ದ ಕ ಜಿಲ್ಲೆಯಲ್ಲಿ ಕೊರೊನಾ ವೈರಸ್ ಪಾಸಿಟಿವ್ ಚಿಕಿತ್ಸೆ ಪಡೆಯುತ್ತಿದ್ದ ಎಲ್ಲರೂ ಗುಣಮುಖ | ಶುಕ್ರವಾರ ಪತ್ತೆಯಾದ ಒಂದು ಪಾಸಿಟಿವ್ ಕೇಸ್ |

April 17, 2020
8:28 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೊಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಎಲ್ಲಾ 12 ಮಂದಿಯೂ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಆದರೆ ಶುಕ್ರವಾರದಂದು ಒಂದು ಕೊರೊನಾ ವೈರಸ್ ಪಾಸಿಟಿವ್ ಪತ್ತೆಯಾದ ವ್ಯಕ್ತಿ ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶುಕ್ರವಾರದಂದು ಪಾಸಿಟಿವ್ ಪತ್ತೆಯಾದ ವ್ಯಕ್ತಿ  ವೆನ್ ಲಾಕ್ ಆಸ್ಪತ್ರೆಯ ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಎಸ್ ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿರುವವರ ಪೈಕಿ 15 ಮಂದಿ ಬಿಡುಗಡೆಗೊಂಡಿದ್ದಾರೆ. 588 ಮಂದಿ ಹೋಂ ಕ್ವಾರೆಂಟೈನ್ ಮುಗಿಸಿದ್ದಾರೆ. ಇದುವರೆಗೆ 5485 ಮಂದಿ 28 ದಿನಗಳ ಹೋಂ ಕ್ವಾರಂಟೈನ್ ಪೂರೈಸಿದ್ದಾರೆ. ಈ ಪೈಕಿ ಯಾರಲ್ಲೂ ಕೊರೊನಾ ಪಾಸಿಟಿವ್ ಕಂಡುಬಂದಿಲ್ಲ. ಶುಕ್ರವಾರದಂದು ಸುಮಾರು 90 ಮಂದಿಯ ಪರೀಕ್ಷಾ ವರದಿ ಲಭ್ಯವಾಗಿದ್ದು 89 ಮಂದಿಯ ವರದಿ ನೆಗೆಟಿವ್ ಬಂದಿದೆ. 1 ಮಾತ್ರಾ ಪಾಸಿಟಿವ್ ಬಂದಿದ್ದು ಚಿಕಿತ್ಸೆ ನಡೆಯುತ್ತಿದೆ. 28 ಮಂದಿಯನ್ನು ನಿಗಾದಲ್ಲಿ ಇರಿಸಲಾಗಿದೆ.

ಉಡುಪಿಯಲ್ಲಿ  ಯಾವುದೇ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ಕಂಡುಬಂದಿಲ್ಲ.

ರಾಜ್ಯದಲ್ಲಿ ಸಂಜೆಯವರೆಗೆ ಒಟ್ಟು 359 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಶುಕ್ರವಾರ ಒಂದೇ ದಿನ ಒಟ್ಟು 44 ಹೊಸ ಪ್ರಕರಣ ಪತ್ತೆಯಾಗಿದೆ.

ಈ ನಡುವೆ ಕಾಸರಗೋಡು  ಜಿಲ್ಲೆಯಲ್ಲಿ ಯಾವುದೇ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ. ಜಿಲ್ಲೆಯ ಆರು ಮಂದಿ ಶುಕ್ರವಾರದಂದು ಗುಣಮುಖರಾಗಿದ್ದಾರೆ.  ಇಡೀ ಕೇರಳದಲ್ಲಿ ಕೇವಲ 1 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ ಎಂದು ಸರಕಾರದ ವರದಿ ಪ್ರಕಟಿಸಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ
ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?
September 2, 2026
10:52 PM
by: ದ ರೂರಲ್ ಮಿರರ್.ಕಾಂ
ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror