ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರದಂದು 311 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ದಿನಂದ ದಿನಕ್ಕೆ ಪ್ರಕರಣ ಹೆಚ್ಚಾಗುತ್ತಿದ್ದು ಲಾಕ್ಡೌನ್ ನಿಯಮ ಪಾಲನೆಯಾಗಬೇಕು ಎಂಬ ಎಚ್ಚರಿಕೆಯ ಸಂದೇಶ ಇದೀಗ ಕಂಡುಬಂದಿದೆ.
ಶುಕ್ರವಾರದಂದು 311 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಕಂಡುಬರುವ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3074ಕ್ಕೆ ಏರಿಕೆಯಾಗಿದೆ. ಈಗ 1725 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಶುಕ್ರವಾರ 115 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಒಟ್ಟು 1278 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಉಡುಪಿ ಜಿಲ್ಲೆಯಲ್ಲೂ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಶುಕ್ರವಾರ 84 ಜನರಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದ್ದು ಜಿಲ್ಲೆಯಲ್ಲಿ ಒಟ್ಟು 1979 ಪ್ರಕರಣ ದಾಖಲಾಗಿದೆ.
ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ 32 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ರಾಜ್ಯದಲ್ಲಿ 3,693 ಕೊರೋನಾ ಸೋಂಕಿತರು ಪತ್ತೆಯಾಗಿದ್ದಾರೆ. ಶುಕ್ರವಾರ 1028 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೆ 20757 ಮಂದಿ ಗುಣಮುಖರಾಗಿದ್ದಾರೆ. ಶುಕ್ರವಾರ ಬೆಂಗಳೂರು ನಗರದಲ್ಲಿ 2,208 ಪ್ರಕರಣಗಳು ವರದಿಯಾಗಿದೆ. ರಾಜ್ಯದಲ್ಲಿ ಶುಕ್ರವಾರ ಒ ಟ್ಟು 3,693 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಶುಕ್ರವಾರದಂದು ಒಂದೇ ದಿನ ರಾಜ್ಯದಲ್ಲಿ 115 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 1,147 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 75 ಸೋಂಕಿತರು ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.