ದೇಶದ ಸಿಎಂ ಗಳ ಜೊತೆ ಪಿಎಂ ಸಭೆ | ಹಳ್ಳಿಗಳಿಗೂ ಕೊರೊನಾ ಹರಡದಂತೆ ನೋಡಿಕೊಳ್ಳಬೇಕು |

May 11, 2020
6:08 PM

ನವದೆಹಲಿ: ಹಳ್ಳಿಗಳಿಗೂ ಕೊರೊನಾ ವೈರಸ್ ಹರಡದಂತೆ ನೋಡಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ನಡೆಯುತ್ತಿರುವ ವಿಡಿಯೋ ಕಾನ್ಫರೆನ್ಸ್ ನಲ್ಲಿ  ಹೇಳಿದ್ದಾರೆ.

 

ಗ್ರಾಮೀಣ ಭಾಗಕ್ಕೆ ಕೊರೊನಾ ವೈರಸ್ ಹರಡದು ಎಂಬ ವಿಶ್ವಾಸ ಇದೆ, ಆದರೆ ಹರಡದಂತೆ ಸೂಕ್ತ ಎಚ್ಚರಿಕೆ ತೆಗೆದುಕೊಳ್ಳಬೇಕಾಗಿದೆ.  ವಲಸೆ ಕಾರ್ಮಿಕರಿಗೆ ಸಂಕಷ್ಟ ಇದೆ ನಿಜ, ಅವರು  ತಮ್ಮ ಮನೆಗೆ ತೆರಳುವುದು ಮುಖ್ಯವಾಗಿದೆ. ಇದಕ್ಕಾಗಿ ಸಾಕಷ್ಟು ಮುಂಜಾಗ್ರತೆ ಕೈಗೊಂಡು ಊರುಗಳಿಗೆ ತೆರಳಲು ಅವಕಾಶ ಮಾಡಿಕೊಡಲಾಗಿದೆ, ಇದಕ್ಕಾಗಿಯೇ ಕೆಲವು ಬದಲಾವಣೆ ಮಾಡಲಾಯಿತು ಎಂದ ಪ್ರಧಾನಿ ನರೇಂದ್ರ ಮೋದಿ ಅವರು  ಕೊರೊನಾ ವೈರಸ್ ಹರಡದಂತೆ ತಡೆಯುವಲ್ಲಿ ಭಾರತ ಇರುವರೆಗೆ ಯಶಸ್ವಿಯಾಗಿದೆ. ಇದು ಎಲ್ಲಾ ರಾಜ್ಯಗಳ ಸಿಎಂ ಗಳಿಂದ ಸಾಧ್ಯವಾಯಿತು ಎಂದು ಪ್ರಧಾನಿ ಹೇಳಿದರು. ಆದರೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇದ್ದರೆ ಹಾಗೂ ಮುಂಜಾಗ್ರತಾ ಕ್ರಮ ಕೈಗೊಳ್ಳದೇ ಇದ್ದರೆ ದುರಂತ ಎದುರಾಗಲಿದೆ ಎಂದೂ ಇದೇ ವೇಳೆ ಎಚ್ಚರಿಸಿದರು.

ಮುಖ್ಯಮಂತ್ರಿಗಳ ಜೊತೆಗೆ ಸಂವಾದ ಮುಂದುವರಿದಿದ್ದು ಕೆಲವು ರಾಜ್ಯಗಳ ಮುಖ್ಯಮಂತ್ರಿಗಳು ಲಾಕ್ಡೌನ್ ಮುಂದುವರಿಕೆಗೆ ಒಲವು ತೋರಿದ್ದರೆ ಇನ್ನೂ ಕೆಲವು ರಾಜ್ಯದ ಮುಖ್ಯಮಂತ್ರಿಗಳು ಆಯಾ ರಾಜ್ಯಗಳ ಸಿಎಂಗಳಿಗೆ ಬಿಟ್ಟುಬಿಡಲು ಮನವಿ ಮಾಡಿದ್ದಾರೆ.

(ಮೂಲ : ANI )

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ
March 4, 2026
10:56 AM
by: ಮಿರರ್‌ ಡೆಸ್ಕ್
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು
March 3, 2026
10:34 PM
by: ಮಿರರ್‌ ಡೆಸ್ಕ್
ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು
March 3, 2026
9:51 PM
by: ಮಿರರ್‌ ಡೆಸ್ಕ್
2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ
March 3, 2026
9:53 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror