ಧರ್ಮಸ್ಥಳದಲ್ಲಿ ನೇತ್ರಾವತಿ ನದಿಯಲ್ಲಿ ಸ್ವಚ್ಛತಾ ಕಾರ್ಯ

February 3, 2020
7:10 AM

ಧರ್ಮಸ್ಥಳ:  ಸೇವಕರ ತಂಡ “ಶ್ರೀ ಜನಾರ್ದನ ಸ್ವಾಮಿ ಸೇವಾ ಸಮಿತಿ” ವತಿಯಿಂದ ಧರ್ಮಸ್ಥಳದಲ್ಲಿ ಜೀವನದಿ ನೇತ್ರಾವತಿಯ ಸ್ವಚ್ಛತಾ ಕಾರ್ಯವನ್ನು  ಮಾಡಿದರು. ಬೆಳಿಗ್ಗೆಯಿಂದ  ಮಧ್ಯಾಹ್ನ 2 ಗಂಟೆವರೆಗೆ ಸ್ವಚ್ಛತೆ ನಡೆಸಿ 6 ಲೋಡ್ ಬಟ್ಟೆ ತ್ಯಾಜ್ಯ, 2 ಲೋಡ್‍ ಕಟ್ಟಿಗೆ ಹಾಗೂ 8 ಲೋಡ್‍ ತ್ಯಾಜ್ಯ ತೆರವುಗೊಳಿಸಲಾಯಿತು.

ಉಜಿರೆಯಲ್ಲಿ ಕಳೆದ ಜ.21 ರಂದು ಉಜಿರೆ ಜಾತ್ರೆ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆಗೊಂಡ ಈ ಸ್ವಚ್ಛತಾ ತಂಡದಲ್ಲಿ 600 ಮಂದಿ ಇದ್ದಾರೆ. ಕಳೆದ ಜೂನ್ ತಿಂಗಳಿನಲ್ಲಿ ಮುಂಡಾಜೆ, ಚಾರ್ಮಾಡಿ ಪರಿಸರದಲ್ಲಿ ನೆರೆಪೀಡಿತರಿಗೆ ಸಂಕಷ್ಟದ ಸಂದರ್ಭ ಸಹಕರಿಸಿದ ತಂಡ ಪ್ರಾಕೃತಿಕ ವಿಕೋಪಗಳು ಮುಂದೆ ಸಂಭವಿಸಿದಾಗ ನೆರವು ನೀಡಲು ಹಾಗೂ ಸೇವೆ ನೀಡಲು 600 ಜನರ ವ್ಯವಸ್ಥಿತ ಸ್ವಯಂ ಸೇವಕರತಂಡವನ್ನು ರಚಿಸಿದೆ. ಸೇವಾ ಸಮಿತಿಯ ಪ್ರಥಮ ಸೇವೆಯಾಗಿ ಭಾನುವಾರ ಧರ್ಮಸ್ಥಳದಲ್ಲಿ ಜೀವನದಿ ನೇತ್ರಾವತಿಯ ಸ್ವಚ್ಛತಾಕಾರ್ಯವನ್ನು 500 ಮಂದಿ ಸ್ವಯಂ ಸೇವಕರತಂಡದವರು ಪ್ರಥಮ ಸೇವೆಯಾಗಿ ಮಾಡಿದರು.

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ. ಹೆಗ್ಗಡೆ, ಡಿ. ಹರ್ಷೇಂದ್ರಕುಮಾರ್, ಡಾ. ಬಿ. ಯಶೋವರ್ಮ ಭೇಟಿ ನೀಡಿ ಸೇವಾ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಉಜಿರೆಯ ಹಿರಿಯ ಸಮಾಜ ಸೇವಾಕರ್ತರಾಮಚಂದ್ರ ಶೆಟ್ಟಿ ಸ್ವಚ್ಛತಾಕಾರ್ಯ ಉದ್ಘಾಟಿಸಿದರು. ಶರತ್‍ಕೃಷ್ಣ ಪಡ್ವೆಟ್ನಾಯ, ಅನ್ನಪೂರ್ಣಛತ್ರದ ಮ್ಯಾನೇಜರ್ ಸುಬ್ರಹ್ಮಣ್ಯ ಪ್ರಸಾದ್, ಉಜಿರೆಯ ಉದ್ಯಮಿರಾಜೇಶ್ ಪೈ ಹಾಗೂ ಮೋಹನ ಕುಮಾರ್ ನೇತೃತ್ವದಲ್ಲಿ ಸ್ವಚ್ಛತಾ ಸೇವೆ ನಡೆಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?
August 17, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ
August 16, 2026
12:00 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ
August 15, 2026
2:07 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror