ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೊಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಎಲ್ಲಾ 12 ಮಂದಿಯೂ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಆದರೆ ಶುಕ್ರವಾರದಂದು ಒಂದು ಕೊರೊನಾ ವೈರಸ್ ಪಾಸಿಟಿವ್ ಪತ್ತೆಯಾದ ವ್ಯಕ್ತಿ ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶುಕ್ರವಾರದಂದು ಪಾಸಿಟಿವ್ ಪತ್ತೆಯಾದ ವ್ಯಕ್ತಿ ವೆನ್ ಲಾಕ್ ಆಸ್ಪತ್ರೆಯ ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಎಸ್ ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿರುವವರ ಪೈಕಿ 15 ಮಂದಿ ಬಿಡುಗಡೆಗೊಂಡಿದ್ದಾರೆ. 588 ಮಂದಿ ಹೋಂ ಕ್ವಾರೆಂಟೈನ್ ಮುಗಿಸಿದ್ದಾರೆ. ಇದುವರೆಗೆ 5485 ಮಂದಿ 28 ದಿನಗಳ ಹೋಂ ಕ್ವಾರಂಟೈನ್ ಪೂರೈಸಿದ್ದಾರೆ. ಈ ಪೈಕಿ ಯಾರಲ್ಲೂ ಕೊರೊನಾ ಪಾಸಿಟಿವ್ ಕಂಡುಬಂದಿಲ್ಲ. ಶುಕ್ರವಾರದಂದು ಸುಮಾರು 90 ಮಂದಿಯ ಪರೀಕ್ಷಾ ವರದಿ ಲಭ್ಯವಾಗಿದ್ದು 89 ಮಂದಿಯ ವರದಿ ನೆಗೆಟಿವ್ ಬಂದಿದೆ. 1 ಮಾತ್ರಾ ಪಾಸಿಟಿವ್ ಬಂದಿದ್ದು ಚಿಕಿತ್ಸೆ ನಡೆಯುತ್ತಿದೆ. 28 ಮಂದಿಯನ್ನು ನಿಗಾದಲ್ಲಿ ಇರಿಸಲಾಗಿದೆ.
ಉಡುಪಿಯಲ್ಲಿ ಯಾವುದೇ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ಕಂಡುಬಂದಿಲ್ಲ.
ರಾಜ್ಯದಲ್ಲಿ ಸಂಜೆಯವರೆಗೆ ಒಟ್ಟು 359 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಶುಕ್ರವಾರ ಒಂದೇ ದಿನ ಒಟ್ಟು 44 ಹೊಸ ಪ್ರಕರಣ ಪತ್ತೆಯಾಗಿದೆ.
ಈ ನಡುವೆ ಕಾಸರಗೋಡು ಜಿಲ್ಲೆಯಲ್ಲಿ ಯಾವುದೇ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ. ಜಿಲ್ಲೆಯ ಆರು ಮಂದಿ ಶುಕ್ರವಾರದಂದು ಗುಣಮುಖರಾಗಿದ್ದಾರೆ. ಇಡೀ ಕೇರಳದಲ್ಲಿ ಕೇವಲ 1 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ ಎಂದು ಸರಕಾರದ ವರದಿ ಪ್ರಕಟಿಸಿದೆ.