ತುಳುವೆರೆ ಪಾರಂಪರಿಕ ಜ್ಞಾನ: ವಿಚಾರ ಸಂಕಿರಣ

January 23, 2020
8:36 PM

ಧರ್ಮಸ್ಥಳ :  ಪ್ರಾಚೀನ ಮತ್ತುಆಧುನಿಕತೆಯ ಸಂಗಮ ಕಾಲದಲ್ಲಿರುವ ನಾವು ಭವ್ಯ ಇತಿಹಾಸ, ಪರಂಪರೆ ಮತ್ತು ವೈವಿಧ್ಯಮಯ ಹಿನ್ನೆಲೆ ಹೊಂದಿರುವ ತುಳುಭಾಷೆ ಮತ್ತು ಸಂಸ್ಕೃತಿ ಬಗ್ಗೆ ಕೇಳರಿಮೆ ಹೊಂದದೆ ಅಭಿಮಾನ, ಗೌರವದೊಂದಿಗೆ ಉಳಿಸಿಕೊಳ್ಳಬೇಕು ಎಂದು ಧರ್ಮಸ್ಥಳದ ಹೇಮಾವತಿ ವೀ ಹೆಗ್ಗಡೆಯವರು ಹೇಳಿದರು.

Advertisement

ಮಂಗಳೂರು ವಿಶ್ವವಿದ್ಯಾಲಯದ ಎಸ್.ಡಿ.ಎಂ.ತುಳುಪೀಠ ಮತ್ತು ಉಜಿರೆಯ ಎಸ್.ಡಿ.ಎಂ.ಕಾಲೇಜಿನ ಕನ್ನಡ ವಿಭಾಗದ ತುಳು ಸಂಘದ ಜಂಟಿ ಆಶ್ರಯದಲ್ಲಿಉಜಿರೆಯಲ್ಲಿಎಸ್.ಡಿ.ಎಂ.ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಗುರುವಾರ ಆಯೋಜಿಸಿದ “ತುಳುವೆರೆ ಪಾರಂಪರಿಕ ಜ್ಞಾನ” ಎಂಬ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.  ತುಳುನಾಡಿನ ನಂಬಿಕೆ-ನಡವಳಿಕೆಗಳು, ಆಚಾರ-ವಿಚಾರಗಳು, ಸಂದಿ-ಪಾಡ್ದನಗಳು, ತಾಳ ಮದ್ದಳೆ, ಯಕ್ಷಗಾನ, ಜಾನಪದ ಕಲೆಗಳು, ಬಲೀಂದ್ರ ಪೂಜೆ, ಭೂತಾರಾಧನೆ, ನಾಗಾರಾಧನೆ, ಕೃಷಿ ಸಂಸ್ಕೃತಿ ನಮ್ಮ ಸಾರ್ಥಕ ಬದುಕಿಗೆ ಪ್ರೇರಕವಾಗಿವೆ.  ಸರ್ವಧರ್ಮೀಯರೊಂದಿಗೆ ಸಾಮರಸ್ಯದ ಸಾರ್ಥಕ ಬದುಕಿಗೆ ಮಾರ್ಗದರ್ಶಕವಾಗಿದೆ ಎಂದರು.

ಎಸ್.ಡಿ.ಎಂ.ಕಾಲೇಜಿನ ಐಚ್ಛಿಕ ಕನ್ನಡ ವಿದ್ಯಾರ್ಥಿಗಳು ರಚಿಸಿದ “ಅರಿವು”  ಡಿಜಿಟಲ್ ಪತ್ರಿಕೆಯನ್ನು ಡಾ. ಬಿ. ಯಶೋವರ್ಮ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಯುವಜನತೆ ತುಳು ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು ಎಂದು ಅವರು ಸಲಹೆ ನೀಡಿದರು.

ತುಳು ನಾಡಿನ ನಂಬಿಕೆಗಳು ಮೂಡ ನಂಬಿಕೆಗಳಲ್ಲ, ಮೂಲ ನಂಬಿಕೆಗಳು: 

ಅಧ್ಯಕ್ಷತೆ ವಹಿಸಿದ ಮಂಗಳೂರು ವಿ.ವಿ. ಕುಲಪತಿ ಡಾ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಮಾತನಾಡಿ, ಭವ್ಯ ಇತಿಹಾಸ ಮತ್ತು ಪರಂಪರೆ ಹೊಂದಿರುವ ವೈವಿದ್ಯಮಯ ತುಳು ಭಾಷೆ ಮತ್ತು ಸಂಸ್ಕೃತಿಯನ್ನು ಮರೆತರೂ, ಮರೆಯಲು ಸಾಧ್ಯವಿಲ್ಲ ಎಂದು ಹೇಳಿದರು. ನಮ್ಮ ನಂಬಿಕೆ-ನಡವಳಿಕೆಗಳು, ಆಚಾರ-ವಿಚಾರಗಳು ವೈಜ್ಞಾನಿಕ ಹಿನ್ನಲೆ ಹೊಂದಿದ್ದುಗೊಡ್ಡು ಸಂಪ್ರಾಯಗಳಲ್ಲ. ತುಳುನಾಡಿನ ನಂಬಿಕೆಗಳು ಮೂಡ ನಂಬಿಕೆಗಳಲ್ಲ, ಮೂಲ ನಂಬಿಕೆಗಳು ಎಂದು ಅವರು ಸ್ಪಷ್ಟ ಪಡಿಸಿದರು.

Advertisement

ಮಂಗಳೂರು ವಿ.ವಿ. ತುಳು ಪೀಠದ ಸಂಯೋಜಕ ಡಾ.ಮಾಧವ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್.ಡಿ.ಎಂ.ಕಾಲೇಜಿನ ಪ್ರಾಂಶುಪಾಲ ಪ್ರೊ.ಎಸ್.ಸತೀಶ್ಚಂದ್ರ  ಸ್ವಾಗತಿಸಿದರು. ಡಾ. ಸನ್ಮತಿ ಕುಮಾರ್ ಧನ್ಯವಾದವಿತ್ತರು. ಡಾ. ದಿವಾಕರ ಕೆ. ಕಾರ್ಯಕ್ರಮ ನಿರ್ವಹಿಸಿದರು.

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಂತರ ರಾಷ್ಟ್ರೀಯ ಹಲಸು ದಿನ | ಗ್ರಾಮೀಣ ಉದ್ಯಮಿಗಳ ಸಬಲೀಕರಣಕ್ಕೆ ಹಲಸು ಬೆಳೆ ಪೂರಕ |
July 5, 2025
8:12 AM
by: ದ ರೂರಲ್ ಮಿರರ್.ಕಾಂ
ಇಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿವಾದಾಗಲೇ ಅಲ್ಲಿ ಬರ್ಮಾ ಅಡಿಕೆ ವಶಕ್ಕೆ…! | ಕಾರಣ ಏನು..?
July 5, 2025
7:41 AM
by: ದ ರೂರಲ್ ಮಿರರ್.ಕಾಂ
ಶುಕ್ರ- ಶನಿ ಸೇರಿ ಲಾಭ ದೃಷ್ಟಿ ಯೋಗ: ಈ 5 ರಾಶಿಯವರಿಗೆ ಶ್ರೀಮಂತಿಕೆಯ ಸುಯೋಗ..!
July 5, 2025
7:17 AM
by: ದ ರೂರಲ್ ಮಿರರ್.ಕಾಂ
ಸಂಶೋಧನಾ ಕಾರ್ಯಕ್ಕೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ
July 4, 2025
10:40 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group