೆ.
ಕರಾವಳಿ ಭಾಗದಲ್ಲಿ ಈಗಾಗಲೇ ಧಾರಾಕಾರ ಮಳೆಯಾಗುತ್ತಿರುವುದರಿಂದ ಕೆಲವು ಗಂಟೆ ತಡವಾಗಿಯಾದರೂ ಕೊಡಗಿಗೆ ಭಾರೀ ಮಳೆಯ ಪ್ರವೇಶವಾಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಸ್ಪಷ್ಟ ಪಡಿಸಿದ್ದಾರೆ.

 ಕೊಡಗು ಮಳೆ ವಿವರ :
ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 16.22 ಮಿ.ಮೀ. ಕಳೆದ ವರ್ಷ ಇದೇ ದಿನ 38.04 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 734.33 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2274.87 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 35.85 ಮಿ.ಮೀ. ಕಳೆದ ವರ್ಷ ಇದೇ ದಿನ 71.75 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 946.70 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 3162.06 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 6 ಮಿ.ಮೀ. ಕಳೆದ ವರ್ಷ ಇದೇ ದಿನ 17.48 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 828.22 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1890.96 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 6.80 ಮಿ.ಮೀ. ಕಳೆದ ವರ್ಷ ಇದೇ ದಿನ 24.90 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 428.08 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1771.58 ಮಿ.ಮೀ. ಮಳೆಯಾಗಿತ್ತು.

 

ಹಾರಂಗಿ ಜಲಾಶಯದ ನೀರಿನ ಮಟ್ಟ :
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2821.09 ಅಡಿಗಳು, ಕಳೆದ ವರ್ಷ ಇದೇ ದಿನ 2857.78 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 3.20 ಮಿ.ಮೀ., ಕಳೆದ ವರ್ಷ ಇದೇ ದಿನ 12.20 ಮಿ.ಮೀ. ಇಂದಿನ ನೀರಿನ ಒಳಹರಿವು 1150 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 14465 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 30 ಕ್ಯುಸೆಕ್. ನಾಲೆಗೆ 20 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನದಿಗೆ 8650, ನಾಲೆಗೆ 450 ಕ್ಯುಸೆಕ್.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ
July 14, 2026
6:53 AM
by: ದ ರೂರಲ್ ಮಿರರ್.ಕಾಂ
ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ
July 14, 2026
6:47 AM
by: ದ ರೂರಲ್ ಮಿರರ್.ಕಾಂ
ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ
July 7, 2026
8:41 PM
by: ಮಿರರ್‌ ಡೆಸ್ಕ್‌
ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ – ಜುಲೈ 2 ರಂದು ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 1, 2026
6:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror