ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಭವಾನಿಶಂಕರ್.ಎನ್

July 28, 2019
11:00 AM

ಸುಳ್ಯ: ಸುಳ್ಯ ತಾಲೂಕು ಪಂಚಾಯತ್‍ನ ನೂತನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಭವಾನಿಶಂಕರ್.ಎನ್ ಇವರನ್ನು ನೇಮಕಗೊಳಿಸಿ ಸರಕಾರ ಆದೇಶಿಸಿದೆ.

ಸುಳ್ಯ ತಾಲೂಕು ಪಂಚಾಯತ್‍ನ ನೂತನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಭವಾನಿಶಂಕರ್.ಎನ್ ಻ವರು 22-07-2019 ರಂದು ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಮಧುಕುಮಾರ್.ಆರ್ ಇವರಿಂದ ಅಧಿಕಾರ ಸ್ವೀಕರಿಸಿರುತ್ತಾರೆ. ಈ ಹಿಂದೆ ಸುಮಾರು ಮೂರುವರೆ ವರ್ಷಗಳ ಕಾಲ ಸುಳ್ಯ ತಾಲೂಕು ಪಂಚಾಯತ್‍ನ ಸಹಾಯಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಭವಾನಿಶಂಕರ್.ಎನ್ ಅವರಿಗೆ ಪದೋನ್ನತಿ ನೀಡಿ ಸುಳ್ಯ ತಾಲೂಕು ಪಂಚಾಯತ್‍ನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನಿಯುಕ್ತಿಗೊಳಿಸಲಾಗಿದೆ.
ಸುಳ್ಯ ತಾಲೂಕು ಪಂಚಾಯತ್‍ನ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಆರ್.ಮಧುಕುಮಾರ್ ಅವರು ಯೋಜನಾ ನಿರ್ದೇಶಕರಾಗಿ ಪದೋನ್ನತಿ ಹೊಂದಿ ಉಡುಪಿ ಜಿಲ್ಲಾ ಪಂಚಾಯತ್‍ಗೆ ವರ್ಗಾವಣೆಗೊಂಡಿರುವುದರಿಂದ ಹುದ್ದೆ ತೆರವಾಗಿತ್ತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ
ಗೇರುಹಣ್ಣು ಮೌಲ್ಯವರ್ಧನೆಗೆ ಉಚಿತ ತರಬೇತಿ : ಪುತ್ತೂರಿನ DCR ವತಿಯಿಂದ ಅವಕಾಶ
March 22, 2026
7:39 AM
by: ಮಿರರ್‌ ಡೆಸ್ಕ್
ಆಲಿಕಲ್ಲು ಮಳೆಯಿಂದ ಬೆಳೆ ರಕ್ಷಣೆ | ರೈತರಿಗೆ ‘ಆಂಟಿ-ಹೈಲ್ ನೆಟ್’ ಹೊಸ ತಂತ್ರಜ್ಞಾನ
March 20, 2026
8:14 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror