ಸುಳ್ಯ: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಇರಲಿಲ್ಲ. ಇದೀಗ ಜೂ.1 ರಿಂದ ದೇವಸ್ಥಾನಗಳಿಗೆ ಭಕ್ತಾದಿಗಳಿಗೆ ಪ್ರವೇಶಕ್ಕೆ ಅವಕಾಶ ನೀಡಲಾಗುವುದು ಎಂದು ಈ ಹಿಂದೆ ತಿಳಿಸಲಾಗಿತ್ತು. ಆದರೆ ಲಾಕ್ಡೌನ್ 5.0 ದ ಪ್ರಕಾರ ಜೂ.8 ರಿಂದ ದೇವಸ್ಥಾನಗಳಲ್ಲಿ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದು ತಿಳಿಸಲಾಗಿದೆ. ಈ ನಡುವೆ ದೇವಸ್ಥಾನಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಮಾರ್ಕಿಂಗ್ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಸಹಿತ ವಿವಿಧ ದೇವಸ್ಥಾನಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ವ್ಯವಸ್ಥೆ ಮಾಡಲಾಗುತ್ತಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement