ದೇವರಕಾನ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ

May 24, 2019
3:57 PM

ನಿಂತಿಕಲ್ಲು :  ಮುರುಳ್ಯ ಗ್ರಾಮದ ದೇವರಕಾನ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ, ಜಾತ್ರೋತ್ಸವವು ಬ್ರಹ್ಮಶ್ರೀ ವೇ.ಮೂ. ನೀಲೇಶ್ವರ  ದಾಮೋದರ ತಂತ್ರಿಯವರ ನೇತೃತ್ವದಲ್ಲಿ ನಡೆಯಿತು.

ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಸಾರ್ವಜನಿಕ ಸತ್ಯನಾರಾಯಣ ಪೂಜೆ, ಸಾಮೂಹಿಕ ಪ್ರಾರ್ಥನೆ, ಪುಣ್ಯಾಹಶುದ್ಧಿ, ಪ್ರಸಾದ ಶುದ್ಧಿ, ರಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತು ಬಲಿ, ಮಹಾಪೂಜೆ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು.  ಬಳಿಕ ದೇವರ ಬಲಿ ಹೊರಟು ದರ್ಶನ ಬಲಿ ನಡೆಯಿತು. ಬೆಳ್ಳಾರೆಯ ಯಕ್ಷರಂಗದವರಿಂದ ವೀರಮಣಿಕಾಳಗ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು.

ದೇವಳದ ಪ್ರಧಾನ ಅರ್ಚಕ ವೇ.ಮೂ. ಕೆ ಸೂರ್ಯನಾರಾಯಣ ಭಟ್, ಪೂದೆ ಸುಬ್ರಹ್ಮಣ್ಯ ಉಪಾಧ್ಯಾಯ, ಸೇವಾ ಟ್ರಸ್ಟ್ ಅಧ್ಯಕ್ಷ ಡಾ.ಪಿ.ಆರ್ ಭಟ್, ಕಾರ್ಯದರ್ಶಿ ಅನೂಪ್ ಬಿಳಿಮಲೆ, ಉಪಾಧ್ಯಕ್ಷ ಭಾಸ್ಕರ ಮುರುಳ್ಯ, ಕೇಶವ ಭಟ್ ಮಾನಸವನ, ಕೋಶಾಧಿಕಾರಿ ಜನಾರ್ಧನ ಅಲೆಕ್ಕಾಡಿ, ಸದಸ್ಯರು, ಉತ್ಸವ ಸಮಿತಿ ಅಧ್ಯಕ್ಷ ದಿವಾಕರ ರೈ ಪೊಗ್ಗೊಲಿ, ಪದಾಧಿಕಾರಿಗಳು, ಉಪಸಮಿತಿ ಪದಾಧಿಕಾರಿಗಳು, ನೂರಾರು ಭಕ್ತರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಧರ್ಮಸ್ಥಳದಲ್ಲಿ ಭಕ್ತಸಾಗರ – ರಸ್ತೆಗಳಲ್ಲಿ ವಾಹನ ದಟ್ಟಣೆ
June 21, 2026
2:52 PM
by: ದ ರೂರಲ್ ಮಿರರ್.ಕಾಂ
“ಅನ್ನವೇ ಪರಮಾತ್ಮ” ಸಂದೇಶದೊಂದಿಗೆ ಗೋಕರ್ಣದಲ್ಲಿ ಈ ಬಾರಿ ರಾಘವೇಶ್ವರ ಶ್ರೀಗಳಿಂದ ‘ಅನ್ನಬ್ರಹ್ಮ ಚಾತುರ್ಮಾಸ್ಯ’
June 20, 2026
7:10 AM
by: ದ ರೂರಲ್ ಮಿರರ್.ಕಾಂ
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?
June 7, 2026
7:32 PM
by: ಮಿರರ್‌ ಡೆಸ್ಕ್
ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!
April 15, 2026
8:02 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror