ಸವಣೂರು : ಸರ್ವೆ ಎಸ್ ಜಿ ಎಂ ಪ್ರೌಢ ಶಾಲೆಯಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಶಾಲೆಯ ತಂಬಾಕು ನಿಯಂತ್ರಣ ಸಮಿತಿ ವತಿಯಿಂದ ಶಾಲಾ ಸಭಾಂಗಣದಲ್ಲಿ ನಡೆಯಿತು.
Advertisement
ಕಾರ್ಯಕ್ರಮದಲ್ಲಿ ಪುತ್ತೂರು ತಾಲೂಕು ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಸುರೇಶ್ ಕುಮಾರ್ ಮಾತನಾಡಿ, ಮಾದಕ ದ್ರವ್ಯ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಮನೆ ಮನೆಗಳಲ್ಲಿ ತಮ್ಮ ಪೋಷಕರಿಗೂ ಇದರ ಬಗ್ಗೆ ಅರಿವು ಮೂಡಿಸಿ ಸ್ವಸ್ಥ ಸಮಾಜದ ನಿರ್ಮಾಣಕ್ಕೆ ಮುಂದಾಗಬೇಕೆಂದು . ಮಾದಕ ದ್ರವ್ಯಗಳ ಸೇವನೆಯ ಚಟವನ್ನು ಬೆಳೆಸಿಕೊಳ್ಳದೆ ಸದೃಢ ರಾಷ್ಟ್ರ ನಿರ್ಮಾಣಕ್ಕೆ ಕೈಜೋಡಿಸುವ ಕುರಿತಂತೆ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
Advertisement
ಶಾಲಾ ಮುಖ್ಯಶಿಕ್ಷಕಶ್ರೀನಿವಾಸ್ ಯಚ್ ಬಿ ಅವರು ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು.ಹಿರಿಯ ಶಿಕ್ಷಕಿ ಜಯಶ್ರೀ ವಂದಿಸಿದರು. ತಂಬಾಕು ನಿಯಂತ್ರಣ ಸಮಿತಿಯ ಮಾರ್ಗದರ್ಶಿ ಶಿಕ್ಷಕಿ ಪುಷ್ಪಾ ಕಾರ್ಯಕ್ರಮ ನಿರೂಪಿಸಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement