ದೇಸೀ ಆಟಗಳು ಸೃಜನಶೀಲತೆಯನ್ನು ಹೆಚ್ಚಿಸುತ್ತವೆ – ಹರಿಣಿ ಪುತ್ತೂರಾಯ

August 18, 2019
4:00 PM

ಸುಳ್ಯ: ಆಧುನಿಕ ಯುಗದ ಭರಾಟೆಯಲ್ಲಿ ದೇಸೀ ಆಟಗಳು ಮರೆತು ಹೋಗುತ್ತಿವೆ. ಸೃಜನಶೀಲತೆಯನ್ನು ಹೆಚ್ಚಿಸುವ, ಮನುಷ್ಯ-ಮನುಷ್ಯನನ್ನು ಹತ್ತಿರಕ್ಕೆತರುವ ಚೆನ್ನೆಮಣೆಯಂತಹ ಆಟಗಳನ್ನು ನೆನಪಿಸುವ ಮತ್ತುಅದನ್ನು ಪರಿಚಯಿಸುವ ರೆಡ್‍ಕ್ರಾಸ್‍ ಘಟಕದ ಕಾರ್ಯ ಶ್ಲಾಘನೀಯ ಎಂದು ಸುಳ್ಯದ ನೆಹರೂ ಮೆಮೋರಿಯಲ್ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯ ಅಭಿಪ್ರಾಯಪಟ್ಟರು.

Advertisement
Advertisement

ಅವರು ಸುಳ್ಯದ ನೆಹರೂ ಮೆಮೋರಿಯಲ್‍ ಕಾಲೇಜಿನ ಯುವರೆಡ್‍ಕ್ರಾಸ್‍ಘಟಕ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಹಮ್ಮಿಕೊಂಡ“ಆಟಿಯ ನೆನಪು”ಕಾರ್ಯಕ್ರಮದ ಪ್ರಯುಕ್ತ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರಿಗೆ ಹಮ್ಮಿಕೊಂಡ ಚೆನ್ನೆಮಣೆ ಸ್ಪರ್ಧೆಯನ್ನುಉದ್ಘಾಟಿಸಿ ಮಾತನಾಡಿದರು.ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಐಕ್ಯೂಎಸಿ ಸಂಚಾಲಕಿ ರತ್ನಾವತಿ ಡಿ ಮಾತನಾಡಿ, ಮಾನವೀಯ ಸಂಬಂಧವನ್ನು ಗಟ್ಟಿಗೊಳಿಸುವ ಆಟ ಚೆನ್ನೆಮಣೆ. ಇಂತಹ ಸ್ಪರ್ಧೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಾಗ ಮನಸ್ಸು ಉಲ್ಲಸಿತಗೊಳ್ಳುತ್ತದೆ ಎಂದರು. ಕಾರ್ಯಕ್ರಮಾಧಿಕಾರಿಡಾ. ಅನುರಾಧಾಕುರುಂಜಿ ಮಾತನಾಡಿಜನಪದ ಆಟ ಹಾಗೂ ಆಚರಣೆಗಳು ಗ್ರಾಮೀಣಜನತೆಯ ಬದುಕಿನಲ್ಲಿ ಹಾಸುಹೊಕ್ಕಾಗಿರುತ್ತದೆ.ಅದರಲ್ಲೂಆಟಿ ತಿಂಗಳಲ್ಲಿ ಆಡುವಚೆನ್ನೆಮಣೆ ಆಟ ಬಾಂಧವ್ಯವನ್ನು ಬೆಸೆಯುವ ಕೆಲಸ ಮಾಡುತ್ತದೆ. ಆ ನಿಟ್ಟಿನಲ್ಲಿ ನಮ್ಮ ಸಂಸ್ಕೃತಿಯನ್ನು ಮಕ್ಕಳಿಗೆ ಪರಿಚಯಿಸಿ ಅದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿಇಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತೇವೆಎಂದರು.

Advertisement

ಕಾಲೇಜಿನ ವಿದ್ಯಾರ್ಥಿ ಸಂಘದಅಧ್ಯಕ್ಷ ಶ್ರೀಕೃಷ್ಣಪ್ರಸಾದ್, ರೆಡ್‍ಕ್ರಾಸ್‍ಘಟಕ ನಾಯಕರಾದ ಭುವನ್ ಪಿ, ಕುಮುದಾ ಬಿ ಎಸ್, ಮಹೇಶ್ವರಿ ಪಿ, ಬ್ರಿಜೇಶ್ ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮೇಘಾಕೃಷ್ಣ ಪ್ರಾರ್ಥಿಸಿದ ಕಾರ್ಯಕ್ರಮದಲ್ಲಿ ಜಯಮಾಲ ಸ್ವಾಗತಿಸಿ ರಚನಾ ಬಿ ಎನ್ ವಂದಿಸಿದರು. ಹವ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |
May 6, 2024
11:07 AM
by: ಸಾಯಿಶೇಖರ್ ಕರಿಕಳ
ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |
May 5, 2024
3:21 PM
by: ಮಹೇಶ್ ಪುಚ್ಚಪ್ಪಾಡಿ
Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |
May 5, 2024
2:10 PM
by: ಸಾಯಿಶೇಖರ್ ಕರಿಕಳ
Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ
May 4, 2024
12:30 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror