ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸಿಂಧು ಬಿ. ರೂಪೇಶ್ ಅವರು ಶನಿವಾರ ಮಂಗಳೂರಿನಲ್ಲಿ ಅಧಿಕಾರ ಸ್ವೀಕರಿಸಿದರು. ಅಪರ ಜಿಲ್ಲಾಧಿಕಾರಿ ರೂಪಾ ನೂತನ ಜಿಲ್ಲಾಧಿಕಾರಿಗಳನ್ನು ಸ್ವಾಗತಿಸಿದರು. ಮಂಗಳೂರು ಉಪವಿಭಾಗಾಧಿಕಾರಿ ರವಿಚಂದ್ರ ನಾಯ್ಕ್, ತಹಶೀಲ್ದಾರ್ ಗುರುಪ್ರಸಾದ್ ಉಪಸ್ಥಿತರಿದ್ದರು.
Advertisement
ಸಿಂಧು ಅವರು ದಕ್ಷಿಣ ಕನ್ನಡ ಜಿಲ್ಲೆಯ ಎರಡನೇ ಮಹಿಳಾ ಜಿಲ್ಲಾಧಿಕಾರಿ. ಈ ಹಿಂದೆ, 1989 ರಲ್ಲಿ ರಂಜನಿ ಶ್ರೀಕುಮಾರ್ ಅವರು ಅವಿಭಜಿತ ದ.ಕ. ಜಿಲ್ಲೆಯ ಪ್ರಥಮ ಮಹಿಳಾ ಜಿಲ್ಲಾಧಿಕಾರಿಯಾಗಿದ್ದರು. ಸಿಂದು ಬಿ. ರೂಪೇಶ್ ಅವರು ದ.ಕ. ಜಿಲ್ಲೆಯ 129 ನೇ ಜಿಲ್ಲಾಧಿಕಾರಿ. ಇದೇ ಮೊದಲ ಬಾರಿಗೆ ದ.ಕ. ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳೆರಡೂ ಹುದ್ದೆಗಳಲ್ಲಿ ಮಹಿಳೆಯರಿರುವುದು ವಿಶೇಷ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement