ದಲಾಯಿಲಾಮ ಮಂಗಳೂರಿಗೆ ಆಗಮನ

August 29, 2019
4:46 PM

ಮಂಗಳೂರು: ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲಾಯಿಲಾಮ ಅವರು ಇಂದು ಮಂಗಳೂರಿಗೆ ಆಗಮಿಸಿದರು.

ಗುರುವಾರ ಮಧ್ಯಾಹ್ನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಮಂಗಳೂರು ಉಪವಿಭಾಗಾಧಿಕಾರಿ ರವಿ ಚಂದ್ರ ನಾಯ್ಕ್, ಉಪ ಪೊಲೀಸ್ ಆಯುಕ್ತರಾದ ಅರುಣಾಂಶು ಗಿರಿ,ಲಕ್ಷ್ಮೀ ಗಣೇಶ್ ಅವರು ಜಿಲ್ಲಾಡಳಿತದ ಪರವಾಗಿ ಸ್ವಾಗತಿಸಿದರು.

ವಿಮಾನ ನಿಲ್ದಾಣದ ಹೊರಗಡೆ ಟಿಬೇಟಿಯನ್ ಸಾಂಪ್ರದಾಯಿಕ ನೃತ್ಯದ ಮೂಲಕವೂ ಅವರನ್ನು ಸ್ವಾಗತಿಸಲಾಯಿತು‌.ದಲಾಯಿಲಾಮ ಆಗಮನದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ನಗರದ ಖಾಸಗಿ ಹೋಟೆಲ್ ನಲ್ಲಿ ತಂಗಿರುವ ಅವರನ್ನು ಭಾರೀ ಭದ್ರತೆ ಯಲ್ಲಿ ಝೀರೋ ಟ್ರಾಫಿಕ್ ನಲ್ಲಿ ವಿಮಾನ ನಿಲ್ದಾಣದಿಂದ ನಗರಕ್ಕೆ ಕರೆ ತರಲಾಯಿತು‌.

ಮೂರು ದಿನಗಳ ಕಾಲ ಮಂಗಳೂರು ನಗರದಲ್ಲಿ ತಂಗಲಿರುವ ದಲಾಯಿಲಾಮ ಅವರು ಆ. 30 ರಂದು ನಗರದ ಫಾದರ್ ಮುಲ್ಲರ್ ಸಭಾಂಗಣದಲ್ಲಿ ನಡೆಯುವ ನಯನ ಅಖಿಲ ಭಾರತ ಕ್ಯಾಥೊಲಿಕ್ ಶಾಲಾ ಒಕ್ಕೂಟದ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸುವರು. ಆ.31 ರಂದು ಅವರು ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?
March 30, 2026
12:06 PM
by: ಸಾಯಿಶೇಖರ್ ಕರಿಕಳ
ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ
March 30, 2026
7:52 AM
by: ದ ರೂರಲ್ ಮಿರರ್.ಕಾಂ
ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು
March 30, 2026
7:44 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror