ತಾ.ಪಂ.ಉಪಾಧ್ಯಕ್ಷರ ಮೇಲೆ ಅವಹೇಳನಕಾರಿ ಪ್ರಚಾರಕ್ಕೆ ಕ್ರಮ ಇಲ್ಲ- ತಾ.ಪಂ.ಸಭೆಯಲ್ಲಿ ಆಕ್ರೋಶ

June 25, 2019
1:24 PM

ಸುಳ್ಯ: ಸುಳ್ಯ ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಶುಭದಾ ಎಸ್ ರೈ ಅವರ ಮೇಲೆ ಮಾನಹಾನಿಕರವಾದ ಸಂದೇಶವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿದವರ ಮೇಲೆ ಮತ್ತು ಭಿತ್ತಿ ಪತ್ರ ಮತ್ತು ಕರಪತ್ರಗಳ ಮೂಲಕ ಅಪಪ್ರಚಾರ ಮಾಡಿದವರ ಮೇಲೆ ಪೊಲೀಸ್‌ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ತಾಲೂಕು ಪಂಚಾಯತ್ ಸಭೆಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಯಿತು.

ತಾ.ಪಂ.ಅಧ್ಯಕ್ಷ ಚನಿಯ ಅಧ್ಯಕ್ಷತೆಯಲ್ಲಿ ನಡೆದ ತಾಲೂಕು ಪಂಚಾಯತ್ ಸಾಮಾನ್ಯ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಸ್ಥಾಯಿ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಜನ ಪ್ರತಿನಿಧಿಯ ಮೇಲೆ ಈ ರೀತಿ ಮಾಡಿದವರ ವಿರುದ್ಧ  ಸೈಬರ್ ದಾಳಿ ಮತ್ತು ಭಿತ್ತಿ ಪತ್ರ ಹರಡಿದವರ ಮೇಲೆ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು. ಪ್ರಭಾವಿಗಳ ಒತ್ತಡಕ್ಕೆ ಮಣಿದು ಪೊಲೀಸ್ ಕ್ರಮ ತೆಗೆದುಕೊಂಡಿಲ್ಲ ಎಂದು ಆರೋಪಿಸಿದರು. ಈ ಕುರಿತು ಚರ್ಚೆ ನಡೆದು ಒಂದು ವಾರದಲ್ಲಿ ತನಿಖೆಯ ಪ್ರಗತಿಯ ವರದಿಯನ್ನು ತಾ.ಪಂ.ಅಧ್ಯಕ್ಷರಿಗೆ ಸಲ್ಲಿಸಲು ಮತ್ತು ಅಪಪ್ರಚಾರ ಹರಡಿದವರ ಮೇಲೆ ಸೂಕ್ತ ಕ್ರಮಕ್ಕೆ ಸಭೆ ಸೂಚಿಸಿತು. ಈ ವಿಷಯವನ್ನು ಪ್ರಕರಣದ ತನಿಖೆ ನಡೆಸುವ ಅಧಿಕಾರಿಯ ಗಮನಕ್ಕೆ ತರುವುದಾಗಿ ಸುಳ್ಯ ಎಸ್.ಐ ಸಭೆಗೆ ತಿಳಿಸಿದರು.
ವಿವಿಧ ಸಮಸ್ಯೆಗಳ ಬಗ್ಗೆ ತಾಲೂಕು ಪಂಚಾಯತ್ ಸಾಮಾನ್ಯ ಸಭೆಯಲ್ಲಿ ನಡೆಯಿತು.
ಉಪಾಧ್ಯಕ್ಷೆ ಶುಭದಾ ಎಸ್.ರೈ, ಸ್ಥಾಯಿ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ತಾ.ಪಂ.ಸಹಾಯಕ ನಿರ್ದೇಶಕ ಭವಾನಿಶಂಕರ, ಜಿ.ಪಂ.ಸದಸ್ಯರು, ತಾ.ಪಂ.ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದ ಕರಾವಳಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ
September 18, 2025
9:25 PM
by: The Rural Mirror ಸುದ್ದಿಜಾಲ
ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ತ್ವರಿತವಾಗಿ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಮುಖ್ಯ ಆಯುಕ್ತ ಮಹೇಶ್ವರ ರಾವ್ ಸೂಚನೆ
September 18, 2025
9:11 PM
by: The Rural Mirror ಸುದ್ದಿಜಾಲ
ಮಳೆ ಹಾನಿ ಬೆಳೆನಷ್ಟ ಪರಿಹಾರ ಹೆಚ್ಚಿಸುವವಂತೆ ರೈತರ ನಿಯೋಗದಿಂದ ಮುಖ್ಯಮಂತ್ರಿಗಳಿಗೆ ಒತ್ತಾಯ
September 18, 2025
9:06 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 18-09-2025 | ಮುಂಗಾರು ದುರ್ಬಲ – ಅಲ್ಲಲ್ಲಿ ಗುಡುಗು ಮಳೆ | ಸೆ.19 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸೂಚನೆ
September 18, 2025
1:38 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group