ದ ಕ ಜಿಲ್ಲೆ ಬುಧವಾರವೂ ಕೊರೊನಾ ನೆಗೆಟಿವ್ | ಕಾಸರಗೋಡಿನಲ್ಲಿಇಬ್ಬರಿಗೆ ಪಾಸಿಟಿವ್ |

April 29, 2020
10:05 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಬುಧವಾರವೂ ಕೊರೊನಾ ವೈರಸ್ ಪರೀಕ್ಷಾ ವರದಿಯಲ್ಲಿ  ಎಲ್ಲಾ ನೆಗೆಟಿವ್ ಬಂದಿದೆ. 390 ಜನರ ಪರೀಕ್ಷಾ ವರದಿ ಬುಧವಾರ ಬಂದಿದೆ. ಬುಧವಾರದಂದು 248 ಮಂದಿಯ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ರವಾನಿಸಲಾಗಿದೆ. 12 ಮಂದಿ ನಿಗಾ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 1859 ಮಂದಿಯನ್ನು ಫಿವರ್ ಕ್ಲೀನಿಕ್ ನಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದೆ.

ಈ ನಡುವೆ ಬಂಟ್ವಾಳದ ಕಸಬ ನಿವಾಸಿ ಕೊರೊನಾ ಸೋಂಕಿತ ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದ್ದು, ಮಹಿಳೆಗೆ ಐಸಿಯುನಲ್ಲಿ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆಯ ವರದಿ ತಿಳಿಸಿದೆ.

ಮಂಗಳೂರು ನಗರದ ಬೋಳೂರಿನ ಮಹಿಳೆಯೊಬ್ಬರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು ನಿಗಾದಲ್ಲಿ ಇರಿಸಲಾಗಿದೆ.

ಉಡುಪಿ ಜಿಲ್ಲೆಯಲ್ಲಿ  ಸದ್ಯ ನೆಮ್ಮದಿಯ ವಾತಾವರಣ ಇದ್ದು ನಿಗಾ ಮುಂದುವರಿದಿದೆ.

ರಾಜ್ಯದಲ್ಲಿ 8 ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 535 ಕ್ಕೆ ಏರಿಕೆಯಾಗಿದೆ. ಇಲ್ಲಿಯವರೆಗೆ 21 ಜನರು ಮೃತಪಟ್ಟಿದ್ದು, 216 ಮಂದಿ ಗುಣಮುಖರಾಗಿದ್ದಾರೆ. ಬುಧವಾರ ತುಮಕೂರಿನಲ್ಲಿ  73 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ.

ಕಾಸರಗೋಡಿನಲ್ಲಿ  ಇಬ್ಬರಿಗೆ ಬುಧವಾರ ಕೊರೊನಾ ವೈರಸ್ ಪಾಸಿಟಿವ್ ಬಂದಿದೆ. ಹೀಗಾಗಿ ಚಿಕಿತ್ಸೆ ಮುಂದುವರಿದಿದೆ. ಕೇರಳದಲ್ಲಿ  ಒಟ್ಟು 10 ಮಂದಿಗೆ ಕೊರೊನಾ ಪಾಸಿಟಿವ್ ಕಂಡುಬಂದಿತ್ತು,

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ
August 4, 2026
9:14 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ
August 4, 2026
2:07 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ
ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror