ದೇಶಾದ್ಯಂತ ಎನ್‌ಆರ್‌ಸಿ ಜಾರಿಗೆ ಸದ್ಯ ಚಿಂತನೆ ನಡೆಯುತ್ತಿಲ್ಲ: ಅಮಿತ್ ಶಾ

December 25, 2019
11:42 AM

ಹೊಸದಿಲ್ಲಿ: ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ)ಯನ್ನು ಅಖಿಲ ಭಾರತ ಮಟ್ಟದಲ್ಲಿ ಜಾರಿಗೊಳಿಸುವ ಬಗ್ಗೆ ಸದ್ಯ ಯಾವುದೇ ಚಿಂತನೆ ನಡೆಯುತ್ತಿಲ್ಲವೆಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯನ್ನು ಕೇಂದ್ರ ಗೃಹ ಸಚಿವ ಮಂಗಳವಾರ ಸಮರ್ಥಿಸಿಕೊಂಡಿದ್ದಾರೆ. ಎನ್‌ಸಿಆರ್ ಅನುಷ್ಠಾನದ ಬಗ್ಗೆ ಸಂಸತ್‌ನಲ್ಲಾಗಲಿ ಅಥವಾ ಕೇಂದ್ರ ಸಂಪುಟದಲ್ಲಾಗಲಿ ಯಾವುದೇ ಚರ್ಚೆಗಳು ನಡೆದಿಲ್ಲವೆಂದು ಅವರು ಹೇಳಿದ್ದಾರೆ.

ಎನ್‌ಆರ್‌ಸಿಯನ್ನು ಭಾರತದಾದ್ಯಂತ ಜಾರಿಗೊಳಿಸುವ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲವೆಂದು ದಿಲ್ಲಿಯಲ್ಲಿ ಇತ್ತೀಚೆಗೆ ನಡೆದ ರ‍್ಯಾಲಿಯೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟಪಡಿಸಿದ್ದರು. ಆದರೆ ಅಮಿತ್ ಶಾ ಇದಕ್ಕೂ ಮುನ್ನ ನೀಡಿದ ಹೇಳಿಕೆಯೊಂದರಲ್ಲಿ ಕೇಂದ್ರ ಸರಕಾರವು ದೇಶಾದ್ಯಂತ ಎನ್‌ಸಿಆರ್ ಅನ್ನು ಜಾರಿಗೊಳಿಸಲಿದೆ ಎಂದು ಹೇಳಿದ್ದರು. ಈ ಇಬ್ಬರು ನಾಯಕರು ಎನ್‌ಸಿಆರ್ ಬಗ್ಗೆ ನೀಡಿದ ವ್ಯತಿರಿಕ್ತ ಹೇಳಿಕೆಗಳ ಬಗ್ಗೆ ಗೊಂದಲ ಸೃಷ್ಟಿಯಾಗಿತ್ತು. ಈ ಹಿನ್ನಲೆಯಲ್ಲಿ ಅಮಿತ್ ಶಾ ಇದೀಗ ಸ್ಪಷ್ಟನೆ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?
April 11, 2026
1:52 PM
by: ಸಾಯಿಶೇಖರ್ ಕರಿಕಳ
ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ
April 10, 2026
3:11 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!
April 9, 2026
1:23 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror