ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅವರು ಇಂದು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿದರು.
ಡಾ. ಕೆ.ವಿ. ರಾಜೇಂದ್ರ ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಐಎಎಸ್ ಅಧಿಕಾರಿಯಾಗಿರುವ ಇವರು ಬೆಳಗಾವಿ ಜಿಲ್ಲಾ ಪಂಚಾಯತಿ ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಡಾ ಕೆ ವಿ ರಾಜೇಂದ್ರರವರು ಜಿಲ್ಲೆಯ 130ನೇ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel