ತೋಟಗಾರಿಕಾ ಬೆಳೆ ವಿಮೆ ಸೌಲಭ್ಯ | ವಿಮಾ ಕಂತು ಪಾವತಿಸಲು ಜೂ.30 ಕೊನೆಯ ದಿನ |

June 30, 2020
7:30 AM

ಮಂಗಳೂರು : ತೋಟಗಾರಿಕೆ ಬೆಳೆಗಳಿಗೆ ಸಂಬಂಧಿಸಿ ಬೆಳೆ ವಿಮೆ ಕಾರ್ಯಕ್ರಮವನ್ನು ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ  ಕಾರ್ಯಕ್ರಮದಲ್ಲಿ 2020, 2021, 2022 ಮೂರು ವರ್ಷಗಳಿಗೆ ಮುಂಗಾರು ಹಂಗಾಮಿಗೆ ಅನ್ವಯಿಸಿ ಕರ್ನಾಟಕ ಸರಕಾರ ಆದೇಶ ಹೊರಡಿಸಿದೆ.

Advertisement
Advertisement

ಈ ಯೋಜನೆಯು ಕೇಂದ್ರ ಸರಕಾರ ನೀಡಿರುವ ಮಾನದಂಡಗಳ ಆಧಾರದಲ್ಲಿ ತೋಟಗಾರಿಕೆ ರೈತರಿಗೆ ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಉಂಟಾದಲ್ಲಿ ವಿಮಾ ನಷ್ಟ ಪರಿಹಾರವನ್ನು ಪಡೆಯಲು ಅವಕಾಶವನ್ನು ಕಲ್ಪಿಸಲಾಗುತ್ತದೆ. ಈ ಯೋಜನೆಯನ್ನು ಮುಂಗಾರು ಹಂಗಾಮಿಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ನಗರ ಸ್ಥಳೀಯಾಡಳಿತ ಸಂಸ್ಥೆ ಹಾಗೂ ಎಲ್ಲಾ 231 ಗ್ರಾಮ ಪಂಚಾಯತ್‍ಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.

 ಸದರಿ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2020, 2021, 2022ನೇ ಮುಂಗಾರು ಹಂಗಾಮಿಗೆ ಅಡಿಕೆ ಮತ್ತು ಕರಿಮೆಣಸು ಬೆಳೆಗಳನ್ನು ಅಧಿಸೂಚಿಸಿ ಆದೇಶ ಹೊರಡಿಸಲಾಗಿದೆ. 2020ರ ಮುಂಗಾರು ಹಂಗಾಮಿಗೆ ಸಂಬಂಧಿಸಿ ವಿಮಾ ಕಂತು ಪಾವತಿಸಲು ಜೂನ್ 30 ಅಂತಿಮ ದಿನವಾಗಿರುತ್ತದೆ.

ಈ ಯೋಜನೆಯು ಅಧಿಸೂಚಿತ ಬೆಳೆಗಳಿಗೆ ಬ್ಯಾಂಕ್‍ಗಳಿಂದ (ರಾಷ್ಟ್ರೀಕೃತ ಬ್ಯಾಂಕ್/ ಖಾಸಗಿ/ ಸಹಕಾರಿ ಬ್ಯಾಂಕ್‍ಗಳು) ಬೆಳೆ ಸಾಲ ಪಡೆದಿರುವ ರೈತರಿಗೆ ಹಾಗೂ ಬೆಳೆ ಸಾಲ ಹೊಂದಿಲ್ಲದ ರೈತರಿಗೆ ಐಚ್ಚಿಕವಾಗಿರುತ್ತದೆ. ಈ ಯೋಜನೆಯಡಿ ತೋಟಗಾರಿಕೆ ರೈತರು ಅಧಿಸೂಚಿತ ಬೆಳೆಗಳಿಗೆ ಸಂಬಂಧಿಸಿ ಸಾಲ ಪಡೆದುಕೊಂಡಿರುವ ಬ್ಯಾಂಕ್‍ಗಳ ಮೂಲಕ ಹಾಗೂ ಸಾಲ ಪಡೆಯದಿರುವ ರೈತರು ಉಳಿತಾಯ ಖಾತೆಯನ್ನು ಹೊಂದಿರುವ ಬ್ಯಾಂಕ್‍ಗಳ ಮೂಲಕ ವಿಮಾ ಕಂತುಗಳನ್ನು ಪಾವತಿಸಿ ಯೋಜನೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.

ಈ ಯೋಜನೆಯಡಿ ಅಧಿಸೂಚಿತ ತೋಟಗಾರಿಕೆ ಬೆಳೆಗಳನ್ನು 2020ರ ಮುಂಗಾರು ಹಂಗಾಮಿಗೆ ಸಂಬಂಧಿಸಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಅನುಷ್ಠಾನಗೊಳಿಸಲು ಸೂಚಿಸಲಾಗಿದೆ.

Advertisement

ಈ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಹಾಗೂ ಕರಿಮೆಣಸು ಬೆಳೆಗಳನ್ನು ಮುಂಗಾರು ಹಂಗಾಮಿಗೆ ಸೇರ್ಪಡೆಗೊಳಿಸಲಾಗಿದೆ. ಈ ಯೋಜನೆಯ ಅನುಸಾರ ಬೆಳೆ ಸಾಲ ಪಡೆದಿರುವ ಹಾಗೂ ಬೆಳೆ ಸಾಲ ಹೊಂದಿಲ್ಲದ ರೈತರಿಗೆ ಅಧಿಸೂಚಿತ ಬೆಳೆಗಳಿಗೆ ಈ ಕೆಳಗಿನಂತೆ ವಿಮಾ ಕಂತನ್ನು ಪಾವತಿಸಿ ವಿಮೆಯನ್ನು ಹೊಂದಬಹುದು.

ಅಡಿಕೆ ಬೆಳೆಗೆ ಪ್ರತೀ ಹೆಕ್ಟೆರ್ ವಿಮಾ ಮೊತ್ತ ರೂ 1,28,000 ರೈತರು ಪಾವತಿಸಬೇಕಾದ ವಿಮಾಕಂತು (ಶೇ.5) ರೂ. 6400, ಕರಿಮೆಣಸು ಬೆಳೆಗೆ ಪ್ರತೀ ಹೆಕ್ಟೆರ್‍ಗೆ ವಿಮಾ ಮೊತ್ತ ರೂ 47,000 ರೈತರು ಪಾವತಿಸಬೇಕಾದ ವಿಮಾಕಂತು (ಶೇ.5) ರೂ. 2350 ಆಗಿರುತ್ತದೆ.

ಈ ಯೋಜನೆಯಡಿ ಸರ್ಕಾರದ ಪಾಲನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಲಾ ಶೇ.50 ರ ಅನುಪಾತದಲ್ಲಿ ಭರಿಸುತ್ತದೆ. ಈ ಹವಾಮಾನ ಆಧಾರಿತ ವಿಮಾ ಯೋಜನೆಯಲ್ಲಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ  ಆಯಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ಥಾಪಿಸಿರುವ ಮಳೆ ಮಾಪನ ಮತ್ತು ಹವಾಮಾನ ಮಾಪನ ಕೇಂದ್ರಗಳು, ಭಾರತೀಯ ಹವಾಮಾನ ಇಲಾಖೆಯ ಕೇಂದ್ರಗಳು, ಕೃಷಿ ವಿಶ್ವವಿದ್ಯಾನಿಲಯಗಳು, ರಾಜ್ಯ ಜಲ ಸಂಪನ್ಮೂಲ ಅಭಿವೃಧ್ಧಿ ಸಂಸ್ಥೆಯ ಕೇಂದ್ರಗಳಲ್ಲಿ ದಾಖಲಿಸಲಾದ ಹವಾಮಾನ ಅಂಶಗಳ ಮಾಹಿತಿಯ ಆಧಾರದಲ್ಲಿ ಬೆಳೆ ವಿಮೆ ನಷ್ಟ ಪರಿಹಾರವನ್ನು ಇತ್ಯರ್ಥ ಪಡಿಸಲಾಗುವುದು. ಬೆಳೆ ವಿಮೆಗಳಿಗೆ ಸಂಬಂಧಿಸಿ ಅಧಿಸೂಚಿತ ಬೆಳೆಗಳ Term Sheet ಗಳನ್ನು ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯ ತಾಂತ್ರಿಕ ಸಮಿತಿಯಲ್ಲಿ ಅನುಮೋದಿಸಿ ಸಲ್ಲಿಸಲಾಗಿರುತ್ತದೆ. 2016ರ ಮುಂಗಾರು ಹಂಗಾಮಿನಿಂದ ಈ ಯೋಜನೆಯ ಅನುಷ್ಠಾನವನ್ನು ಕರ್ನಾಟಕ ಸರ್ಕಾರದಿಂದ ಅಭಿವೃದ್ದಿಪಡಿಸಲಾದ Online portal (samrakshane@nic.in) ಮೂಲಕ ಮಾತ್ರವೇ ರೈತರ ವಿವರಗಳನ್ನು ನೊಂದಾಯಿಸಿ ವಿಮಾ ಪಾಲಿಸಿ ಹೊಂದಲು ಅನುಷ್ಠಾನಕ್ಕೆ ತರಲಾಗಿದೆ.

ಈ ಯೋಜನೆಯಡಿ 2020ರ ಮುಂಗಾರು ಹಂಗಾಮಿನಲ್ಲಿ ಸ್ಥಳೀಯ ನಿರ್ಧಿಷ್ಟ ಪ್ರಕೃತಿ ವಿಕೋಪಗಳಾದ ಆಲಿ ಕಲ್ಲು ಮಳೆ, ಭೂಕುಸಿತ ಮತ್ತು ಮೇಘ ಸ್ಫೋಟ ಇವುಗಳಿಂದ ಬೆಳೆ ನಷ್ಟ ಸಂಭಂವಿಸಿದಲ್ಲಿ ಬೆಳೆ ವಿಮೆ ಮಾಡಿಸಿರುವ ರೈತರು ಈ ಬಗ್ಗೆ ಸಂಬಂಧಪಟ್ಟ ಹಣಕಾಸು ಸಂಸ್ಥೆ ಅಥವಾ ಅನುಷ್ಠಾನಗೊಳಿಸುವ ವಿಮಾ ಸಂಸ್ಥೆಗಳ ಕಚೇರಿಗಳಿಗೆ ಹಾನಿ ಸಂಭವಿಸಿದ 72 ಗಂಟೆಗೊಳಗಾಗಿ ಬೆಳೆ ವಿವರ, ಹಾನಿಯ ವ್ಯಾಪ್ತಿ ಹಾಗೂ ಹಾನಿಯ ಕಾರಣಗಳನ್ನು ಲಿಖಿತವಾಗಿ ನೀಡತಕ್ಕದ್ದು, ಇಂತಹ ಸಂಧರ್ಭದಲ್ಲಿ ಉಂಟಾಗುವ ನಷ್ಟದ ನಿರ್ಧರಣೆಯನ್ನು ವೈಯಕ್ತಿಕವಾಗಿ ನಿರ್ಧರಿಸಿ ಬೆಳೆ ವಿಮಾ ನಷ್ಟ ಪರಿಹಾರವನ್ನು ವಿಮಾ ಸಂಸ್ಥೆಯು ಕಂದಾಯ, ತೋಟಗಾರಿಕೆ ಹಾಗೂ ಕೃಷಿ ಇಲಾಖೆಗಳ ಸಮನ್ವಯದೊಂದಿಗೆ ಇತ್ಯರ್ಥ ಪಡಿಸಲಾಗುತ್ತದೆ. ಇದರ ಹೊರತು ಸಾಮಾನ್ಯ ಸಂಧರ್ಭಗಳಲ್ಲಿ ಬೆಳೆ ನಷ್ಟಗಳನ್ನು ಜಿಲ್ಲಾ ಸಮಿತಿ ಹಾಗೂ ಸರ್ಕಾರಗಳು ಅನುಮೋದಿಸಿರುವ ಮಾನದಂಡಗಳನ್ನು ಮಾತ್ರ ಪರಿಗಣಿಸಿಬೆಳೆ ವಿಮಾ ನಷ್ಟ ಪರಿಹಾರವನ್ನು ವಿಮಾ ಸಂಸ್ಥೆಗಳು ಲೆಕ್ಕ ಹಾಕಿ ಇತ್ಯರ್ಥ ಪಡಿಸುತ್ತವೆ.

ಹಣಕಾಸು ಸಂಸ್ಥೆಗಳಿಂದ ಬೆಳೆ ಸಾಲವನ್ನು ಹೊಂದಿಲ್ಲದ ತೋಟಗಾರಿಕೆ ರೈತರು ನಿಗದಿತ ಅರ್ಜಿಯೊಂದಿಗೆ ಜಮೀನಿನ ಪಹಣಿ ಪ್ರತಿ, ಉಳಿತಾಯ ಖಾತೆ ಪಾಸ್ ಪುಸ್ತಕ, ಆಧಾರ್ ಕಾರ್ಡ್ ಅಥವಾ ಆಧಾರ್ ಕಾರ್ಡ್ ಹೊಂದಿಲ್ಲದಿದ್ದಲ್ಲಿ ಸರ್ಕಾರದ ಇತರೆ ಯಾವುದೇ ಅಧಿಕೃತ ಗುರುತಿನ ಚೀಟಿ, ಸ್ವಯಂ ಘೋಷಿಸಿ ದೃಢೀಕರಿಸಿದ ಜಮೀನಿನ ಬೆಳೆ ಪತ್ರ ಹಾಗೂ ಪ್ರಿಮಿಯಂ ವಿಮಾ ಮೊತ್ತದೊಂದಿಗೆ ಸಲ್ಲಿಸಿ ನೊಂದಣಿ ಮಾಡಿಸಿಕೊಳ್ಳಬಹುದು.
ಈ ಯೋಜನೆಯಡಿ ವಿಮಾ ನಷ್ಟ ಪರಿಹಾರವನ್ನುAdhar Card enabled RTGS/NEFT  ಮೂಲಕ ಇತ್ಯರ್ಥಪಡಿಸಲಾಗುವ ಕಾರಣ ಎಲ್ಲಾ ರೈತರು ಆಧಾರ್ ಕಾರ್ಡ್ ಮಾಹಿತಿಗಳನ್ನು ಒದಗಿಸಲು ಕೋರಲಾಗಿದೆ.

Advertisement

ಈ ಯೋಜನೆಯನ್ನು ಭಾರತ ಸರ್ಕಾರ ಹಾಗೂ ಕರ್ನಾಟಕ ಸರ್ಕಾರಗಳು ರೈತ ಸಮುದಾಯಕ್ಕೆ ಉಪಯುಕ್ತವಾದ ಯೋಜನೆಯಾಗಿಸಲು ಉದ್ದೇಶಿಸಿರುವುದರಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದರಿ ಯೋಜನೆಯ ಲಾಭವನ್ನು ಪಡೆಯಬಹುದು.

ಹೆಚ್ಚಿನ ವಿವರಗಳಿಗೆ ಸ್ಥಳೀಯ ವಾಣಿಜ್ಯ/ಗ್ರಾಮೀಣ ಸಹಕಾರಿ ಬ್ಯಾಂಕ್/ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರದ ತೋಟಗಾರಿಕೆ ಅಥವಾ ಕೃಷಿ ಅಧಿಕಾರಿಗಳು/ತಾಲೂಕು ಮಟ್ಟದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು/ಜಿಲ್ಲಾ ತೋಟಗಾರಿಕೆ ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು.

ಸಂಪರ್ಕಿಸ ಬಹುದಾದ ದೂರವಾಣಿ ಸಂಖ್ಯೆ:

ದ.ಕ. ಜಿ.ಪಂ., ಮಂಗಳೂರು ತೋಟಗಾರಿಕೆ ಉಪನಿರ್ದೇಶಕರು ದೂರವಾಣಿ ಸಂಖ್ಯೆ 9448999226,

ಜಿ.ಪಂ. ಮಂಗಳೂರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ದೂರವಾಣಿ ಸಂಖ್ಯೆ  8277806378 (0824-2423615),

Advertisement

ಜಿ.ಪಂ ಬಂಟ್ವಾಳ   ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ದೂರವಾಣಿ ಸಂಖ್ಯೆ 8277806371 (08255-234102),

ಜಿ.ಪಂ ಪುತ್ತೂರು   ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ದೂರವಾಣಿ ಸಂಖ್ಯೆ  9731854527 (08251-230905),

ಜಿ.ಪಂ., ಸುಳ್ಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ದೂರವಾಣಿ ಸಂಖ್ಯೆ 9880993238 (08257-232020),

ಜಿ.ಪಂ ಬೆಳ್ತಂಗಡಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ. 8277806380 (08256-232148)

ಸಂಪರ್ಕಿಸಲು ಮಂಗಳೂರು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆಗೆ ಕೊಳೆರೋಗ | ಮಳೆಯಲ್ಲೂ ಇವರು ಔಷಧಿ ಸಿಂಪಡಿಸುತ್ತಾರೆ..!
July 24, 2025
4:42 PM
by: The Rural Mirror ಸುದ್ದಿಜಾಲ
ಕೃಷಿಕರಿಗೆ ಕೈಕೊಟ್ಟ ಹವಾಮಾನ | ಅಡಿಕೆಗೆ ವ್ಯಾಪಕವಾಗಿ ಹರಡಿದ ಕೊಳೆರೋಗ | ರೋಗನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನದಲ್ಲಿ ಅಡಿಕೆ ಬೆಳೆಗಾರರು |
July 24, 2025
10:48 AM
by: ವಿಶೇಷ ಪ್ರತಿನಿಧಿ
ಹವಾಮಾನ ಆಧಾರಿತ ಬೆಳೆ ವಿಮೆಗೆ ಸಮಸ್ಯೆ | ಮಳೆ ಮಾಪನ ಯಂತ್ರಗಳ ನಿರ್ವಹಣೆ ಅವ್ಯವಸ್ಥೆ ಸರಿಪಡಿಸಲು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ
July 23, 2025
7:21 AM
by: The Rural Mirror ಸುದ್ದಿಜಾಲ
ಕೋಲಾರದಲ್ಲಿ ರೈತರಿಗೆ ವರದಾನವಾದ ತೋಟಗಾರಿಕಾ ಯೋಜನೆ | ಪಾಲಿ ಹೌಸ್‌ ಮೂಲಕ ವಿವಿಧ ಬೆಳೆ |
July 23, 2025
7:03 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group