ದ.ಕ.ಜಿಲ್ಲೆಯಲ್ಲಿ ಒಂದು ವಾರಗಳ ಲಾಕ್ ಡೌನ್ ಸಾಧ್ಯತೆ

July 13, 2020
1:54 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ವೈರಸ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಾಕ್​ಡೌನ್ ಮಾಡುವ ಸಾಧ್ಯತೆ ನಿಚ್ಚಳವಾಗಿದೆ. ಜಿಲ್ಲೆಯಲ್ಲಿ ಒಂದು ವಾರ ಲಾಕ್ ಡೌನ್ ಮಾಡುವಂತೆ ಸಂಸದ ನಳೀನ್ ಕುಮಾರ್ ಕಟೀಲು ಅವರು ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.

ಲಾಕ್​ಡೌನ್ ಮಾಡುವುದಕ್ಕೆ ಅವಕಾಶ ಕೊಡಿ ಎಂದು ಮುಖ್ಯಮಂತ್ರಿಗೆ ಇಂದು ವೀಡಿಯೋ ಕಾನ್ಫರೆನ್ಸ್ ನಲ್ಲಿ ನಳೀನ್ ಕುಮಾರ್ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಯಡಿಯೂರಪ್ಪ ಜಿಲ್ಲಾಡಳಿತವೇ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಸೂಚಿಸಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ನಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಜಿ.ಪಂ ಸಿ.ಇ.ಓ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸೇರಿದಂತೆ ಅಧಿಕಾರಿಗಳು ಪಾಲ್ಗೊಂಡಿದ್ದರು.

ವಿಡಿಯೋ ಕಾನ್ಫರೆನ್ಸ್ ಬಳಿಕ ದ.ಕ. ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ ನಡೆಸಿ ಜಿಲ್ಲೆಯಲ್ಲಿ ಲಾಕ್​ಡೌನ್ ಕುರಿತು ನಿರ್ಧಾರ ಕೈಗೊಳ್ಳಲು ತೀರ್ಮಾನಿಸಲಾಗಿದೆ. ಜನಪ್ರತಿನಿಧಿಗಳು, ಅಧಿಕಾರಿಗಳ ಅಭಿಪ್ರಾಯ ಸಂಗ್ರಹಿಸಿ ಒಮ್ಮತದ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು
August 18, 2026
7:33 AM
by: ದ ರೂರಲ್ ಮಿರರ್.ಕಾಂ
ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ
August 18, 2026
7:10 AM
by: ದ ರೂರಲ್ ಮಿರರ್.ಕಾಂ
₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?
August 17, 2026
7:29 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror