ಧರ್ಮಸ್ಥಳದ ಸೇವಾ ಕಾರ್ಯಗಳಿಂದ ಸರ್ಕಾರಕ್ಕೆ ಪ್ರೇರಣೆ – ಡಿ ವಿ ಸದಾನಂದ ಗೌಡ

January 24, 2020
8:23 PM

ಧರ್ಮಸ್ಥಳ : ಕೇವಲ ರಸ್ತೆ, ಆಸ್ಪತ್ರೆ, ಶಾಲೆ ಅಭಿವೃದ್ಧಿ. ಆದರೆ ಅದು ಪ್ರಗತಿಯ ದ್ಯೋತಕವಲ್ಲ. ಪ್ರತಿಯೊಬ್ಬ ವ್ಯಕ್ತಿಯೂ ಸ್ವ-ಸಾಮಥ್ರ್ಯದಿಂದ, ಸರ್ಕಾರದ ಹಂಗಿಲ್ಲದೆ ಸಮಾಜದ ಸತ್ವಯುತ ಶಕ್ತಿಯಾಗಿ ಬೆಳೆದರೆ ಅದು ನಿಜವಾದ ಪ್ರಗತಿಯಾಗಿದೆ. ಸಮಾಜದ ಅಭಿವೃದ್ಧಿಯ ಮೂಲಮಂತ್ರ ವಾಗಿದೆ.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅದ್ಭುತ ಯೋಜನೆಯಾಗಿದ್ದು ಸರ್ಕಾರ ಕೂಡಾ ಹೆಗ್ಗಡೆಯವರಿಂದ ಮಾರ್ಗದರ್ಶನ, ಪ್ರೇರಣೆ ಪಡೆಯುತ್ತದೆ ಎಂದು ಕೇಂದ್ರ ಸರ್ಕಾರದ ರಾಸಾಯನಿಕ ಮತ್ತು ಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದರು.
ಧರ್ಮಸ್ಥಳದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಆಡಳಿತ ಕಚೇರಿ “ಧರ್ಮಶ್ರೀ”ಯ ನೂತನ ವಿಸ್ತøತ ಕಟ್ಟಡವನ್ನು ಶುಕ್ರವಾರ ಅವರು ಉದ್ಘಾಟಿಸಿ ಮಾತನಾಡಿದರು. ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ ಮಹಿಳಾ ಸಬಲೀಕರಣದೊಂದಿಗೆ ಗ್ರಾಮೀಣ ಪ್ರದೇಶದ ಸರ್ವತೋಮುಖ ಪ್ರಗತಿಯೊಂದಿಗೆ ಸಾಮಾಜಿಕ ಸಾಮರಸ್ಯದ ಜೀವನಕ್ಕೆ ಪ್ರೇರಕ ಶಕ್ತಿಯಾಗಿದೆ. ಧರ್ಮಸ್ಥಳ ಧಾರ್ಮಿಕ ಶ್ರದ್ಧಾ ಕೇಂದ್ರ ಮಾತ್ರವಲ್ಲ, ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಯೊಂದಿಗೆ ಪ್ರತಿಯೊಬ್ಬ ವ್ಯಕ್ತಿಯ ಉಜ್ವಲ ಭವಿಷ್ಯವನ್ನು ರೂಪಿಸುವ ಕೇಂದ್ರವಾಗಿದೆ ಎಂದು ಅವರು ಹೇಳಿದರು.
ನೂತನ ಕಟ್ಟಡದ ವಿನ್ಯಾಸ ಮತ್ತು ವ್ಯವಸ್ಥೆಯನ್ನು ಶ್ಲಾಘಿಸಿದ ಅವರು ಆಧುನಿಕ ತಂತ್ರಜ್ಞಾನ ಬಳಕೆಯಿಂದ ಆಡಳಿತದಲ್ಲಿ ಪಾರದರ್ಶಕತೆ ಹೆಚ್ಚಾಗುತ್ತದೆ. ಮಾನವೀಯ ಸಂಬಂಧವೂ ಬೆಳೆಯುತ್ತದೆ ಎಂದರು.

Advertisement
Advertisement

ತ್ಯಾಜ್ಯ ಸಂಗ್ರಹಣಾ ಬುಟ್ಟಿಗಳನ್ನು ವಿತರಿಸಿದ ಮುಜರಾಯಿ ಮತ್ತು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಸರ್ಕಾರದ ಜನಮಂಗಳ ಕಾರ್ಯಗಳಿಗೆ ಹೆಗ್ಗಡೆಯವರೇ ಪ್ರೇರಕ ಶಕ್ತಿಯಾಗಿದ್ದಾರೆ. ಧರ್ಮಸ್ಥಳದ ಮಾದರಿಯಲ್ಲೆ ಏಪ್ರಿಲ್ 26 ರಂದು ರಾಜ್ಯದ 110 ದೇವಸ್ಥಾನಗಳಲ್ಲಿ ಸರ್ಕಾರದ ವತಿಯಿಂದ ಸಾಮೂಹಿಕ ವಿವಾಹ ನಡೆಸಲಾಗುವುದು. ಯಾವುದಾದರೂ ಒಂದು ದೇವಸ್ಥಾನದ ಸಾಮೂಹಿಕ ವಿವಾಹಕ್ಕೆ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರು ಬಂದು ಆಶೀರ್ವದಿಸಬೇಕು ಎಂದು ಸಚಿವರು ಅವರನ್ನು ಆಮಂತ್ರಿಸಿದರು.
ಎಲ್ಲಾ ದೇವಸ್ಥಾನಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವುದರೊಂದಿಗೆ, ಸುಂದರವಾಗಿದ್ದು ಭಕ್ತರನ್ನು ಆಕರ್ಷಿಸುವ ಕೇಂದ್ರಗಳಾಗಬೇಕು ಎಂದು ಅವರು ಸಲಹೆ ನೀಡಿದರು.

ಜಲಾಭಿಷೇಕ ಯೋಜನೆ:ನೂತನ ಜಲಾಭಿಷೇಕ ಯೋಜನೆಯಡಿ ರಾಜ್ಯದಲ್ಲಿ ದೇವಸ್ಥಾನಗಳ ಬಳಿ ಇರುವ ಕೆರೆಗಳನ್ನು (ಪುಷ್ಕರಣಿ) ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ಶುಚೀಕರಣಗೊಳಿಸಲಾಗುವದು ಎಂದು ಸಚಿವರು ಪ್ರಕಟಿಸಿದರು.

ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ರಾಜ್ಯದೆಲ್ಲೆಡೆ 1500 ಮಂದಿ ಸೇವಾ ಪ್ರತಿನಿಧಿಗಳು ಸೇವೆ ಮಾಡಿ ಯೋಜನೆಯನ್ನು ಯಶಸ್ವಿಗೊಳಿಸಿದ್ದಾರೆ. ಜನರ ವ್ಯಕ್ತಿತ್ವದಲ್ಲಿ, ಜೀವನ ಶೈಲಿಯಲ್ಲಿ ಸುಧಾರಣೆಯಾಗಿ ಸಾಮಾಜಿಕ ಪರಿವರ್ತನೆಯಾಗಿದೆ. ದುಶ್ಚಟಗಳು ದೂರವಾಗಿವೆ. ಶುಚಿತ್ವದ ಕಲ್ಪನೆ ಸಾರ್ವತ್ರಿಕವಾಗಿ ಮೂಡಿ ಬಂದಿದೆ. ಫಲಾನುಭವಿಗಳೆಲ್ಲ ಪ್ರಗತಿಯ ಹರಿಕಾರರಾಗಿ ಯೋಜನೆಯ ಯಶಸ್ಸಿನ ಪಾಲುದಾರರಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಜನಮಂಗಳ ಕಾರ್ಯಕ್ರಮದಡಿಯಲ್ಲಿ ವಿಶೇಷ ಚೇತನರಿಗೆ ಶಾಸಕ ಹರೀಶ್ ಪೂಂಜ ಸಲಕರಣೆಗಳನ್ನು ವಿತರಿಸಿದರು. ಹೇಮಾವತಿ ವೀ. ಹೆಗ್ಗಡೆಯವರು ಆಶಯ ಭಾಷಣ ಮಾಡಿದರು. ಕಟ್ಟಡ ನಿರ್ಮಾಣದ ರೂವಾರಿ ಡಿ. ಹರ್ಷೇಂದ್ರ ಕುಮಾರ್, ವಾಸ್ತು ಶಿಲ್ಪಿ ಬ್ರಹ್ಮೆ ಮತ್ತು ಗೋಪಾಲ ಮೆನನ್ ಅವರನ್ನು ಗೌರವಿಸಲಾಯಿತು.

ಡಾ. ಎಲ್.ಎಚ್. ಮಂಜುನಾಥ್ ಸ್ವಾಗತಿಸಿದರು. ಯೋಜನಾಧಿಕಾರಿ ಜಯಕರ ಶೆಟ್ಟಿ ಧನ್ಯವಾದವಿತ್ತರು. ಪ್ರಾದೇಶಿಕ ನಿರ್ದೇಶಕ ಶ್ರೀಹರಿ ಮತ್ತು ಮಮತಾ ರಾವ್ ಕಾರ್ಯಕ್ರಮ ನಿರ್ವಹಿಸಿದರು.

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ
January 30, 2026
8:10 AM
by: ದ ರೂರಲ್ ಮಿರರ್.ಕಾಂ
“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ
January 30, 2026
8:05 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ
January 30, 2026
7:57 AM
by: ಮಿರರ್‌ ಡೆಸ್ಕ್
ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
January 30, 2026
7:27 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror