ದ ಕ ಜಿಲ್ಲೆಯಲ್ಲಿ ಕೊರೊನಾ ವೈರಸ್ ಗೆ ಮಹಿಳೆ ಬಲಿ | ಬೆಳಗ್ಗೆ ಕೊರೊನಾ ಪಾಸಿಟಿವ್ ಪತ್ತೆಯಾದ ಬಂಟ್ವಾಳದ ಮಹಿಳೆ |

April 23, 2020
8:02 PM

ಮಂಗಳೂರು: ಕೊರೊನಾ ವೈರಸ್ ಪಾಸಿಟಿವ್ ಬಂದ ಬಂಟ್ವಾಳದ ಮಹಿಳೆ ಸಂಜೆ ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ  ಕೊರೊನಾ ವೈರಸ್ ಗೆ 2 ನೇ ಬಲಿಯಾದರೆ, ಇಬ್ಬರೂ ಒಂದೇ ಕುಟುಂಬವರು ಎನ್ನುವುದು  ಆಘಾತಕಾರಿ ಸಂಗತಿಯಾಗಿದೆ.

Advertisement
Advertisement
Advertisement

ಬಂಟ್ವಾಳದಲ್ಲಿ ಈ ಹಿಂದೆ ಮೃತಪಟ್ಟಿದ್ದ ಮಹಿಳೆಯ ಅತ್ತೆಯಲ್ಲಿ ಗುರುವಾರ ಬೆಳಗ್ಗೆ ಕೊರೊನಾ ವೈರಸ್ ಪಾಸಿಟಿವ್ ಪತ್ತೆಯಾಗಿತ್ತು. ಹೀಗಾಗಿ ನ್ಲಾಕ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ  ಮಹಿಳೆಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಸಂಜೆ ವೇಳೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಮೂಲಕ ಬಂಟ್ವಾಳದ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ.

Advertisement

ಮೃತ ಮಹಿಳೆ  ಪಾರ್ಶ್ವವಾಯು ಖಾಯಿಲೆಗೆ ಸಂಬಂಧಿಸಿದಂತೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನಲೆಯಲ್ಲಿ  ಬುಧವಾರ ಇವರನ್ನು ವೆನ್ಲಾಕ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಗುರುವಾರ ಬೆಳಗ್ಗೆ ಕೊರೊನಾ ವೈರಸ್ ಪಾಸಿಟಿವ್ ಇರುವುದು  ಕಂಡುಬಂದಿತ್ತು.

ರಾಜ್ಯದಲ್ಲಿ  ಇಂದು ಒಂದೇ 18 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 445ಕ್ಕೆ ಏರಿಕೆಯಾಗಿದೆ.  ಸೋಂಕಿನಿಂದ ಇಲ್ಲಿಯವರೆಗೆ ಬಂಟ್ವಾಳದ ಮಹಿಳೆ ಸೇರಿದಂತೆ 18 ಜನರು ಮೃತಪಟ್ಟಿದ್ದು, 145 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಹಕಾರಿ ಸಂಘದಿಂದ ಗ್ರಾಮೀಣ ಭಾಗದ ಪ್ರತಿಭೆಗಳಿಗೆ “ಉತ್ಕರ್ಷ ಸಹಕಾರ ಟ್ರೋಫಿ” | ಮಾದರಿಯಾದ ಪಂಜದ ಸಹಕಾರಿ ಸಂಘ |
November 1, 2024
3:32 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 01-11-2024 | ಕೆಲವು ಕಡೆ ಗುಡುಗು ಸಹಿತ ಮಳೆ ಸಾಧ್ಯತೆ |
November 1, 2024
12:14 PM
by: ಸಾಯಿಶೇಖರ್ ಕರಿಕಳ
ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವದ ಸುವರ್ಣ ಮಹೋತ್ಸವ ಸಂಭ್ರಮ
November 1, 2024
6:39 AM
by: The Rural Mirror ಸುದ್ದಿಜಾಲ
ಗ್ರಾಮೀಣ ಮಹಿಳೆಯರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ |
November 1, 2024
6:22 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror