ದ ಕ ಜಿಲ್ಲೆಯ ವಿವಿದೆಡೆ ಉತ್ತಮ ಮಳೆ | ಗಾಳಿಗೆ ಸುಳ್ಯದ ವಿವಿದೆಡೆ ಹಾನಿ

May 3, 2020
10:43 PM

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಭಾನುವಾರ ಸಂಜೆ ಉತ್ತಮ ಮಳೆಯಾಗಿದೆ. ಗುಡುಗು ಸಹಿತ ಮಳೆಯಾಗಿದೆ. ಸುಳ್ಯ, ಕಡಬ, ಪುತ್ತೂರು ತಾಲೂಕಿನ ವಿವಿದೆಡೆ ಗಾಳಿ ಮಳೆ ಸುರಿದಿದ್ದು, ಗಾಳಿಗೆ ಮರ ಬಿದ್ದು ವಿವಿದೆಡೆ ಹಾನಿಯಾಗಿದೆ.

ಸುಳ್ಯ ತಾಲೂಕಿನ ಸುಬ್ರಹ್ಮಣ್ಯ, ಕೊಲ್ಲಮೊಗ್ರ, ಕಲ್ಲಾಜೆ, ಗುತ್ತಿಗಾರು, ಬಳ್ಪ, ಪಂಜ ಸೇರಿದಂತೆ ಸುಳ್ಯ, ಸಂಪಾಜೆ , ಮರ್ಕಂಜ ಮೊದಲಾದ ಕಡೆಗಳಲ್ಲಿ  ಮಳೆಯಾದರೆ ಕಡಬ ತಾಲೂಕಿನ ವಿವಿದೆಡೆ ಮಳೆಯಾಗಿದೆ. ಪುತ್ತೂರು ತಾಲೂಕಿನ ಹಲವು ಕಡೆಗಳಲ್ಲಿ  ಮಳೆಯಾಗಿದೆ.

ಭಾರೀ ಗಾಳಿಗೆ ಸುಳ್ಯ ತಾಲೂಕಿನ ಹಲವಾರು ಕಡೆ ಮನೆಗಳಿಗೆ ಮರ ಬಿದ್ದು ಹಾನಿಯಾಗಿದ್ದು, ಸುಳ್ಯದ  ಲೂಸಿ ಡಿಸೋಜಾ ಎಂಬವರ ಮನೆಯ ಮಾಡಿಗೆ ಮಾವಿನ ಮರದ ಬೃಹತ್ ಗೆಲ್ಲು ಮುರಿದು ಬಿದ್ದು ಮೇಲ್ಛಾವಣಿ  ಹಾನಿಗೊಂಡಿದೆ.  ಜಯನಗರ ಉಮೇಶ ಎಂಬವರ ಮನೆಯ ಮೇಲೆ ವಿದ್ಯುತ್ ಕಂಬ ಹಾಗೂ ತೆಂಗಿನ ಮರ ಮುರಿದು ಬಿದ್ದು  ಹಾನಿಯಾಗಿದೆ. ನಾರಾಯಣ ಮಣಿಯಾಣಿ ಎಂಬವರ ಮನೆಯ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಉಳಿದಂತೆ ಗ್ರಾಮೀಣ ಭಾಗದಲ್ಲೂ ಹಲವು ಕಡೆ ಸಮಸ್ಯೆಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ
October 7, 2026
6:55 AM
by: ದ ರೂರಲ್ ಮಿರರ್.ಕಾಂ
ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು
October 7, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror